Home ಕರಾವಳಿ Archive by category ಮೂಡಬಿದರೆ (Page 17)

ಮೂಡುಬಿದರೆಯಲ್ಲಿ ಬೀಡಿ ಕಾರ್ಮಿಕರಿಂದ ಪ್ರತಿಭಟನೆ

ಮೂಡುಬಿದಿರೆ: ಬೀಡಿ ಕಾರ್ಮಿಕರಿಗೆ 2015ರಿಂದ 2018ರ ತನಕ ಮೂರು ವರ್ಷಗಳ ಬಾಕಿ ಇರುವ ತುಟ್ಟಿ ಭತ್ತೆ ಮೊತ್ತವನ್ನು ನೀಡಲು ಒತ್ತಾಯಿಸಿ ಮತ್ತು 2018ರಿಂದ ಬೀಡಿ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ಕೂಲಿ ಪಾವತಿಗಾಗಿ ಆಗ್ರಹಿಸಿ ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್, ಮೂಡುಬಿದಿರೆ ಡಿಪೆÇೀ ಬಳಿ ಪ್ರತಿಭಟನೆ

ಬುಲ್ಲರ್ ಇಂಡಿಯಾ ಜೊತೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಪ್ಪಂದ

ಮೂಡುಬಿದಿರೆ: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಒಡಂಬಡಿಕೆಗೆ ಸಹಿ ಹಾಕಿತು. ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ ಹಾಗೂ ಕಂಪೆನಿಯ ವೆಂಕಟೇಶ್ ಮತ್ತು ರವೀಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃಷಿ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಶಶಿಕುಮಾರ್, ಮೆಕ್ಯಾನಿಕಲ್

ಮೂಡುಬಿದಿರೆ : ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಭತ್ತದ ನಾಟಿ

ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು.   ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ತುಳು ಸಂಘದ ಸದಸ್ಯರು ಬಹಳ

ಮೂಡುಬಿದರೆ: ಮಣಿಪುರ ಘಟನೆಯನ್ನು ಖಂಡಿಸಿ ಪ್ರತಿಭಟನೆ

  ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆಯನ್ನು  ಖಂಡಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ಹಾಗೂ ಸೌಹಾರ್ದ ಫ್ರೆಂಡ್ಸ್ ಶಿರ್ತಾಡಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಶಿರ್ತಾಡಿ ಬಸ್ ಸ್ಟ್ಯಾಂಡ್ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಯಿತು.  ಮೂಡುಬಿದಿರೆ ವಲಯ ಕಥೋಲಿಕ್ ಸಭಾದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ ದಿಕ್ಸೂಚಿ ಭಾಷಣ ಮಾಡಿ ನಾವು ಬೇರೆ ಬೇರೆ ತಂಡಗಳಾಗುವ ಹೊತ್ತಲ್ಲ ಇದು ಎಲ್ಲರೂ ಒಂದಾಗುವ ಹೊತ್ತು. ಯಾಕೆಂದರೆ

ಮೂಡುಬಿದರೆ : 60ನೇ ಶ್ರೀ ಸಾರ್ವಜನಿಕ ಗಣೇಶೋತ್ಸವ : ಡಾ.ಎಂ. ಮೋಹನ್ ಅಳ್ವಾರಿಂದ ಲೋಗೋ ಅನಾವರಣ

ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಲೋಗೋ ಅನಾವರಣಗೊಳಿಸಿ ಮಾತನಾಡಿ ಮೂಡುಬಿದಿರೆಯು ಹಲವು ವಿಚಾರಗಳಲ್ಲಿ ಸಾಧನೆ ಮಾಡಿದೆ. ಇಲ್ಲಿನ ಸಾರ್ವಜನಿಕ ಗಣೇಶೋತ್ಸವಕ್ಕೆ ಅದರದ್ದೇ ಆದ

ಮಣಿಪುರದಲ್ಲಿ ಹಿಂಸಾಚಾರ ಪ್ರಾಯೋಜಿತ ಕಾರ್ಯಕ್ರಮ : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ

ದಕ್ಷಿಣ ಕೊರಿಯಾದಲ್ಲಿ 25ನೇ ಅಂತರರಾಷ್ಟ್ರೀಯ ಜಾಂಬೂರಿ: ಆಳ್ವಾಸ್ ನ 8 ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ ನಢೆಯುವ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಭಾಗವಹಿಸಲಿದ್ದಾರೆ. ಆಳ್ವಾಸ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ, ಹತ್ತನೇಯ ತರಗತಿ

