Home ಕರಾವಳಿ Archive by category ಮೂಡಬಿದರೆ (Page 3)

ತೆಂಕಮಿಜಾರು ಗ್ರಾ. ಪಂ. ಸದಸ್ಯ ಜೆ.ಕೆ.ಹಸನಬ್ಬ ನಿಧನ

ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಜೆ.ಕೆ.ಹಸನಬ್ಬ ( 56) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ತೆಂಕಮಿಜಾರು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಒಂದು ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.ಪರೋಪಕಾರ, ಪಂಚಾತಿಕೆಯಲ್ಲಿ ಮುಂಚೂಣಿಯಲ್ಲಿದ್ದ ಹಸನಬ್ಬ ಅವರು

ಮೂಡುಬಿದಿರೆ: ಆಳ್ವಾಸ್‌ನ ಹಿರಿಯ ವಿದ್ಯಾರ್ಥಿನಿ ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ವಿಕಿಮೇನಿಯಾ 2025 ಸಮ್ಮೇಳನಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ. ವಿಕಿಮೇಡಿಯಾ ಫೌಂಡೇಶನ್‌ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ

ಛಾಯಾಗ್ರಾಹಕ ರವಿ ಕೋಟ್ಯಾನ್‌ ಗೆ ಅಂತರ್‌ ರಾಷ್ಟ್ರೀಯ ಪ್ರಶಸ್ತಿ

ಮೂಡುಬಿದಿರೆ: ಇಂಟ‌ರ್ ನ್ಯಾಶನಲ್ ಸರ್ಕ್ಯೂಟ್ 2025 ರ ಅಂತಾರಾಷ್ಟ್ರೀಯ ಸೆಲೂನ್ 3- ಫೋಟೋ ಜರ್ನಲಿಸಂ ವಿಭಾಗದಲ್ಲಿ ಡಿಜಿ ಕ್ಲಬ್ ಗೋಲ್ಡ್ ಪ್ರಶಸ್ತಿಗೆ ಛಾಯಾಗ್ರಾಹಕ ರವಿ ಕೋಟ್ಯಾನ್ ಅವರು ಪಾತ್ರರಾಗಿದ್ದಾರೆ. ಮೂಡುಬಿದಿರೆಯಲ್ಲಿ ಸುಮಾರು 3 ದಶಕಗಳ ಕಾಲ ಫೋಟೋಗ್ರಫಿಯಲ್ಲಿ ಕಾರ್ಯನಿರ್ವಹಿಸಿದ ಮಾನಸ ಡಿಜಿಟಲ್‌ನ ರವಿ ಕೋಟ್ಯಾನ್‌ರಿಗೆ ಈ ಬಾರಿ ಅಂತರ್ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿದೆ. ವೇಣೂರು ಮಸ್ತಕಾಭಿಷೇಕ -2024ರ ಛಾಯಾಚಿತ್ರಕ್ಕಾಗಿ ಕ್ರೆಡೆನ್ಸ್

ಮೂಡುಬಿದಿರೆ:ಮೆಸ್ಕಾಂ ಜನ ಸಂಪಕ೯ ಸಭೆಗೆ ಸಾವ೯ಜನಿಕರಿಗೆ ಮಾಹಿತಿ ಇಲ್ಲ:ಪಾಲಡ್ಕ ಗ್ರಾಮಸಭೆಯಲ್ಲಿ ದೂರು

ಮೂಡುಬಿದಿರೆ : ಮೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ ಆದರೆ ತಾಲೂಕಿನಲ್ಲಿ ಮೆಸ್ಕಾಂ ನಡೆಸುವ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ಗಮನ ಸೆಳೆಯೋಣವೆಂದರೆ ಸಭೆ ಯಾವಾಗ ನಡೆಯುತ್ತದೆ ಎಂಬುದರ ಬಗ್ಗೆ ಸಾವ೯ಜನಿಕರಿಗೆ ಮಾಹಿತಿಯೇ ನೀಡುವುದಿಲ್ಲ ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳನ್ನು ಪಾಲಡ್ಕ ಗ್ರಾಮಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಪಂಚಾಯತ್ ಅಧ್ಯಕ್ಷೆ ಅಮಿತಾ ಅಧ್ಯಕ್ಷತೆಯಲ್ಲಿ ನಡೆದ ಮಂಗಳವಾರ

