Home ಕರಾವಳಿ Archive by category ಮಂಗಳೂರು (Page 307)

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು

ಆಸ್ಕರ್ ಫೆರ್ನಾಂಡಿಸ್‌ರವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

ಅನಾರೋಗ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ವಿಚಾರಿಸಿದರು. ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸಿದ ಇವರಿಬ್ಬರು ಆಸ್ಕರ್ ಫೆರ್ನಾಂಡಿಸ್ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು

ಬಸ್ ಚಲಾಯಿಸುವಾಗಲೇ ಕುಸಿದ ಚಾಲಕ : ತಪ್ಪಿದ ದುರಂತ

ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಅಧ್ಯಯನ ನಡೆಸುತ್ತಿದ್ದು,

ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿ ಕಾಣಿಕೆ ಡಬ್ಬಿ ಕಳವು; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿರುವ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ‌. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ

ಉದ್ಘಾಟನೆಗೆ ಮುನ್ನವೇ ಕುಸಿಯುವ ಭೀತಿಯಲ್ಲಿ ಅವರಾಲು-ಮುಲ್ಕಿ ಸೇತುವೆ

ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಅಂತರಾಷ್ಟ್ರೀಯ ಮಾನ್ಯತೆಗೆ ದಿಟ್ಟ ಹೆಜ್ಜೆ: ದಯಾನಂದ ಕತ್ತಲ್‌ ಸಾರ್‌

ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ

ಕೊಂಚಾಡಿ ರಸ್ತೆಯಲ್ಲಿ ಗಲೀಜು ನೀರು: ಪಾಲಿಕೆಯ ಶವ ನೇತು ಹಾಕಿ ಚಳುವಳಿ

ಕೊಂಚಾಡಿಯ ಕೆನರಾ ಅಪಾರ್ಟ್ಮೆಂಟ್ ನವರು ಸಾರ್ವಜನಿಕ ರಸ್ತೆಗೆ ಮಲ ಮಿಶ್ರಿತ ಗಲೀಜು ನೀರನ್ನು ಬಿಡುತ್ತಿರುವ ಬಗ್ಗೆ ಹಲವಾರು ಬಾರಿ ದೂರು, ಮನವಿಗಳನ್ನು ನೀಡಿದರು, ಕ್ರಮ ಕೈಗೊಳ್ಳದ ನಗರ ಪಾಲಿಕೆಯ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ನಡೆಸಿದ ನಂತರವೂ ಮತ್ತದೇ ರೀತಿಯಲ್ಲಿ ಗಲೀಜು ನೀರು ಸಾರ್ವಜನಿಕ ರಸ್ತೆಗೆ ಬಿಡುತ್ತಿರುವ ವಿರುದ್ಧ ಇಲ್ಲಿನ ಜನಪರ ಸಂಘಟನೆಗಳು ನಗರ ಪಾಲಿಕೆಯವರೇ ಗಲೀಜು ನೀರನ್ನು ಸಾರ್ವಜನಿಕ ರಸ್ತೆಗೆ ಬಿಡಲು ಸಹಕರಿಸುತ್ತಿದ್ದಾರೆಂದು ಆರೋಪಿಸಿ