Home ಕರಾವಳಿ Archive by category ಮೂಡಬಿದರೆ (Page 6)

ಮೂಡುಬಿದಿರೆ : ವೃದ್ಧೆಯ ಕತ್ತಿನಿಂದ ಕರಿಮಣಿ ಸರ ಎಗರಿಸಿ ಪರಾರಿ

ದಾರಿ ಕೇಳುವ ನೆಪದಲ್ಲಿ ವೃದ್ಧೆಯೋವ೯ರ ಕುತ್ತಿಗೆಯಿಂದ 3-4 ಪವನಿನ ಕರಿಮಣಿ ಸರವನ್ನು ಎಗರಿಸಿದ ಘಟನೆ ಬೆಳುವಾಯಿ ಸಮೀಪ ಸೋಮವಾರ ನಡೆದಿದೆ.ಬೆಳುವಾಯಿ ಗ್ರಾಮದ ಕಾಯಿದೆ ಮನೆಯ ನಿವಾಸಿ ಎಪ್ಪತ್ತರ ಹರೆಯದ ಇಂದಿರಾ ಅವರು ಸೋಮವಾರದಂದು ತನ್ನ ಅಳಿಯ ಭಾಸ್ಕರ ಅವರ ಗೃಹಪ್ರವೇಶ ಮುಗಿಸಿಕೊಂಡು ಬೆಳುವಾಯಿ- ಕರಿಯಣಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು.ಈ

ಮೂಡುಬಿದಿರೆ:ಮನೆಯ ಹಟ್ಟಿಯಿಂದಲೇ ದನ ಕಳ್ಳತನ : ಓವ೯ನ ಬಂಧನ

ಮೂಡುಬಿದಿರೆ: ಕಳೆದ 10 ದಿನಗಳ ಹಿಂದೆ ತಾಲೂಕಿನ ಬಜರಂಗದಳದ ಮಾಜಿ ಸಂಚಾಲಕ ಬೆಳುವಾಯಿ ಗ್ರಾಮದ ಖಂಡಿಗ ದರ್ಖಸು ನಿವಾಸಿ ಸೋಮನಾಥ ಕೋಟ್ಯಾನ್ ರವರ ಮನೆಯ ಹಟ್ಟಿಯಿಂದ ದನಗಳನ್ನು ಕದ್ದೊಯ್ದ ಓವ೯ ಆರೋಪಿ ಪುತ್ತಿಗೆಯ ಮೊಹಮ್ಮದ್ ಆರೀಫ್ ( 25ವ.) ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.ಅಂದು ರಾತ್ರಿ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದಕ್ಕೆ ಮನೆಯ ಲೈಟ್ ಆನ್ ಮಾಡಿ ಹೊರಗೆ ಬಂದು ನೋಡಿದಾಗ ಸಿಲ್ವರ್ ಬಣ್ಣದ ಕಾರೊಂದು ಮನೆಯ ಹಿಂಭಾಗ ನಿಂತಿದ್ದು ಡ್ರೈವರ್ ಸೀಟ್

ಕಂಬಳದಲ್ಲಿ ಮುಗಿಯದ ಗೊಂದಲ:ಮುಂದಿನ ಕಂಬಳಗಳನ್ನಾದರೂ ಗೊಂದಲ ರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿ ಬೇಡಿಕೆ

ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್‍ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್‌ನಲ್ಲಿ ಬುಧವಾರ ನಡೆದ ಪರಾಮಶೆ೯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು ಈಗಾಗಲೇ ನಡೆದಿರುವಒಂದೆರಡು ಕಂಬಳಗಳಲ್ಲಿ ಗೊಂದಲಗಳು

ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿ ವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಕೋಟ್ಯಾನ್

ದರೆಗುಡ್ಡೆ ಗ್ರಾಮ ಪಂಚಾಯತ್‌ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ರಸ್ತೆ, 12ಲಕ್ಷ ರೂ. ವೆಚ್ಚದಲ್ಲಿ ಕೆಲ್ಲಪುತ್ತಿಗೆಯಲ್ಲಿ ರುದ್ರಭೂಮಿ ಹಾಗೂ 15ಲಕ್ಷ ರೂ ವೆಚ್ಚದಲ್ಲಿ ದರೆಗುಡ್ಡೆ ನರಂಗೊಟ್ಟು ಎಂಬಲ್ಲಿ ರುದ್ರಭೂಮಿ ಹಾಗೂ ರಸ್ತೆ ಕಾಮಗಾರಿಗಳನ್ನು ಅವರು ಉದ್ಘಾಟಿಸಿದರು. ನಂತರ ಸಭೆಯನ್ನುದ್ದೇಶಿಸಿ

