ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ ಓ ಓ ) ನೇಮಕಗೊಂಡಿದ್ದಾರೆ. ಇದು ಜುಲೈ 01, 2024 ರಿಂದ ಜಾರಿಗೆ ಬರಲಿದೆ. ಡಾ. ರವಿರಾಜ ಅವರು ಮಾಹೆಯ ಶೈಕ್ಷಣಿಕೇತರ ಕ್ರಿಯಾತ್ಮಕ ವಿಭಾಗಗಳಾದ
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ
ಮೂಡುಬಿದಿರೆ: ವಿಧಾನಪರಿಷತ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಕೆಥೋಲಿಕ್ ಸಭಾ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಕೊರ್ಪುಸ್ ಕ್ರಿಸ್ತಿ ಚರ್ಚ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷನಿಷ್ಠೆ ಯ ಬದ್ಧತೆಯಿಂದ ಕೆಲಸ ಮಾಡಿದ್ದು ತನ್ನ ಸೇವೆಯನ್ನು ಪರಿಗಣಿಸಿ ಎರಡನೇ ಅವಧಿಗೆ ಈ ಸನ್ಮಾನ ಲಭಿಸಿದೆ. ಸಿಕ್ಕಿದ ಅವಕಾಶವನ್ನು ಬಳಸಿ ನೋಂದವರ ಸಹಾಯ ಹಸ್ತ ಒದಗಿಸುವ ಆದ್ಯತೆ
ಮುಂಗಾರಿನ ಮೊದಲ ಮಳೆಹನಿಯು ಭೂಮಿಯನ್ನು ಮುಟ್ಟುತ್ತಿದ್ದಂತೆಯೇ ನೆನಪುಗಳ ಪ್ರವಾಹ ನಮ್ಮನ್ನು ಆವರಿಸಿಕೊಳ್ಳುತ್ತದೆ. ನಮ್ಮಲ್ಲಿ ಅನೇಕರಿಗೆ ಮುಂಗಾರು ಮಳೆಯು ಶಾಲೆಯ ಮೊದಲ ದಿನವನ್ನು ನೆನಪಿಸುತ್ತದೆ, ಒದ್ದೆಯಾದ ಮಣ್ಣಿನ ಸಿಹಿ ಸುಗಂಧ, ಎಲ್ಲವೂ ಒಟ್ಟಾಗಿ ಹೊಸ ಆರಂಭದ ಉತ್ಸಾಹ. ಈ ವಾರ್ಷಿಕ ಆಚರಣೆಯು ನಮ್ಮನ್ನು ಬಾಲ್ಯಕ್ಕೆ ಸಂಪರ್ಕಿಸುವುದು ಮಾತ್ರವಲ್ಲದೆ ನಮ್ಮನ್ನು ಪ್ರಕೃತಿಗೆ ಹತ್ತಿರ ತರುತ್ತದೆ. ಮಳೆಗಾಲದಲ್ಲಿ ಶಾಲೆಯನ್ನು ಪ್ರಾರಂಭಿಸಲು ವಿಶೇಷವಾದ
ನೂತನವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಐವನ್ ಡಿ’ಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ರವರನ್ನು ಮಂಗಳೂರಿನ ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಿ, ಶುಭ ಹಾರೈಸಲಾಯಿತು. ಈ ಸಂಧರ್ಭದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಡಿ’ಸಿಲ್ವಾ, ಮಾಜಿ ಶಾಸಕರಾದ ಜೆ. ಆರ್.
ಬಂಟ್ವಾಳ: ರಕ್ತದಾನ ಮಾಡುವುದರಿಂದ ನಮ್ಮ ಉಸಿರು ನಿಂತರೂ ಮತ್ತೊಬ್ಬರ ದೇಹದಲ್ಲಿ ನಿರಂತರವಾಗಿ ನಮ್ಮ ರಕ್ತ ಹರಿದಾಡುತ್ತಿರುತ್ತದೆ. ಹೆಚ್ಚು ಹೆಚ್ಚು ಜನರು ರಕ್ತ ನೀಡಿದಾಗ ರಕ್ತದ ಕೊರತೆ ಬಗೆ ಹರಿಯಲಿದೆ. ರಕ್ತದಾನಕ್ಕಿಂತ ದೊಡ್ಡ ದಾನವಿಲ್ಲ, ರಕ್ತ ಅನೇಕ ಜನರಿಗೆ ಅಗತ್ಯವಿದೆ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಇದರ ದ.ಕ. ಜಿಲ್ಲಾ ಕೋಶಾಧಿಕಾರಿ ಕೆ. ಮೋಹನ್ ಶೆಟ್ಟಿ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್
ಉಳ್ಳಾಲ: ಮಂಗಳೂರು ನಗರದಲ್ಲಿರುವಂತಹ ಸೌಕರ್ಯಗಳನ್ನು ಕ್ಷೇತ್ರದ ಅತ್ಯಂತ ಹಿಂದುಳಿದ ಪ್ರದೇಶಕ್ಕೆ ಮಾಡಿಕೊಡುವುದೇ ನನ್ನ ಕಲ್ಪನೆ , ಅದರಂತೆ ಪಾವೂರು ಗ್ರಾಮದ ಚಿತ್ರಣ ಮುಂದಿನ 10 ವರ್ಷಗಳಲ್ಲೇ ಬದಲಾವಣೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೋಡಾರ್ ಸೈಟ್ ಹಾಗೂ ಒಂದನೇ ವಾರ್ಡಿಗೆ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.ಪೋಡಾರು ಭಾಗದಲ್ಲಿ ಹಿಂದೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ ಈ ಸಂದರ್ಭದಲ್ಲಿ ಮಂಗಳೂರಿನ ವಿವಿಧೆಡೆಯ ಪ್ರದೇಶಗಳು ಅಪಾಯದ ಭೀತಿಯಲ್ಲಿದೆ. ನಗರದ ಚಿಲಿಂಬಿ ಪ್ರದೇಶದ ೩ನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತದ ಆತಂಕ ಎದುರಾಗಿದ್ದು, ಅಲ್ಲಲ್ಲಿ ಗುಡ್ಡ ಬಿರುಕು
ಮಂಗಳೂರು : ತುಳು ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು.ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ಹಾಗೂ ಸಂಸ್ಕೃತಿ ಎಲ್ಲರನ್ನೂ ಜೊತೆಯಾಗಿ ಒಳಗೊಳ್ಳುವ




























