Home ಕರಾವಳಿ Archive by category ಮಂಗಳೂರು (Page 53)

ಬೆಳ್ಳಂಬೆಳಗ್ಗೆ ಮಂಗಳೂರು ಕಾರಾಗೃಹಕ್ಕೆ ಪೊಲೀಸರ ದಾಳಿ – ಮೊಬೈಲ್‌ಗಳ ಸಹಿತ ಗಾಂಜಾ, ಡ್ರಗ್ಸ್ ವಶ

ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್

ಮಂಗಳೂರು: ಶಿರೂರು ದುರಂತ – ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ

ಉಡುಪಿ: ದುರಂತದಿಂದ ಪಾರಾದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು

ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ ಗಳು ತೀರಾ ಸಮೀಪದಲ್ಲಿ

ಆಷಾಢಮಾಸದಲ್ಲಿ ಮನೆ ಮನೆಗೆ ಭೇಟಿ ನೀಡುತ್ತಿರುವ ಆಟಿಕಳಂಜ

ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು ಇಲ್ಲಿನ ಜನರ ನಂಬಿಕೆ. ತುಳುನಾಡಿನಲ್ಲಿ ಆಷಾಡ ಮಾಸವನ್ನು ‘ಆಟಿ’ ಎಂದು

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್: ನಳಿನ್‌ಕುಮಾರ್ ಕಟೀಲ್

ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ., ಕೃಷಿ ವಲಯಕ್ಕೆ 1.52 ಲಕ್ಷ ರೂ.

ಪ್ರಜಾಪ್ರಭುತ್ವ ವಿರೋಧಿ ಬಜೆಟ್:ಹರೀಶ್ ಕುಮಾರ್

“ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಹಿಂದಿನ ಯುಪಿಎ ನೇತೃತ್ವದ ಮನಮೋಹನ್ ಸಿಂಗ್ ಅವರ ಸರಕಾರ ಮಂಡಿಸಿರುವ ಎಲ್ಲ

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ

ಟೋನಿ & ಗೈ ಹೇರ್ ಡ್ರೆಸ್ಸಿಂಗ್ – ಇದರ ಎರಡನೇ ಶಾಖೆ ಶುಭಾರಂಭ

ನಿಮ್ಮ ಸೌಂದರ್ಯ ಹಾಗೂ ಸೌಂದರ್ಯ ಪ್ರಿಯರಿಗಾಗಿ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್‍ನಲ್ಲಿ ಟೋನಿ ಆ್ಯಂಡ್ ಗಾಯ್ ಹೇರ್ ಡ್ರೆಸ್ಸಿಂಗ್ ಶುಭಾರಂಭಗೊಂಡಿತು. ಮುಸ್ತಫಾ ಪ್ರೇಮಿ ಮಾಲೀಕತ್ವದ ಹೆವೆನ್ ರೋಸ್ ಪ್ರೊಫೆಷನಲ್ ಯುನಿಸೆಕ್ಸ್ ಸೆಲೂನ್ ಕಡಲ ನಗರ ಮಂಗಳೂರಿನಲ್ಲಿ ಪ್ರಖ್ಯಾತಿ ಪಡೆದಿದೆ. ಅದ್ರಂತೆ ಇದೀಗಾ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ ನಲ್ಲಿ ಮುಸ್ತಫಾ ಪ್ರೇಮಿ ಅವರು ಪ್ರಾಂಚೈಸಿಯ ಮಾಲೀಕತ್ವದಲ್ಲಿ ಟೋನಿ & ಗೈ ಇದರ ಎರಡನೇ

ಮಂಗಳೂರು : ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ

ಮಂಗಳೂರು : ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು. ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21 ರಂದು ಭಾನುವಾರ ಗುರು ಪೂರ್ಣಿಮೆಯನ್ನು ಶ್ರದ್ಧಾ

ಮಂಗಳೂರು:ಕರಾವಳಿ ಕುರುಬ ಸಮಾಜ (ರಿ) ಮಂಗಳೂರು ವತಿಯಿಂದ ಐವನ್ ಡಿಸೋಜ ರವರಿಗೆ ಸನ್ಮಾನ

ಮಂಗಳೂರು: ಕುರುಬ ಸಮುದಾಯದ ವತಿಯಿಂದ ದ್ವಿತೀಯ ಬಾರಿಗೆ ವಿಧಾನ ಪರಿಷತ್ ಶಾಸಕರಾಗಿ ಆಯ್ಕೆಯಾದ ಶ್ರೀ ಐವನ್ ಡಿಸೋಜ ರವರಿಗೆ ಅಭಿನಂದಿಸಿ ಶುಭ ಕೊರಲಾಯಿತು.ಮೊದಲನೆಯ ಬಾರಿ ಶಾಸಕರಾಗಿದ್ದಾಗ ತಮ್ಮ ಸಮಾಜದ ಬೆಳವಣಿಗೆಗೆ ನೀಡಿದ ಸಹಕಾರದ ಬಗ್ಗೆ ಸ್ಮರಿಸಿ , ಮುಂದಿನ ದಿನಗಳಲ್ಲಿ ಕುರುಬ ಸಮುದಾಯದ ಜನರಿಗೆ ರೇಶನ್ ಕಾರ್ಡ್ ಶೈಕ್ಷಣಿಕವಾಗಿ ಸ್ಕಾಲರ್ಶಿಪ್ ನ ಹಾಗೂ ಇತರ ಸಮಸ್ಯೆಯ ಬಗ್ಗೆ ವಿವರಿಸಿದರು. ಈ ಬಗ್ಗೆ ಸರಕಾರದ ಗಮನ ಸೆಳೆಯಬೇಕೆಂದು ಕುರುಬ ಸಮಾಜದ ನಾಯಕರು ಹಾಗೂ