Home ಕರಾವಳಿ Archive by category ಮಂಗಳೂರು (Page 85)

ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಂಘದಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ

ನಾಳೆ (ಮಾ.26) ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 : ಮಂಗಳೂರಿನ ಜನತೆ ಸಂಭ್ರಮಿಸುವ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಂಗಳೂರಿನ ಜನತೆಗಾಗಿ ನಾಳೆ ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಇದೊಂದು ಅದ್ಭುತ ಅವಕಾಶ. ಇದೇ ಮಾರ್ಚ್ 26ರಂದು ಅಂದ್ರೆ ನಾಳೆ ಕ್ಲಬ್ ಮಂತ್ರ ವತಿಯಿಂದ ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6ನ್ನು ಆಯೋಜನೆ

ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಮತ್ತು ಬಿಜೆಪಿಯು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಲಾಲ್‍ಭಾಗ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ಬಿಜೆಪಿಯಿಂದ ಪ್ರಜಾಪ್ರಭುತ್ವ ಕೊಲೆಯಾಗಿದ್ದು, ಅದು

ಜಾಹಿರಾತು ಫಲಕ ತೆರವು ನಡೆಸದ ನವಯುಗ್ ಕಂಪನಿಗೆ ಕೋಟಿ ಮೊತ್ತದ ದಂಡ

ಹೆದ್ದಾರಿ ಅಂಚಿನಲ್ಲಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಮೀನಮೇಷ ಎಣಿಸುತ್ತಿದ್ದ ನವಯುಗ್ ಕಂಪನಿಗೆ ಹೆದ್ದಾರಿ ಇಲಾಖಾ ಅಧಿಕಾರಿಗಳು ಕೋಟಿ ಮೊತ್ತದಲ್ಲಿ ದಂಡ ವಿಧಿಸಿದ್ದಾರೆ. ಡೆಲ್ಲಿಯಿಂದ ಪರಿಶೀಲನೆಗೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಆರ್.ಓ. ವಿವೇಕ್ ಜೈಸ್ವಾಲ್ ಪರಿಶೀಲಿಸಿ ಹೆದ್ದಾರಿ ಅಂಚಿನಲ್ಲಿ ಬೇಕಾಬಿಟ್ಟಿ ಜಾಹೀರಾತು ಫಲಕಗಳನ್ನು ಗಮನಿಸಿ ಈ ದಂಡ ವಿಧಿಸಿ ತಕ್ಷಣದಿಂದಲೇ ಅದನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಅವರ ಆದೇಶಕ್ಕೆ ಬೆದರಿದ

ಸಿವಿಲ್ ಯೆನ್-ನಾಗರಿಕ ಸೇವೆಗಳ ಪರೀಕ್ಷೆ ತರಬೇತಿ ಕೇಂದ್ರ ಹಾಗೂ ಬಿಎ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ

ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಒಂದು ಘಟಕ ಯೆನೆಪೋಯ (ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಗಿದೆ) ಅದರ ಒಂದು ಘಟಕ – ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಮೂಲಕ ಸಿವಿಲ್ ಯೆನ್-ನಾಗರಿಕ ಸೇವೆಗಳ ಪರೀಕ್ಷೆ ತರಬೇತಿ ಕೇಂದ್ರ ಹಾಗೂ ಬಿಎ ಕಾರ್ಯಕ್ರಮಗಳ ಉದ್ಘಾಟನೆಯೊಂದಿಗೆ ಹೊಸ ಅಧ್ಯಾಯವನ್ನು ಶುರುಮಾಡಿದೆ.

ಶೋಷಣೆಯಿಲ್ಲದ ಸಮಾಜ ಕಟ್ಟುವುದು ಭಗತ್ ಸಿಂಗ್ ಕನಸು- ಶ್ರೀನಾಥ್ ಕುಲಾಲ್

ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಗಳ ಆಶಯ ಇವತ್ತಿಗೂ ಈಡೇರಲಿಲ್ಲ. ಸ್ವಾತಂತ್ರ್ಯ ಅಂದರೆ ಕೇವಲ ಯಜಮಾನರ ಬದಲಾವಣೆಯಲ್ಲ ಬದಲಾಗಿ ಶೋಷಣೆರಹಿತ ಸಮಾಜ ಕಟ್ಟುವುದು ಭಗತ್ ಸಿಂಗರ ಕನಸಾಗಿತ್ತು ಎಂದು ಡಿವೈಎಫ್ಐ ದ.ಕ ಜಿಲ್ಲಾ ಮುಖಂಡರಾದ ಶ್ರೀನಾಥ್ ಕುಲಾಲ್ ಇಂದು 23-3-2023 ಡಿವೈಎಫ್ಐ ಮಂಗಳೂರು ನಗರ ಸಮಿತಿ ಭಗತ್ ಸಿಂಗರ ಹುತಾತ್ಮ ದಿನದ ಅಂಗವಾಗಿ ನಿರುದ್ಯೋಗದ ವಿರುದ್ಧ ಸೌಹಾರ್ದ

