Home ಕರಾವಳಿ Archive by category ಮಂಗಳೂರು (Page 96)

ಮಂಗಳೂರು : ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್

ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕರಿಸಿದರು.ನಿರ್ಗಮನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳನ್ನು

ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರಿಗೆ 74ನೇ ಹುಟ್ಟುಹಬ್ಬದ ಸಂಭ್ರಮ

ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತಾನ್ನಾಡಿದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಅವರು, “ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಶಕ್ತಿ ತುಂಬಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ತಮ್ಮ 74ನೇ ಹುಟ್ಟುಹಬ್ಬದ

ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ

ಮಂಗಳೂರು: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯು 2022ನೇ ಸಾಲಿನ ಪ್ರಶಸ್ತಿಗೆ ರಜನಿ ಶೆಟ್ಟಿ ಅವರನ್ನು ಆಯ್ಕೆ ನಡೆಸಿದೆ. ಮಾ.5ರಂದು

ಕಿನ್ನಿಗೋಳಿ : ಬಲಿಪ ನಾರಾಯಣ ಮತ್ತು ವೇಷಧಾರಿ ಅಂಬಾತನಯ ಮುದ್ರಾಡಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಕಿನ್ನಿಗೋಳಿ: ಯಕ್ಷಲಹರಿ(ರಿ) ಕಿನ್ನಿಗೋಳಿ, ದ.ಕ. ಮತು ವಿಜಯ ಕಲಾವಿದರು ಕಿನ್ನಿಗೋಳಿ ಹಾಗು ಯುಗಪುರುಷ ಕಿನ್ನಿಗೋಳಿ ಇದರ ವತಿಯಿಂದ ಗುರುವಾರ ಸಂಜೆ.5-30ಕ್ಕೆ ಗಂಟೆಗೆ ಯುಗಪುರುಷದ ಸಭಾಭವನದಲ್ಲಿ ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಬಲಿಪ ನಾರಾಯಣ ಭಾಗವತರ ಮತ್ತು ಕವಿ,ಪ್ರಸಂಗಕರ್ತ,ಅರ್ಥಧಾರಿ ವೇಷಧಾರಿ ಅಂಬಾತನಯ ಮುದ್ರಾಡಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮನ್ನು ನಡೆಯಲಾಯಿತು. ಕಾರ್ಯಕ್ರಮದಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ

ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನ : ಹೊರೆ ಕಾಣಿಕೆ ಸಮರ್ಪಣೆ, ನಗನಾಣ್ಯ ಮೆರವಣಿಗೆ

ಸುಮಾರು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಂಡಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜರಗಲಿರುವ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಬೃಹತ್ ಹೊರೆಕಾಣಿಕೆ ಸಮರ್ಪಣೆ ಮತ್ತು ನಗನಾಣ್ಯ ಪರಿಕರಗಳ ಮೆರವಣಿಗೆ ನಡೆಯಿತು. ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಗೌರವಾಧ್ಯಕ್ಷ

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಫೆ.25 ಮತ್ತು 26 : ವಿಷನ್-2023 ಮತ್ತು ಸಾನಿಧ್ಯ ಉತ್ಸವ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ವಿಷನ್-2023 ಹಾಗೂ ಸಾನಿಧ್ಯ ಉತ್ಸವ ಕಾರ್ಯಕ್ರಮವು ಫೆ.25 ಮತ್ತು 26ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ ಎಂದು ಸಾನಿಧ್ಯ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಾನಸಿಕ ಭಿನ್ನ ಸಾಮಥ್ರ್ಯದ ಮಕ್ಕಳಿಗೂ ವಿಶೇಷ ಶಾಲೆಗಳ ಅವಕಾಶ ದೊರಕಬೇಕು. ಆ

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಜೂಲಿಯಟ್-2 ಸಿನಿಮಾ – ಫೆ.24ರಂದು ಬಿಡುಗಡೆ

ಸಿನಿ ಪ್ರೇಕ್ಷಕರ ಬಹುನಿರೀಕ್ಷೆಯ ಕ್ರೈಮ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಮತ್ತು ಹೊಸಬರಿಂದ ಕೂಡಿರುವ ಹಾಗೂ ಉತ್ತಮ ಕಂಟೆಂಟ್ ಹೊಂದಿರುವ ಜೂಲಿಯಟ್-2 ಸಿನಿಮಾ ರಾಜ್ಯಾದ್ಯಂತ ಫೆ.24ರಂದು ಬಿಡುಗಡೆಗೊಳ್ಳಲಿದೆ. ಜೂಲಿಯಟ್-2 ಸಿನಿಮಾ ಹೆಸರೇ ಹೇಳುವಂತೆ ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದೆ. ಈಗಾಗಲೇ ಟೀಸರ್,ಟ್ರೈಲರ್ ಹಾಗೂ ಹಾಡುಗಳು ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷರಲ್ಲಿ ಕುತೂಹಲವನ್ನು ಮೂಡಿಸಿದೆ. ಇನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ

ಗೊಂದಲದ ಗೂಡಾದ ಟೋಲ್ ಸಂತ್ರಸ್ತರ ಸಭೆ

ಹೆಜಮಾಡಿ ಗ್ರಾ. ಪಂ. ಸನಿಹದಲ್ಲೇ ನಿರ್ಮಿತಿ ಕೇಂದ್ರದ ಮೂಲಕ ನಿರ್ಮಿಸಲುದ್ದೇಶಿಸಿರುವ 14 ಮನೆಗಳ ಅಪೂರ್ಣ ಕಾಮಗಾರಿ ಮುಗಿಸುವ ಸಲುವಾಗಿ ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಸೂಚಿಸಿ ಕರೆಯಲಾದ ಸಭೆ ತೀರ್ಮಾನಗಳಿಲ್ಲದೇ ಗದ್ದಲದಲ್ಲೇ ಮುಕ್ತಾಯಗೊಂಡಿದೆ. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸುಧಾಕರ್ ಕರ್ಕೇರ ತಾವು ತಮ್ಮ ಕೈಲಾದಷ್ಟು ಕಾಮಗಾರಿಯನ್ನು ನಿರ್ವಹಿಸಿದ್ದೇನೆ. ಆದರೆ ಸಂತ್ರಸ್ತರಿಂದ ನಿರ್ಮಿತಿ ಕೇಂದ್ರಕ್ಕೆ ಇನ್ನೂ ಹಲವು ಲಕ್ಷ ರೂ. ಗಳು

ನಾರಾಯಣ ಗುರು ಅಭಿವೃದ್ಧಿ ನಿಗಮ ಚುನಾವಣೆಯ ಗಿಮಿಕ್ : ಸತ್ಯಜಿತ್ ಸುರತ್ಕಲ್

ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ ಮಾಡಿದ್ದಾರಷ್ಟೇ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್