Home ಕರಾವಳಿ Archive by category ಮಂಗಳೂರು (Page 71)

ಉದ್ಯೋಗ, ಶಿಕ್ಷಣ, ಆರೋಗ್ಯ, ಬೆಲೆಯೇರಿಕೆ ಚುನಾವಣೆಯ ವಿಷಯವಾಗಲಿ ; ಕರಾವಳಿಯಲ್ಲಿ ಬಿಜೆಪಿ ಸೋಲಿಸಲು ಬರಹಗಾರರು, ಚಿಂತಕರ ಕರೆ

ಸದಾ ಕೋಮುಹಿಂಸೆಯಿಂದ ನಲುಗುವ ಕರಾವಳಿ ಜಿಲ್ಲೆಗಳಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಬಿಜೆಪಿ ಪರಿವಾರದ ಮತೀಯ ರಾಜಕಾರಣದಿಂದ ಮಂಗಳೂರು ಸಹಿತ ಕರಾವಳಿ ಪ್ರದೇಶಗಳು ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ. ಕಲೆ, ಸಂಸ್ಕೃತಿ, ಜನಪರ ಹೋರಾಟಗಳಿಂದ ಸಮೃದ್ದವಾಗಿದ್ದ ಮಂಗಳೂರು ಈಗ ಹಿಂದು, ಮುಸ್ಲಿಂ ವಿಭಜನೆಯ

ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಉಳ್ಳಾಲ: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿ , ಉಳ್ಳಾಲ ವಿಧಾಸನಭಾ ಕ್ಷೇತ್ರಕ್ಕೆ ಅವಶ್ಯಕವಿರುವ ಉದ್ದೇಶದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದರು. ಅವರು ಪಂಡಿತ್ ಹೌಸ್ ಚುನಾವಣಾ ಕಾರ್ಯಾಲಯದಲ್ಲಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಮನೆಮನೆಗಳಿಗೆ ಕುಡಿಯುವ ನೀರಿನ

ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಅವರಿಂದ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ಮತಯಾಚನೆ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ ಜವಾಬ್ದಾರಿಯ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಬಾಗಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುವ ಪ್ರಸ್ತಾಪದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಪಾಲ್ಗೊಂಡರು. ಬೋಳಾರ ಶ್ರೀ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.

ಮಂಗಳೂರಿಗೆ ಆಗಮಿಸಿದ SDPI ರಾಷ್ಟ್ರೀಯ ಅಧ್ಯಕ್ಷರಿಗೆ ಬಜಪೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು .ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದ ವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ,

ಮಲ್ಪೆ : ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಮಲ್ಪೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಇದೇ ವೇಳೆ ಮಲ್ಪೆಯ ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿದರು.ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷವು ಸುಳ್ಳು ಭರವಸೆಯನ್ನು ನೀಡಿ ಮತ ಪಡೆದು ಯಾವ ಕೆಲಸವನ್ನು ಮಾಡದೆ ಮೋಸ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಗೆದ್ದು ನಾನು ಶಾಸಕನಾದರೆ ಮೀನುಗಾರರ ಸಮಸ್ಯೆಗಳಾದ ಪಾರ್ಕಿಂಗ್ ವ್ಯವಸ್ಥೆ , ಶೌಚಾಲಯ, ಮೀನು ಮಾರಾಟಕ್ಕೆ ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು

ಸಿನ್ಯಾಪ್ಸ್ 2023 ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಸಿಟಿ ಸಮೂಹ ಸಂಸ್ಥೆಗಳು ಹಾಗೂ ಕೈಲ್ಕೆರೆ ರುಕ್ಮಣಿ ಶೆಟ್ಟಿ ಕಾಲೇಜು ಆಫ್ ನಸಿಂಗ್‌ನ ವಾರ್ಷಿಕ ಕ್ರೀಡೊತ್ಸವವು ಮಂಗಳ ಕ್ರೀಡಾಂಗಣದಲ್ಲಿ ಜರುಗಿತು.ಫಿಟ್ನೆಸ್ ಇನ್‌ಸ್ಟ್ರಕ್ಟರ್ ಹಾಗೂ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೋಚ್‌ಗಳಾದ ಶ್ರೀ ಕೌಶಿಕ್ ಬೋಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡೋತ್ಸವದ ವಿನ್ಯಾಸವನ್ನು (ಸಿನ್ಯಾಪ್ಸ್ 2023) ಅನಾವರಣಗೊಳಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮನ್ನು ಕ್ರೀಡಾಪಟುಗಳಾಗಿ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರಿಂದ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮತಯಾಚನೆ

ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮನೆ ಮನೆಗೆ ಬೇಟಿ ನೀಡಿ ಮತಯಾಚಿಸಿದರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು

ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ(Thumbe Dam) ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು ನೀರಿನ ಸಮಸ್ಯೆ(Water Crisis) ಎದುರಾಗುವ ಬಗ್ಗೆ ಈ ಹಿಂದೆ ವರದಿ ಮಾಡಲಾಗಿತ್ತು. ಈ ಸಂಬಂಧ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದೆ. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ಮಂಗಳೂರು ನಗರ ಪಾಲಿಕೆಯ ತುಂಬೆ ಕಿಂಡಿ

ಮಹಿಳೆಯವರಿಗೊಂದು ಸದಾವಕಾಶ

ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಪಚ್ಚನಾಡಿ , ಪೃಥ್ವಿ ಸ್ವಯಂ ಸೇವಕರು ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು , ಶ್ರೀ ದೇವಿ ಮಾತೃ ಮಂಡಳಿ ಪಚ್ಚನಾಡಿ ವತಿಯಿಂದ ರೋಟರಿ ಕ್ಲಬ್ ಆಫ್ ಮಂಗಳೂರು ಮತ್ತು ಯೇನಪೊಯಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಹಕಾರದಲ್ಲಿ ಮಹಿಳೆಯರ ಎಲ್ಲಾ ವಿಧದ ಕ್ಯಾನ್ಸರ್ ತಪಾಸಣೆ ಹಾಗೂ ಉಚಿತ ಚಿಕಿತ್ಸಾ ಶಿಬಿರಇದೇ ಬರುವ ದಿನಾಂಕ 07-05-2023 ರ ಆದಿತ್ಯವಾರ ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಪಚ್ಚನಾಡಿ ದೇವಿನಗರದ ಶ್ರೀ ದೇವಿ