ಬೀದಿ ಬದಿ ವ್ಯಾಪರಿಗಳಿಂದ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಶಹೀದ್ ಭಗತ್ ಸಿಂಗ್ ಹುತಾತ್ಮ ದಿನದ ಸ್ಮರಣೆ ಕಾರ್ಯಕ್ರಮ ನಡೆಯಿತು.ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್, ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಮುಖಂಡರಾದ ಆಸೀಫ್ ಬಾವ ಉರುಮನೆ, ಶ್ರೀಧರ್, ನೌಷಾದ್ ಉಳ್ಳಾಲ, ಇಸ್ಮಾಯಿಲ್ ಉಳ್ಳಾಲ, ರಹಿಮಾನ್ ಅಡ್ಯಾರ್, ಆದಂ ಬಜಾಲ್, ರಿಯಾಜ್ ಎಲ್ಯರ್ ಪದವು, ವಿಲ್ಲಿ ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.

ಡಿವೈಎಫ್ಐ ಆಶ್ರಯದಲ್ಲಿ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ಸ್ವಾತಂತ್ರ್ಯ ಚಳುವಳಿಯ ಧ್ರುವತಾರೆಗಳಾದ ಶಹೀದ್ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳಾದ ರಾಜ್ ಗುರು, ಸುಖದೇವ್ ಅವರು ಬ್ರಿಟಿಷರ ನೇಣುಗಂಬಕ್ಕೆ ನಗು ನಗುತ್ತಲೇ ಏರಿದ ಹುತಾತ್ಮರಾದ ಕ್ರಾಂತಿಕಾರಿಗಳ ಬಲಿದಾನವನ್ನು ನೆನಪಿಸಿ ಡಿವೈಎಫ್ಐ ಸುರತ್ಕಲ್ ಘಟಕದ ಆಶ್ರಯದಲ್ಲಿ ಕಾನ ಜಂಕ್ಷನ್ ಬಳಿ ಕ್ಯಾಂಡಲ್ ದೀಪ ಬೆಳಗಿ ಹುತಾತ್ಮರಾದ ಧೀರ ಸಂಗಾತಿಗಳಿಗೆ ಕೆಂಪು ವಂದನೆ ಸಲ್ಲಿಸಲಾಯಿತು.ಈ ಸಂಧರ್ಭದಲ್ಲಿ ಭಾಗವಹಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್

ಮಾ.25ರಂದು ಮೋರ್ಲ ಬೋಳದಲ್ಲಿ ಪ್ರಥಮ ವರ್ಷದ ನರಿಂಗಾನ ಕಂಬಳ

ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.ಕಂಬಳ ಕರೆಯ ಬಳಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮಾ. 25ರಂದು

ಕಾಪು ತ್ಯಾಜ್ಯ ಘಟಕದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ರೋಗ ಭೀತಿ ಆತಂಕದಲ್ಲಿ ಜನತೆ

ಕಾಪು ಪುರಸಭೆ ಘನತ್ಯಾಜ್ಯ ಘಟಕದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪ್ಲಾಸ್ಟಿಕ್ ತ್ಯಾಜ್ಯ ದ ದುರ್ನಾತ ಪರಿಸರವೆಲ್ಲಾ ಪಸರಿಸಿದ್ದು ಜನ ರೋಗ ಭೀತಿಯ ಆತಂಕದಲ್ಲಿದ್ದಾರೆ.ಮೇಲ್ನೋಟಕ್ಕೆ ವಿದ್ಯುತ್ ಅವಘಢದಿಂದ ಬೆಂಕಿ ಹತ್ತಿಕೊಂಡಿರ ಬಹುದೆಂದು ಅಂದಾಜಿಸಲಾಗುತ್ತಿದೆ ಯಾದರೂ. ಮಾರಿಪೂಜೆಯ ಹಿನ್ನಲೆಯಲ್ಲಿ ಬಾರೀ ತ್ಯಾಜ್ಯಗಳು ಶೇಖರಣೆ ಗೊಳ್ಳುವ ಆತಂಕವಿದ್ದು, ಉದ್ದೇಶ ಪೂರ್ವಕವಾಗಿಯೇ ಯಾರೋ ಬೆಂಕಿ ಹಾಕಿದ್ದಾರೆಂಬ ಸಂಶಯ ಜನ ವ್ಯಕ್ತ ಪಡಿಸುತ್ತಿದ್ದಾರೆ. ಬೆಂಕಿಯ