ಮೂಡುಬಿದಿರೆ : ತಾಲೂಕಿನ ಪಡುಮಾರ್ನಾಡು ಪ್ರೀತಿ ನಿವಾಸದ ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ ಜೈನ್(67ವ.) ಜ13ರಂದು ರಾತ್ರಿ ನಿಧನರಾದರು.ಪತ್ನಿ ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳುವಾಯಿ ಬಂಗ್ಲೆ ಶಾಲೆ ಕೆಸರ್ ಗದ್ದೆ ಮೈನ್ ಶಾಲೆ ಮುಖ್ಯ್ಯೊ ಪಾಧ್ಯಾಯರಾಗಿ ಗುರುಪುರ, ಸುಳ್ಯ, ಮಡಿಕೇರಿ ಪ್ರೌಢಶಾಲೆ ಶಿಕ್ಷಕ ರಾಗಿ, ಸಾಕ್ಷರತ
ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯರಾಗಿರುವ ಹರಿಪ್ರಸಾದ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಹೊಸಂಗಡಿ ನಿವಾಸಿಯಾಗಿರುವ ಅವರು ಹರಿಯಣ್ಣ ಎಂದೇ ಚಿರಪರಿಚಿತರಾಗಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ. ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ
ಮೂಲ್ಕಿಯ ಕ್ಯಾನ್ ಕೋಸ್ ಡ್ರೈ ಫ್ರುಡ್ಸ್ ಸ್ಟೋರ್ ಮೂಲ್ಕಿ ಯಲ್ಲಿ ಕ್ಯಾನ್ ಕೋಸ್ ಗಿವ್ ವೇ ಎಂಬ ಸ್ಪರ್ಧೆಯನ್ನು ಸೋಶಿಯಲ್ ಮೀಡಿಯಾ ಕಾಂಪೊಸಿವ್ ನಲ್ಲಿ ಏರ್ಪಡಿಸಲಾಗಿತ್ತು ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಉತ್ತರವನ್ನು ನೀಡಿದ ಆಯುಷ್ ಪೂಜಾರಿ ಯವರು ವಿಜೇತರಾದರು. ಪ್ರಶಸ್ತಿಯನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೊಲ್ಪಿ ಡಿ’ಕೊಸ್ತ ವಿಜೇತರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸದಾಶಿವ ಕೋಟ್ಯಾನ್ ಫಲಿಮಾರು,ಉದಯ ಅಮೀನ್
ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಷ೯ ಏ.24ರಂದು ಮೂಡುಬಿದಿರೆಯ ಮಚ್ಲಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಿಲ್ಲಿಸಿದ್ದು ಮರುದಿನ ಬೆಳಿಗ್ಗೆ 7 ಗಂಟೆಗೆ ಹಿಟಾಚಿಯ ಬಳಿ ಬಂದು ನೋಡಿದಾಗ ಎರಡೂ ಹಿಟಾಚಿಗಳ 4
ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11
ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ನುಡಿದರು.ಅವರು ಕಾಲೇಜಿನ ಕುವೆಂಪು ಸಭಾಂಗಣ ದಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ” ಚೊಚ್ಚಲ ವಾರ್ಷಿಕ ಸಂಚಿಕೆ ಬಿಡುಗಡೆ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಮುಂದೆ ಗುರುಗಳಾಗುವವರು. ಇಂತಹ ಸ್ಮರಣ
ಮೂಡುಬಿದಿರೆ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ವ್ಯಕ್ತಿಯೋವ೯ರ ಚಿಕಿತ್ಸೆ ಗೆ ಪಡುಮಾನಾ೯ಡು ಅಮನ ಬೆಟ್ಟುವಿನ ಸಾಯಿ ಮಾನಾ೯ಡ್ ಸೇವಾ ಸಂಘ ಟ್ರಸ್ಟ್ (ರಿ) ನೆರವು ನೀಡಿದೆ.ಪಡುಮಾರ್ನಾಡು ಗ್ರಾಮದ ಅಬ್ದುಲ್ ಗಫೂರ್ ಎಂಬವರು ಕೆಲವು ವರುಷಗಳಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದುಕೊಳ್ಳುತಿದ್ದರು. ಆದರೆ ಇದೀಗ ತಪಾಸಣೆ ನಡೆಸಿದ ವೈದ್ಯರು ಗಫೂರ್ ಅವರು ಕ್ಯಾನ್ಸರ್ ಗೆ ತುತ್ತಾಗಿದ್ದಾರೆಂದು ಅದು ನಾಲ್ಕನೇ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.ಗಫೂರ್
ಮೂಡುಬಿದಿರೆ: ‘ಆಧುನಿಕ ಜಗತ್ತಿನಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ’ ಎಂದು ಭಾರತ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್ ಹೇಳಿದರು.ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಂಗಳವಾರ ಅವರು ಮಾತನಾಡಿದರು.ಕಳೆದ ಹಲವು ದಶಕಗಳಿಂದ ಅಸಾಂಕ್ರಾಮಿಕ ರೋಗಗಳು ಇಡೀ ಜಗತ್ತಿನಲ್ಲಿ
ಮೂಡುಬಿದಿರೆ : ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.2025 ಜನವರಿ12 ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು