Home ಕರಾವಳಿ Archive by category ಮೂಡಬಿದರೆ (Page 20)

ಇರುವೈಲು ಗ್ರಾ.ಪಂ.ನ ಪುದ್ದರಕೋಡಿಯಲ್ಲಿ ಅಪಾಯಕಾರಿ ಕಾಲು ಸಂಕ

ಮೂಡುಬಿದಿರೆ : ಅಡಿಕೆ ಮರವನ್ನು ಬಳಸಿ ನಿರ್ಮಿಸಿರುವ ಅಪಾಯಕಾರಿ ಕಾಲು ಸಂಕದಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಸಹಿತ ಸಾರ್ವಜನಿಕರು ಜೀವ ಭಯದಿಂದ ಸಂಚರಿಸಬೇಕಾದ ಪರಿಸ್ಥಿತಿ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ ವ್ಯಾಪ್ತಿಯ ತೋಡಾರು ಗ್ರಾಮದ ಪುದ್ದರಕೋಡಿ ಜಯ ಶೆಟ್ಟಿ ಎಂಬವರ ಮನೆ ಬಳಿ ಎದುರಾಗಿದೆ. ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದ ಕಾಲು

ಪುತ್ತಿಗೆ ಕಾಯರ್ ಪುಂಡ್‍ನಲ್ಲಿ ಜಲಾವೃತ : ಸಾರ್ವಜನಿಕರ ದೂರಿಗೆ ಎಚ್ಚೆತ್ತುಕೊಂಡ ಪಂಚಾಯತ್

ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆಯಲ್ಲಿ ತುಂಬಿಕೊಂಡು ತೋಟಗಳಲ್ಲಿ ತುಂಬಿಕೊಂಡಿತ್ತು. ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪುತ್ತಿಗೆ ಪಂಚಾಯತ್ ತಕ್ಷಣ ಎಚ್ಚೆತ್ತುಕೊಂಡಿದೆ.ಪಂಚಾಯತ್ ಅಭಿವೃದ್ಧಿ

ಮೂಡುಬಿದಿರೆ: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ (21ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ‌ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್

ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಪ್ : ಸಮಗ್ರ ಪ್ರಶಸ್ತಿ ಎತ್ತಿದ ಆಳ್ವಾಸ್

ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಎತ್ತಿ ಹಿಡಿದಿದೆ.ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಕೃಷಿಸಿರಿ ವೇದಿಕೆಯಲ್ಲಿ ಹಮ್ಮಿಕೊಂಡ ಪಂದ್ಯಾವಳಿಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ ಆಯಿತು. ಮಹಿಳಾ ವಿಭಾಗದಲ್ಲಿ ಸತತ 19ನೇ ಬಾರಿ ಚಾಂಪಿಯನ್ ಆದ ಆಳ್ವಾಸ್ ಕಾಲೇಜು ತಂಡವು

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಮೂಡುಬಿದಿರೆಯ ಸೋನಾಲ್

ಮೂಡುಬಿದಿರೆ: ಇಲ್ಲಿನ ಉದ್ಯಮಿ ಶಂಕರ್ ಎ. ಕೋಟ್ಯಾನ್ – ಜೀವಿತಾ ಶಂಕರ್ ದಂಪತಿಯ ಪುತ್ರಿಯಾಗಿರುವ ಸೋನಲ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಕೂದಲು ಇರುವುದಿಲ್ಲ ಎಂಬುದನ್ನು ತಿಳಿದುಕೊಂಡಿದ್ದ ಸೋನಲ್ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು ವರ್ಷದಿಂದ ಕನಸು ಕಂಡಿದ್ದಳು. ಇದೀಗ ಬೆಂಗಳೂರಿನಲ್ಲಿ ಕ್ಯಾನ್ಸರ್ ಪೀಡಿತರ ನೆರವಿಗಿರುವ ಸಂಸ್ಥೆಯೊಂದಕ್ಕೆ

ಮೂಡುಬಿದಿರೆ : ಗಾಯಗೊಂಡ ನಾಗರಹಾವಿಗೆ ಶಸ್ತ್ರ ಚಿಕಿತ್ಸೆಯಿಂದ ಮರುಜೀವ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದರು. ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾವನ್ನು ಚಿಕಿತ್ಸೆಗಾಗಿ ಉಡುಪಿಯ ವನ್ಯಜೀವಿ ಪಶುವೈದ್ಯ ಡಾ. ಯಶಸ್ವಿಯವರ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿರುತ್ತಾರೆ. ಶಸ್ತ್ರ

ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗಬೇಡಿ : ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿಕೆ

ವಿದ್ಯಾಗಿರಿ: `ವಿದ್ಯಾರ್ಥಿ ಜೀವನ ಎಂದರೆ ಸ್ವರ್ಗ ಇದ್ದಂತೆ. ಇಲ್ಲಿ ಹಲವಾರು ಆಕರ್ಷಣೆಗಳಿದ್ದರೂ, ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ರೆಡ್ ಕ್ರಾಸ್ ಘಟಕ ಮತ್ತು ಆಳ್ವಾಸ್ ಪುನರ್ಜನ್ಮದ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೂಡುಬಿದಿರೆಯಲ್ಲಿ ” ರೈತ-ವಿಜ್ಞಾನಿ” ಸಂವಾದ

ಭಾರತೀಯ ಕಿಸಾನ್ ಸಂಘ (ರಿ.) ಮೂಡುಬಿದಿರೆ ತಾಲೂಕು ಮತ್ತು ತೋಟಗಾರಿಕಾ ಇಲಾಖೆ ಇವುಗಳ  ಜಂಟಿ ಆಶ್ರಯದಲ್ಲಿ ತೋಟಗಾರಿಕಾ ಕೃಷಿಯಲ್ಲಿ ಮಳೆಗಾಲದ ಸಮಸ್ಯೆಗಳ ಕುರಿತು “ರೈತ – ವಿಜ್ಞಾನಿ ಸಂವಾದ ಕಾರ್ಯಕ್ರಮವು ಶ್ಯಾಮಿಲಿ ಎನ್ಕ್ಲೈವ್ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಕಿಸಾನ್ ಸಂಘ(ರಿ) ಕರ್ನಾಟಕ ದಕ್ಷಿಣ ಪ್ರಾಂತದ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವಿಶೇಷ ಆಹ್ವಾನಿತರಾಗಿ ಶಾಸಕ ಉಮಾನಾಥ

ಮೂಡುಬಿದಿರೆ : ಮುರುಕು ಮನೆಯಲ್ಲಿ ಜೀವಿಸುತ್ತಿರುವ ಅಸಹಾಯಕ ಕುಟುಂಬಕ್ಕೆ ಬೇಕಾಗಿದೆ ನೆರವು

ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ ಸ್ಥಿತಿಯಲ್ಲಿ ಇರುವೈಲಿನಲ್ಲೊಂದು ಅಸಹಾಯಕ ಕುಟುಂಬವು ಇಂದೋ, ನಾಳೆಯೋ ಬಿದ್ದು ಹೋಗಲಿರುವ ಮನೆಯಲ್ಲಿ ಜೀವನ