ಮಣಿಪುರ ಹಿಂಸಾಚಾರ ಖಂಡಿಸಿ ಆಲಂಗಾರಿನಲ್ಲಿ ಪ್ರತಿಭಟನೆ 

ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಅಲಂಗಾರು ಚಚ್ ೯ ಬಳಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಅಲಂಗಾರು ಚರ್ಚಿನ ಧರ್ಮಗುರು ರೇ.ಫಾ. ವಾಲ್ಟಾರ್ ಡಿಸೋಜಾ , ಸರ್ವ ಅಯೋಗದ ಸಂಚಾಲಕ ರಾಜೇಶ್ ಕಡಲಕೆರೆ , ಉಪಾಧ್ಯಕ್ಷ ಎಡ್ವಾರ್ಡ್ ಸೆರವೋ , ಕಾರ್ಯದರ್ಶಿ ಲಾರೆನ್ಸ್ , ಕಥೋಲಿಕ್ ಸಭಾ ಮುಖಂಡ ಅಲ್ವಿನ್ ಡಿಸೋಜಾ , ಜೇಸಿಂತ ಅರನ್ಹ , ಮೇಬಲ್ , ಅನಿಶ್ , ರಾಜ ಡಿಸೋಜಾ , ವಲೇರಿಯನ್ ಸಿಕ್ವೆರಾ , ಐವನ್ […]

ಯಕ್ಷಸಂಭ್ರಮ: ರೆಂಜಾಳ ರಾಮಕೃಷ್ಣ ರಾವ್, ಪೆರುವಾಯಿ ನಾರಾಯಣ ಶೆಟ್ಟಿಗೆ ‘ಯಕ್ಷದೇವ’ ಪ್ರಶಸ್ತಿ  

ಮೂಡುಬಿದಿರೆ: ಬೆಳುವಾಯಿ ಶ್ರೀ ಯಕ್ಷದೇವ ಮಿತ್ರಕಲಾ ಮಂಡಳಿ ವತಿಯಿಂದ 26ನೇ ವರ್ಷದ ಯಕ್ಷಸಂಭ್ರಮ-2023ರ ಕಾಯಕ್ರಮ ಜುಲೈ 30 ರಂದು ಕನ್ನಡ ಭವನದಲ್ಲಿ ದಿನಪೂರ್ತಿ ನಡೆಯಲಿದೆ ಎಂದು ಯಕ್ಷದೇವ ಮಿತ್ರಕಲಾ ಮಂಡಳಿಯ ಸ್ಥಾಪಕ ಅಧ್ಯಕ್ಷ ಎಂ.ದೇವಾನಂದ ಭಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ವೇಷಧಾರಿಗಳಾದ ರೆಂಜಾಳ ರಾಮಕೃಷ್ಣ ರಾವ್ ಮತ್ತು ಪೆರುವಾಯಿ ನಾರಾಯಣ ಶೆಟ್ಟಿ ಅವರಿಗೆ ತಲಾ 10 ಸಾವಿರ ರೂ.ನಗದಿನೊಂದಿಗೆ ‘ಯಕ್ಷದೇವ’ ಪ್ರಶಸ್ತಿ

ಮುಂಡ್ಕೂರು : ಹಡಿಲು ಬಿದ್ದ ಭೂಮಿಯಲ್ಲಿ ಭತ್ತದ ಕೃಷಿ

ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಗದ್ದೆಯಲ್ಲಿ ಒಕ್ಕೂಟದ ಮಹಿಳೆಯರು ಗದ್ದೆ ನಾಟಿ ಮಾಡಿದರು. ಸುಮಾರು ಒಂದು ಎಕರೆ ಹಡಿಲು ಭೂಮಿಯನ್ನು ಸಮತಟ್ಟು ಮಾಡಿ ಟ್ಯಾಕ್ಟರ್ ಮೂಲಕ ಉಳುಮೆ ಮಾಡಿ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ವನಿತಾ ಶೆಟ್ಟಿ ಎಲ್ ಸಿ ಆರ್ ಪಿ ಶಶಿಕಲಾ, ಸುಮನ ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.