ಮೂಡುಬಿದಿರೆ:ಗಾಳಿ ಮಳೆಗೆ ಮನೆಯ ಗೋಡೆ ಕುಸಿತ : ಅಪಾರ ನಷ್ಟ

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ಬೀಸಿದ ಗಾಳಿ ಮಳೆಗೆ ಕಲ್ಲಬೆಟ್ಟು ಗ್ರಾಮದ ಮಡ್ಲಂಡದ ಹರೀಶ್ ಕುಲಾಲ್ ಅವರ ಮನೆಯ ಗೋಡೆಯು ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ. ಹರೀಶ್ ಅವರು ರಾತ್ರಿ ಮಲಗಿದ್ದ ಸಂದಭ೯ದಲ್ಲಿ ಈ ಘಟನೆ ಸಂಭವಿಸಿದ್ದು ಎರಡು ಕೋಣೆಯ ಗೋಡೆ ಕುಸಿದಿದೆ.ಪುರಸಭಾ ಸದಸ್ಯೆ ಸುಜಾತ ಶಶಿಕಿರಣ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಆಳ್ವಾಸ್‌ನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಶಿಕ್ಷಕರು. ಮೌಲ್ಯಾಧಾರಿತ, ಚಾರಿತ್ರ್ಯವಂತ ವ್ಯಕ್ತಿತ್ವಗಳನ್ನು ರೂಪಿಸುವ ಸಂಕಲ್ಪ ಶಿಕ್ಷಕರಲ್ಲಿರಬೇಕು. ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಕರು ಅಂಧಕಾರವನ್ನು ದೂರಮಾಡಿ ಸಮಾಜವನ್ನು ಪ್ರಕಾಶಮಾನಗೊಳಿಸುವಲ್ಲಿ ಮಹತ್ತರವಾದ ಪಾತ್ರವನ್ನು ನಿವ೯ಹಿಸುತ್ತಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ವಿದ್ಯಾಗಿರಿಯ ವಿ.ಎಸ್

ಮೂಡುಬಿದಿರೆ:ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ವಿದ್ಯುತ್ ಕಂಬ: ಸವಾರನಿಗೆ ಗಾಯ

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಶನಿವಾರ ಮಧ್ಯಾಹ್ನ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು ಸವಾರ ಗಾಯಗೊಂಡಿದ್ದಾರೆ.ನಿಡ್ಡೋಡಿ ನಿವಾಸಿ ವಿನೋದ್ ನಿಡ್ಡೋಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದಾಗ, ಸಂಪಿಗೆ ಎಚ್.ಪಿ ಪೆಟ್ರೋಲ್‌ಬಂಕ್ ಬಳಿ ವಿದ್ಯುತ್ ಕಂಬ ಧರೆಗುರುಳಿದು ಬೈಕ್ ಮೇಲೆ ಬಿದ್ದಿದೆ. ಬೈಕ್‌ನ ಮಧ್ಯಭಾಗ ಜಖಂಗೊಂಡಿದ್ದು, ಸವಾರ ವಿನೋದ್ ಅವರ ಕಾಲಿಗೆ ಗಾಯವಾಗಿದೆ.

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ವಲಯ- ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ, ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ

ಮೂಡುಬಿದಿರೆ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025/27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ , ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ, ಉಪಾಧ್ಯಕ್ಷರಾಗಿ ರಂಜಿತ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಪದ್ಮನಾಭ ಮಿಜಾರು,

ಮೂಡುಬಿದಿರೆ: ವಿಶ್ವ ತುಳುವೆರ್ ಸಂಘಟನೆ ಮಂಗಳೂರು ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಕಷಾಯ ಮತ್ತು ಮೆಂತ್ಯೆ ಗಂಜಿ ವಿತರಣೆ

ವಿಶ್ವ ತುಳುವೆರ್ ಸಂಘಟನೆ ಮಂಗಳೂರು ವತಿಯಿಂದ ಮೂಡುಬಿದರೆಯ ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳಿಗೆ  ಮತ್ತು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಸಾರ್ವಜನಿಕರಿಗೆ ಆಟಿದ ಅಮಾವಾಸ್ಯೆ ದಿನದ ಪ್ರಯುಕ್ತ ಕಷಾಯ ಮತ್ತು ಮೆಂತ್ಯೆ ಗಂಜಿ ವಿತರಣಾ ಕಾರ್ಯಕ್ರಮ ನಡೆಯಿತು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ವಿಶ್ವ ತುಳುವೆರ್ ಸಂಘಟನೆ ಮಂಗಳೂರು ತುಳುನಾಡಿನ ಸಾಂಪ್ರದಾಯಿಕ ಆಚರಣೆಯಾದ ಆಟಿ ಅಮಾವಾಸ್ಯೆಯ ದಿನದಂದು ಆಟಿ ಕಷಾಯ ಮತ್ತು ಮೆಂತ್ಯೆ ಗಂಜಿಯನ್ನು

ಮೂಡುಬಿದಿರೆ: ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