Home ಕರಾವಳಿ Archive by category ಮಂಗಳೂರು (Page 49)

ಮಂಗಳೂರು: ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ

ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್‌ ಮಾಡಿ: ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಚೌಟ ಮನವಿ

ಮಂಗಳೂರು: ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ(NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರಲ್ಲಿ ಮನವಿ ಮಾಡಿದ್ದಾರೆ. ಸಚಿವ ಚಿರಾಗ್‌ ಅವರನ್ನು ಇಂದು

ಅಂತರ್ ಶಾಲಾ ಪುಟ್ಬಾಲ್ ಪಂದ್ಯಾಟ ಗೊನ್ಝಾಗ ಶಾಲೆಗೆ ಪ್ರಥಮ ಸ್ಥಾನ

ಮಂಗಳೂರಿನ ಎಸ್.ಡಿ.ಎಂ ಶಾಲೆಯ ಆಶ್ರಯದಲ್ಲಿ ನಡೆದ ಐಕ್ಸ್ ಅಂತರ್ ಶಾಲಾ ಫುಟ್ಬಾಲ್ ಪಂದ್ಯಾಟದಲ್ಲಿಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಜೂನಿಯರ್ ಫುಟ್ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿದೆ .ಆಗಸ್ಟ್ 30 ಮತ್ತು 31ರಂದು ನಡೆದ ಈ ಪಂದ್ಯಾಟದಲ್ಲಿ 33 ತಂಡಗಳು ಭಾಗವಹಿಸಿದ್ದವು. ಈ ವಿಜಯವು ತಂಡದ ಕೌಶಲ ಹಾಗೂ ಸಂಘಟಿತಪ್ರಯತ್ನವನ್ನು ಪ್ರತಿಬಿಂಬಿಸುತ್ತದೆ. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ಮೆಲ್ವಿನ್ ಅನಿಲ್ ಲೋಬೊ ಹಾಗೂ ಸಿಬ್ಬಂದಿ ವರ್ಗವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

ಮಂಗಳೂರು: ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ

ಮಂಗಳೂರಿನ ಕಂಕನಾಡಿಯ ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ ಕಾರ್ಯಕ್ರಮವನ್ನು ನಗರದ ಕೊಡಿಯಾಲ್‌ಬೈಲ್ ನ ದಿ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಮಾಡಿರುವ ಶಾಮಲಾ ಎಜ್ಯುಕೇಷನ್ ಟ್ರಸ್ಟ್‌ನ ಕಂಕನಾಡಿಯ ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ ಕಾರ್ಯಕ್ರಮವನ್ನು ಚಿತ್ರನಟ ಅರವಿಂದ ಬೋಳಾರ್ ಅವರು ಉದ್ಘಾಟಿಸಿದ್ರು. ಈ ವೇಳೆ ಮಾತನಾಡಿದ ಅವರು, ಪ್ರಸ್ತುತ ಕಾಲಘಟದಲ್ಲಿ ಶಾಮ್

“ಕಲ್ಜಿಗ ಸಿನಿಮಾ ನೋಡಿ ಮೆಚ್ಚಿದ ನಟ ರಿಷಬ್ ಶೆಟ್ಟಿ”

ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ ಕತೆ, ಮತ್ತು ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕುಟುಂಬದ ಬೆನ್ನಿಗೆ ನಿಲ್ಲುವ ಕೊರಗಜ್ಜ,

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್

ಸಿಬಿಎಸ್ಇ  ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಗೊನ್ಝಾಗ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕದ ಕಲ್ಬುರ್ಗಿಯಲ್ಲಿ 2024 ರ ಸೆಪ್ಟೆಂಬರ್ 8 ರಿಂದ 12 ರವರೆಗೆ ನಡೆದ ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ, 10ನೇ ತರಗತಿಯ ಸಾತ್ವಿಕ್ ನಾಯಕ್ ಸುಜಿರ್ 50 ಮೀ ಮತ್ತು 100 ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕ, 400 ಮೀ ಫ್ರೀಸ್ಟೈಲ್‌ನಲ್ಲಿ ಮತ್ತು  50 ಮೀ. ಬ್ರೆಸ್ಟ್‌ಸ್ರೋಕ್ ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಪಡೆದರು.

ಮಂಗಳೂರು: ಪ್ರಪ್ರಥಮ ಅಂಡರ್ – 12 ಕ್ರಿಕೆಟ್ ಪ್ರೀಮಿಯರ್ ಲೀಗ್

ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಮಂಗಳೂರು ಬೋಳೂರಿನ ಅಮೃತ ವಿದ್ಯಾಲಯಂ ಮೈದಾನದಲ್ಲಿ ಕ್ರಿಕೆಟ್ ತಾರೆ ಕೆಎಲ್ ರಾಹುಲ್ ತರಬೇತಿಗೆ ಹೆಸರಾದ ಲೆಜೆಂಡರಿ ಕೋಚ್ ಜಯರಾಜ್ ನೇತೃತ್ವದಲ್ಲಿ ಈ ಪ್ರತಿಷ್ಠಿತ ಟೂರ್ನಿ ನಡೆಯಲಿದೆ. 7 ರಿಂದ 12