ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ
ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ
ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ
ಕಡಬ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ನಮ್ಮ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು ೧೦೦ ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ೨೦೦ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ರೂ. ೧ ಕೋಟಿ ಅನುದಾನ ಇಡಲಾಗಿದೆ ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಸೋಮವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬೇಟಿ ನೀಡಿ ಪತ್ರಕತ್ರರೊಂದಿಗೆ ಮಾತನಾಡಿದರು.
ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸೋಮವಾರ ಸಾಯಂಕಾಲ ಬೇಟಿ ನೀಡಿದರು.ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಂಡರು. ಕಾರ್ಯನಿರ್ವಹಣಾ ಅಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ,
ಕಡಬ : ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆ ಬಳಿಯ ಬಾವಿಯ ದಂಡೆಯ ಮೇಲೆ ಕುಳಿತಿದ್ದ ಕೋಳಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ . ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬಂದಿಗಳು ಸುಳ್ಯ ಎಸಿಎಫ್ ಪ್ರವೀಣ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸತತ 3 ತಾಸುಗಳ ಕಾರ್ಯಾಚರಣೆ ನಡೆಸಿಚಿರತೆಯನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲೆತ್ತುವ ಯಶಸ್ವಿಯಾಗಿದ್ದಾರೆ . ಬಾವಿಯ
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಕಡಬ : ಸಾಮಾನ್ಯವಾಗಿ ಹಾವು ಇಲಿಯನ್ನು ತಿನ್ನುವುದನ್ನು ಕೇಳಿದ್ದೇವೆ , ನೋಡಿದ್ದೇವೆ . ಆದರೆ ಇಲ್ಲೊಂದು ಹಾವು ಇಲಿ ಫೈಟ್ನಲ್ಲಿ ಇಲಿಯೇ ಹಾವನ್ನು ಹಿಡಿದಳೆದು ನುಂಗಲು ಪ್ರಯತ್ನಪಡುವ ವೀಡಿಯೋವೊಂದು ವೈರಲ್ ಆಗಿದೆ . ಇದು ನಡೆದದ್ದು ಕಡಬ ಸಮೀಪದ ಕಳಾರದಲ್ಲಿ ಇಲ್ಲಿನ ಗಣೇಶ್ ಸ್ಟೋರ್ ಸಮೀಪ ಹಾವು ಮತ್ತು ಇಲಿಯ ಪೈಟ್ನಲ್ಲಿ ಕೊನೆಗೆ ಇಲಿಯೇ ಹಾವನ್ನು ಕಚ್ಚಿ ಎಳೆದಾಡುವ ದೃಶ್ಯ ಕಂಡು ಬಂದಿದೆ . ಈ ವಿಶ್ವಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ .
ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬುಧವಾರ ಬೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.ಅರ್ಚಕರು ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ದೇವಳದ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಮುಂದಿನ ವರ್ಷ ನಡೆಯಲಿರುವ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ವಿಜ್ಞಾಪನ ಪತ್ರವನ್ನು ಶಾಸಕ ಹರೀಶ್ ಪೂಂಜಾ ಬಿಡುಗಡೆ ಮಾಡಿದರು. ನೂಜಿಬಾಳ್ತಿಲ
ನಾನು ಇಂಧನ ಸಚಿವನಾಗಿದ್ದ ಸಂದರ್ಭ ವ್ಯಕ್ತಿಯೋರ್ವ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ಆತ ಅಧಿಕಾರಿಗಳನ್ನೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದ್ದು, ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಆಗಮಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮತನಾಡಿದರು.