Home ಕರಾವಳಿ Archive by category ಮೂಡಬಿದರೆ (Page 13)

ಭಾರತೀಯ ಗಡಿ ಭದ್ರತಾ ಸೇನೆಗೆ ಸಂದೀಪ್ ಎಂ ಶೆಟ್ಟಿ ಮಾರೂರು ಆಯ್ಕೆ

ಮೂಡುಬಿದಿರೆ : ತಾಲೂಕಿನ ಮಾರೂರು ಗ್ರಾಮದ ಅರಮನೆ ಬಳಿಯ ರಾಜು ಶೆಟ್ಟಿ -ರತಿ ದಂಪತಿಯ ಪುತ್ರ ಸಂದೀಪ್ ಎಂ ಶೆಟ್ಟಿ ಮಾರೂರು ಇವರು ಭಾರತೀಯ ಗಡಿ ಭದ್ರತಾ ಸೇನೆಗೆ ಆಯ್ಕೆಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಪ್ರಾಥಮಿಕ ಶಾಲೆ ಮಾರೂರು ಹೊಸಂಗಡಿ ಇಲ್ಲಿ ಮುಗಿಸಿ, ಪ್ರೌಢ ಶಿಕ್ಷಣವನ್ನು ಎಸ್ ಡಿ ಎಂ ಪೆರಿಂಜೆಯಲ್ಲಿ ಮುಗಿಸಿ, ಪದವಿಪೂರ್ವ ಶಿಕ್ಷಣವನ್ನು

ಮೂಡುಬಿದಿರೆ: ಅಗ್ನಿಶಾಮಕ ಠಾಣೆಯಲ್ಲಿ ಆಯುಧ ಪೂಜೆ

ಮೂಡುಬಿದಿರೆ ಒಂಟಿಕಟ್ಟೆ ಕಡಲಕೆರೆ ಬಳಿ ಇರುವ ತಾಲೂಕು ಅಗ್ನಿಶಾಮಕ ಠಾಷೆಯಲ್ಲಿ ಸೋಮವಾರ ಆಯುಧ ಪೂಜೆ ಮತ್ತು ವಾಹನ‌ಪೂಜೆ ನಡೆಯಿತು.ಆಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಪ್ರಸಾದ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಸಿಬಂಧಿ ವರ್ಗ ಹಾಗೂ ಊರವರು ಈ ಸಂದರ್ಭದಲ್ಲಿದ್ದರು.

ರಾಷ್ಟ್ರೀಯ ಮಲ್ಲಕಂಬ ಕ್ರೀಡಾಕೂಟಕ್ಕೆ ಆಳ್ವಾಸ್ 6 ಕ್ರೀಡಾಪಟುಗಳು ಆಯ್ಕೆ

ಮೂಡಬಿದಿರೆ: ಅ.26ರಿಂದ ಗೋವಾದಲ್ಲಿ ನಡೆಯಲಿರುವ 37ನೇ ರಾಷ್ಟ್ರೀಯ ಮಲ್ಲಕಂಬ ಕ್ರೀಡಾಕೂಟಕ್ಕೆ ರಾಜ್ಯ ತಂಡದ 12 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆರು ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.ಆಳ್ವಾಸ್ ಮಲ್ಲಕಂಬ ತಂಡದ ಬಾಲಕರಾದ ಹನುಮಂತ್ ಎಂ., ಆಕಾಶ್ ಪಿ., ವಿನಾಯಕ್ ಕೆ. ಹಾಗೂ ಬಾಲಕಿಯರ ವಿಭಾಗದಲ್ಲಿ ಭಾಗ್ಯಶ್ರೀ ಎಸ್, ದೊಡ್ಡಮ್ಮ ಪಿ, ಕಾವೇರಿ ಎಸ್ ಸೇರಿ ಆರು ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

ಮೂಡುಬಿದಿರೆ: ಮುಸ್ರಾಲೊ ಪಟ್ಟೊ ತುಳು ಸಾಹಿತ್ಯದ ಶ್ರೇಷ್ಠ ಸಾಂಸ್ಕೃತಿಕ ಕಥನ : ಡಾ ಕೆ ಚಿನ್ನಪ್ಪ ಗೌಡ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರಾಜಶ್ರೀ ಟಿ ರೈ ಪೆರ್ಲ ಅವರು ಬರೆದ ಮುಸ್ರಾಲೊ ಪಟ್ಟೊ ಕಾದಂಬರಿ ಬಿಡುಗಡೆ ಹಾಗೂ ಅವಲೋಕನ ಕಾರ್ಯಕ್ರಮವು ಶುಕ್ರವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಕೆ ಚಿನ್ನಪ್ಪ ಗೌಡ ಅವರು ಮುಸ್ರಾಲೊ ಪಟ್ಟೊ ಕಾದಂಬರಿಯ ಬಗ್ಗೆ ಅವಲೋಕನಗೈದು ಸಮಾಜದ ಸಂಬಂಧಗಳು ಛಿದ್ರಗೊಂಡು ನೈತಿಕ

ಮೂಡುಬಿದಿರೆ|| ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ: ಸಾಧಕರಿಗೆ ಗೌರವ ಪುರಸ್ಕಾರ ಪ್ರದಾನ

ಮೂಡುಬಿದಿರೆ ಸಮಾಜ ಮಂದಿರ ಸಭಾ ವತಿಯಿಂದ ಮೂಡುಬಿದಿರೆ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಾಲ್ಕನೇ ದಿನದಂದು ಹಿರಿಯ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆಯ ಖ್ಯಾತ ತಜ್ಞ ವೈದ್ಯ ಡಾ.ಹರೀಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಯಕ್ಷಗಾನ-ಸ್ವರೂಪ ಮತ್ತು ನಾವೀನ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಜೋಶಿ ಅವರು, ಜಗತ್ತಿನ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದು.