ಮೂಡುಬಿದಿರೆ: ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವಷ೯ಗಳ ನಂತರ ಬಂಧಿಸಿದ ಪೊಲೀಸರು

ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. 1999 ರಲ್ಲಿ ಮಾಣಿಲ ಮನೆಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆಗೆ ಸಂಬಂಧಿಸಿ ತೆರೆಸಾ ಸಿಕ್ವೇರಾ ಅವರು ರಿಚಾರ್ಡ್ ಸಹಿತ ನಾಲ್ಕು ಮಂದಿಯ ವಿರುದ್ಧ ಮೂಡುಬಿದಿರೆ ಠಾಣೆಗೆ ದೂರು

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಶ್ರೀರಾಮ್ ಗೆ ಬಿ. ಸಿ. ಎ. ವಿಭಾಗದಲ್ಲಿ 9ನೇ ರ್‍ಯಾಂಕ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್‍ಯಾಂಕ್ ಗಳಿಸಿರುತ್ತಾರೆ.ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಮೂಡುಬಿದಿರೆಯ ಉದ್ಯಮಿ ಸದಾಶಿವ ಬಂಗೇರ ಇನ್ನಿಲ್ಲ

ಮೂಡುಬಿಬಿದಿರೆ: ಖ್ಯಾತ ಉದ್ಯಮಿ, ಸುಜಯ ಹೊಲೋ ಬ್ಲಾಕ್, ಸುಜಯ ಇಂಟರ್ಲಾಕ್ ಮಾಲಕ ಮೂಡುಬಿದಿರೆಯ ಸದಾಶಿವ ಬಂಗೇರ (71) ಇಂದು ಸಂಜೆ 5ರ ಸುಮಾರಿಗೆ ಹೃದಯಾಘಾತದಿಂದ ಮನೆಯಲ್ಲೇ ಕುಸಿದು ಬಿದ್ದು ಇಹಲೋಕವನ್ನು ತ್ಯಜಿಸಿದ್ದಾರೆ. ಜನಾನುರಾಗಿಯಾಗಿದ್ದಶ್ರೀಯುತರು ಪತ್ನಿ ತುಳು ಸಾಹಿತಿ ಜಯಂತಿ ಬಂಗೇರ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೂಡುಬಿದರೆ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಮೂಡುಬಿದಿರೆ: ತಾಲೂಕಿನ ಹೊಸಬೆಟ್ಟು ಗ್ರಾಮದ ಬಿರಾವು  ಶಾಂತಿ ನಿವಾಸ ವಿಲಿಯಮ್ ಕುಟ್ಟಿನ್ಹ  ಎಂಬುವರ ಮನೆಯ  ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮೇಲಕ್ಕೆತ್ತಿ  ರಕ್ಷಿಸಿದ ಘಟನೆ ನಡೆದಿದೆ. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ ಅವರ ನಿರ್ದೇಶನದಂತೆ,ಮೂಡುಬಿದಿರೆ ವಲಯ ಅರಣ್ಯಾಧಿಕಾರಿ  ಕಿರಣ್ ಕುಮಾರ್ ಜಿ. ರವರ ಮಾರ್ಗದರ್ಶನದಲ್ಲಿ  ಅರವಳಿಕೆ ತಜ್ಞರಾದ  ಡಾ. ಮೇಘನಾ  ಅವರು ಬೋನ್

ಆಳ್ವಾಸ್‌ಗೆ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್

ಮೂಡುಬಿದಿರೆ: ಲಾಡಿ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿದ ಬ್ಯಾನರ್ ಗೆ ಹಾನಿ – ಇಬ್ಬರ ಬಂಧನ

ಮೂಡುಬಿದಿರೆ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಅವರು ಲಾಡಿ ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ನ್ನು ಹರಿದು ಹಾನಿಗೊಳಿಸಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ಕರೀಂ ಅವರು ದೂರು