Home ಕರಾವಳಿ Archive by category ಮಂಗಳೂರು (Page 4)

ಕ್ರಿಮಿನಲ್ ಕೇಸ್ ದಾಖಲು : ಬಸ್ಸು ಮಾಲಕರ ಸಂಘದೊಂದಿಗೆ ಸಮಾಲೋಚನೆ

ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ನೇತೃತ್ವದಲ್ಲಿ ಉಳ್ಳಾಲ, ದೇರಳಕಟ್ಟೆ, ಮುಡಿಪು ಭಾಗದ ಬಸ್ಸು ಚಾಲಕ, ನಿರ್ವಾಹಕರ ನಿಯೋಗ ದ.ಕ. ಬಸ್ಸು ಮಾಲಕರ ಸಂಘದ ಕಚೇರಿಗೆ ಭೇಟಿ ನೀಡಿ ಮಾಲಕರ ಸಂಘದ ಮುಖಂಡರೊಂದಿಗೆ ಮಾತುಕತೆ ನಡೆಸಿತು.‌ ಇತ್ತೀಚೆಗೆ ಬಸ್ಸಿನಿಂದ ಆಕಸ್ಮಿಕವಾಗಿ ಪಿ ಯು ವಿದ್ಯಾರ್ಥಿ ಜಾರಿ ಬಿದ್ದು ಮೃತ ಪಟ್ಟ ಘಟನೆಯಲ್ಲಿ ಚಾಲಕ, ನಿರ್ವಾಹಕರ ಮೇಲೆ ಸೆಕ್ಷನ್

ಅ.18 ರಂದು ಟೋಲ್ ಗೇಟ್ ತೆರವು ನೇರ ಕಾರ್ಯಾಚರಣೆ : ಸಭೆಯಲ್ಲಿ ದೃಢ ನಿರ್ಧಾರ.‌

“ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತು ಸಭೆಯು ಚರ್ಚಿಸಿತು. ಸಾಮೂಹಿಕ ಧರಣಿಯ ಯಶಸ್ಸಿಗೆ ಕಾರಣಕರ್ತರಾದ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜನತೆಗೆ

ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆಯೊಂದಿಗೆ ಸದೃಢ ಸಮಾಜ ನಿರ್ಮಾಣ : ಡಾ. ರಾಜೇಂದ್ರ ಕೆ.ವಿ.

ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿ ಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ವ ಉದ್ಯೋಗ ಮಾಹಿತಿ ಶಿಬಿರವನ್ನು ನಗರದ ಬೆಂದೂರ್

ಉಚ್ಚಿಲದಲ್ಲಿ ಪಾನಮತ್ತರ ವಿರುದ್ಧ ಪೊಲೀಸ್ ಕ್ರಮ

ಮೇಲಾಧಿಕಾರಿಗಳ ಸೂಚನೆಯಂತೆ ಫೀಲ್ಡ್ ಗೆ ಇಳಿದ ಪಡುಬಿದ್ರಿ ಪೊಲೀಸರಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ಪತ್ತೆ ಹಚ್ಚಿದ್ದಾರೆ. ಪಡುಬಿದ್ರಿ ಎಸ್ಸೈ ಪುರುಷೋತ್ತಮ ತಂಡ ತಡರಾತ್ರಿ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ಯಚರಣೆ ಆರಂಭಿಸಿದಾಗ ಬಹುತೇಕ ದ್ವಿಚಕ್ರ ಸವಾರರು ಮದ್ಯ ಸೇವನೆ ಮಾಡಿರುವುದು ಪರೀಕ್ಷೆಯಿಂದ ಕಂಡು ಬಂದಿದೆ. ಇದೀಗ ಹಲವರ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಪಘಾತ ಪ್ರಕರಣಗಳ ಸಂಖ್ಯೆ ಈ ಪ್ರದೇಶದಲ್ಲಿ

ಶಾಲಾ ಮಕ್ಕಳ ವಾಹನ ಚಾಲಕರಿಗೆ ಜಾಗ್ರತಿ ಶಿಬಿರ

ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ(ರಿ)ದ ಆಶ್ರಯದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಮಂಗಳೂರು ನಗರ ಸಂಚಾರಿ ಪೋಲಿಸ್ ಇವರ ಸಹಯೋಗದೊಂದಿಗೆ ಶಾಲಾ ಮಕ್ಕಳ ವಾಹನ ಚಾಲಕರಿಗೆ ಜಾಗೃತಿ ಶಿಬಿರವು ಸಂಘದ ಅಧ್ಯಕ್ಷ ರಾದ ಮೋಹನ್ ಕುಮಾರ್ ಅತ್ತಾವರರವರ ಅಧ್ಯಕ್ಷತೆಯಲ್ಲಿ ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು. ಶಿಬಿರದಲ್ಲಿ ಮಂಗಳೂರು ನಗರ ಸಹಾಯಕ ಪೋಲಿಸ್ ಅಯುಕ್ತರಾದ ಗೀತಾ.ಟಿ.ಕುಲಕರ್ಣಿಯವರು ಮಾತನಾಡುತ್ತಾ, ಸಮಾಜದಲ್ಲಿ ಚಾಲಕರ ಪಾತ್ರ

ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಬಂಧನ

ವಿಚಾರಕ್ಕೆ ಸಂಬಂಧಿಸಿ ನಾಲ್ಕು ತಿಂಗಳ ಹಿಂದೆ ಉಚ್ಚಿಲ ಸಮೀಪ ನಡೆದಿದ್ದ ಯುವಕನ ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಎಂಬಾನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಕಮೀಷನರ್ ಎನ್.ಶಶಿಕುಮಾರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈತನ ಮೇಲೆ ಮಂಗಳೂರು ಸೇರಿದಂತೆ ಹೊರರಾಜ್ಯದಲ್ಲೂ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ. : ಅಧ್ಯಕ್ಷರಾಗಿ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು – ಇದರ ಅಧ್ಯಕ್ಷರಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ 2ನೇ ಬಾರಿಗೆ ಅವಿರೋಧವಾಗಿ ಆಯ್ಕೆ.

ನಗರದ ಉದ್ಯಾನವನಗಳ ಸುಸ್ಥಿತಿಗೆ ಮೊದಲ ಆದ್ಯತೆ : ಮನಪಾ ಮೇಯರ್ ಜಯಾನಂದ ಅಂಚನ್ ಹೇಳಿಕೆ

ಮಂಗಳೂರು: ಸಂಘ ಸಂಸ್ಥೆಗಳು, ಪತ್ರಕರ್ತರ ರು ಸೇರಿದಂತೆ ಎಲ್ಲರ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ ನೀಡಲಾಗುವುದು ಎಂದು ಮನಪಾ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಇನ್ನರ್ ವೀಲ್ ಕ್ಲಬ್ ಮಂಗಳೂ ರು ನಾರ್ತ್ ಸಹಯೋಗ ದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಅವರು ಇಂದು ಮಂಗಳೂ ರು ಮಹಾನಗರ ಪಾಲಿಕೆ ಇಂದಿರಾ ಪ್ರಿಯ ದರ್ಶಿ ನಿ

ಕಸ ವಿಲೇವಾರಿ ಚಾಲಕರ ಸೇವೆಯನ್ನು ಟೆಂಡರ್‍ಗೆ ವಹಿಸದಂತೆ ಆಗ್ರಹ : ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಒತ್ತಾಯ

ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್‍ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣ ಗೌಡ, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ. ಅಶೋಕ್ ಹಾರನಹಳ್ಳಿ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಒಂದು ಕಾಲದಲ್ಲಿ ನಾನು