Mangalore: College of Aviation Studies, Srinivas University had conducted Online Video Making Competition on behalf of World Environment Day for B.TECH (Aircraft Maintenance Engineering) Students by NSS and Social Service Wing on Wednesday 2nd June 2021 The students were asked to make a video
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಶಿಕ್ಷಕರನ್ನು ರಾಜ್ಯ ಸರ್ಕಾರ ಭಿಕ್ಷುಕರನ್ನಾಗಿ ಮಾಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಈ ಕುರಿತು ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನ ಲಾಕ್‌ಡೌನ್ ಪ್ಯಾಕೇಜ್‌ನಲ್ಲಿ ಕೂಡ ಶಿಕ್ಷಕರನ್ನ ಕಡೆಗಣಿಸಲಾಗಿದೆ. ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು.
ಶೀತ, ಜ್ವರ ಇದ್ದವರು ಕೋವಿಡ್ 19 ಟೆಸ್ಟ್ ಗೆ ಹೋಗದೆ ಮನೆಯಲ್ಲಿ ಇರುತ್ತಾರೆ. ಅವರಲ್ಲಿ ಸೋಂಕಿತರು ಕೂಡ ಇರಬಹುದು. ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು. ವೈದ್ಯರು,
ಬಂಗ್ರಕೂಳೂರು ವಾರ್ಡ್ 16 ರಲ್ಲಿ ರಿಕ್ಷಾ,ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಅಭಿಯಾನಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ. ಕೋವಿಡ್ 2ನೇ ಅಲೆಯ ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರವು ರಿಕ್ಷಾ,ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ ರೂಪಾಯಿ 3000/-ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಸೇವಾಕಾರ್ಯಕ್ಕೆ ಬಂಗ್ರಕೂಳೂರು ವಾರ್ಡಿನ ಮನಪಾ ಸದಸ್ಯರಾದ ಕಿರಣ್ ಕುಮಾರ್ ರವರ
ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಪೆÇೀಲಿಸ್ ಠಾಣೆಯ ಅಧಿಕ್ಷಕ ಮಲ್ಲಿಕಾರ್ಜುನ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಬೋಳಾ ನರಿಂಗಾನ ಚರ್ಚ್ ನ ಧರ್ಮ ಗುರು ಫಾದರ್ ಮೈಕಲ್ ಮಾತನಾಡಿ ಕರೊನಾ
ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆಗೊಳಿಸಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ ನೇತೃತ್ವದಲ್ಲಿ ಮನವಿ ನೀಡಲಾಯಿತು. ಲಾಕ್ಡೌನ್ ನಿಂದಾಗಿ ನಾಟಕ ಪ್ರದರ್ಶನಗಳಿಲ್ಲದೆ ತೊಂದರೆ
ಬಂಗ್ರಕೂಳೂರಿನ ಮಂಗಳೂರಿನ ಪಾಲಿಕೆ ಸದಸ್ಯರ ಜನಸೇವಾ ಕೇಂದ್ರದಲ್ಲಿ ಕೋವಿಡ್ 2ನೇ ಅಲೆಯ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ 3000 ರೂ. ಪರಿಹಾರ ನಿಧಿಗೆ ಉಚಿತವಾಗಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು – ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನಪಾ ವಿಪಕ್ಷ ನಾಯಕ ವಿನಯ ರಾಜ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಿರಿದಾದ ಆ ರಸ್ತೆಯನ್ನು ಅಗಲೀಕರಿಸುವ ಕುರಿತಂತೆ ಹಿಂದಿನ ಶಾಸಕ
ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು


















