ಮೂಡುಬಿದಿರೆ: ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ಎಸ್‌ಕೆಎಸ್‌ಎಸ್‌ಎಫ್ ನಿಂದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು. ವಾಗ್ಮಿ ಅಹ್ಮದ್ ನಹೀಮ್ ಪೈಝಿ ಮುಕ್ವೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಜಾತಿ, ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿ ದೇಶ ಒಡೆಯುವ
ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಯೋಗಿಕ ಕಂಬಳವನ್ನು ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕರೆಯಲ್ಲಿ ಆಯೋಜಿಸಲಾಯಿತು. ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಚೌಟ ಪ್ರಾಯೋಗಿಕ ಕಂಬಳಕ್ಕೆ ಚಾಲನೆ ನೀಡಿದರು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ, ಕಂಬಳ ಅಕಾಡೆಮಿ
ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪರಿಹಾರವನ್ನು ನೀಡದೆ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ
ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ
ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಹಲವು ಧಾರ್ಮಿಕ ಮುಖಂಡರ ಸಂಸ್ಕೃತ ಗುರು, ಆಧ್ಯಾತ್ಮ ಅವದೂತ ಮೂಲತಃ ಬೆಳಗಾವಿ ಖಾನಪುರದ ಅನಂತ ಜೋಷಿ(81) ಅವರು ಪಾರ್ಶ್ವಕೀರ್ತಿ ಅತಿಥಿಗೃಹದಲ್ಲಿ ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ ರಮಾರಾಣಿ ಶೋದ ಸಂಸ್ಥಾನದಲ್ಲಿ ಸಂಸ್ಕೃತ ಪಾಠ ಬೋಧಿಸುತ್ತದ್ದರು. ಬನಾರಸ್ ಬೈದನಿಘಾಟ್ ನಲ್ಲಿ ಸುಮಾರು 30 ವರ್ಷ ಮೊದಲು ಮೂಡುಬಿದಿರೆ ಭಟ್ಟಾರಕಶ್ರೀ ಅವರಿಗೆ
ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ ಆಯ್ಕೆಯಾದ ಸುಮಾರು 600 ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳನ್ನು ಸಾನ್ಯೋ ಮತ್ತು ತಾವ್ಲೋ ಸ್ಪರ್ಧೆಯ
ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದರು. ನವಪರ್ವ ಫೌಂಡೇಶನ್
ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ
ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದ ಕೋಟಿ-ಚೆನ್ನಯ ಕಂಬಳ ಕ್ರೀಡಾಂಗಣದಲ್ಲಿ 15 ದಿನಗಳು ನಡೆಯುವ 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರಕ್ಕೆ ಭಾನುವಾರ ಕಡಲಕೆರೆಯ ಸೃಷ್ಟಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಅಭಯಚಂದ್ರ
ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು,ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಹೊಸ ಕಾನೂನನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ರು. ಹೋರಾಟಗಾರ ಅಚ್ಯುತ ಸಂಪಿಗೆ