ಮೂಡುಬಿದಿರೆ:ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್ ಚಾಂಪಿಯಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿ ಪಡೆದಿದೆ. ಪುರುಷರ ವಿಭಾಗದಲ್ಲಿ ಒಟ್ಟು 6 ಚಿನ್ನ 3 ಬೆಳ್ಳಿ, ಒಂದು ಕಂಚಿನ ಪದಕ ಪಡೆದರೆ, ಮಹಿಳಾ ವಿಭಾಗದಲ್ಲಿ ಒಟ್ಟು 5 ಚಿನ್ನ, 5 ಬೆಳ್ಳಿ ಪಡೆದು ತಂಡ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‌ನ ಉಷಾ ಎಸ್.ಆರ್ 87 ಕೆ.ಜಿ ದೇಹತೂಕ ವಿಭಾಗದಲ್ಲಿ ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದರು. ಕ್ರೀಡಾಪಟುಗಳ

ಮೂಡುಬಿದಿರೆ: 34ನೇ ದಕ್ಷಿಣವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಆಳ್ವಾಸ್‌ಗೆ 09 ಪದಕ

ಮೂಡುಬಿದಿರೆ : ತೆಲಂಗಾಣ ಹನುಮಕೊಂಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಕ್ಟೋಬರ್ 15 ರಿಂದ 17 ರವರೆಗೆ ನಡೆದ 34ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಸ್ಟೋಟ್ಸ್ ಕ್ಲಬ್, ಮೂಡುಬಿದಿರೆ ಒಟ್ಟು 3 ಚಿನ್ನ, 3 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ಪಡೆದು ಒಟ್ಟು 09 ಪದಕಗಳÀನ್ನು ತನ್ನದಾಗಿಸಿಕೊಂಡಿದೆ. 16 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ರೀತುಶ್ರೀ 300ಮೀ ತೃತೀಯ ಸ್ಥಾನ ಹಾಗೂ ಮಿಡ್ಲೆರಿಲೆ ಪ್ರಥಮ ಸ್ಥಾನ,

ಮೂಡುಬಿದಿರೆ: ರಾಜ್ಯದ ಕಾಂಗ್ರೆಸ್ ಸರಕಾರದ 80% ಕಮೀಷನ್ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಮೂಡುಬಿದಿರೆ: ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ 80% ಕಮೀಷನ್ ದಂಧೆ ಸಹಿತ ಭ್ರಷ್ಟಾಚಾರವನ್ನು ವಿರೋಧಿಸಿ ಮೂಡುಬಿದಿರೆ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಸರಕಾರವನ್ನು 40% ಸರಕಾರವೆಂದು ದೂಷಿಸುತ್ತಾ, ಜನರಿಗೆ ವಿವಿಧ ರೀತಿಯ ಗ್ಯಾರಂಟಿಗಳ ಸುಳ್ಳು ಭರವಸೆಯನ್ನು ನೀಡುತ್ತಾ ಅಧಿಕಾರಕ್ಕೆ ಬಂದಿರುವ

ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ನಿಧನ

ಮೂಡುಬಿದಿರೆ: ವಕೀಲ, ಪತ್ರಕರ್ತ, ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ ಕೋಟ್ಯಾನ್ (30ವ) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಸಚ್ಚರಿಪೇಟೆ ಪೆರೂರು ನಿವಾಸಿ ಆನಂದ- ವನಜಾ ದಂಪತಿಯ ಪುತ್ರ ವೇಣುಗೋಪಾಲ್ ಅವರು ಕಳೆದ 11 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜತೆಗೆ ವಕೀಲ ವೃತ್ತಿಯನ್ನು ಮಾಡುತ್ತಿದ್ದರು. ಮೂರು ಬಾರಿ ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಅವರು ಮೂಡುಬಿದಿರೆ

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು-ಇರುವೈಲು ಗ್ರಾಮಸಭೆ ರದ್ದು

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳಿಲ್ಲದೆ ಗ್ರಾಮಸಭೆ ನಡೆಸಬಾರದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ರದ್ದುಗೊಳಿಸಿದ ಘಟನೆ ಇರುವೈಲಿನಲ್ಲಿ ನಡೆದಿದೆ. ಇರುವೈಲು ಗ್ರಾ.ಪಂನ ಎರಡನೇ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಲಲಿತಾ ಮೊಗೇರ ಅವರ ಅಧ್ಯಕ್ಷತೆಯಲ್ಲಿ ತೋಡಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಅರಣ್ಯ ಇಲಾಖೆಯ