Home ಕರಾವಳಿ Archive by category ಸುಳ್ಯ (Page 5)

ಕಡಬ: ಡಿ.23ರಂದು ಕುಟ್ರುಪ್ಪಾಡಿ ಮುಳಿಮಜಲಿನಲ್ಲಿ ಕಬಡ್ಡಿ ಪಂದ್ಯಾಟ

ದ.ಕ, ಜಿಲ್ಲಾ ಹಾಗೂ ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಕೇಪು ಕುಟ್ರುಪ್ಪಾಡಿ ಐಡಿಯಲ್ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಟೀಮ್ ಸಾರಂಗ್ ಸಾರಥ್ಯದಲ್ಲಿ ಮ್ಯಾಟ್ ಅಂಕಣದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.23ನೇ ಕಡಬ ಗ್ರಾಮದ ಮುಳಿಮಜಲು ಎಂಬಲ್ಲಿ ಸಂಜೆ ನಡೆಯಲಿದೆ ಎಂದು  ಟೀಮ್‌ಸಾರಂಗ್ ಮುಖಂಡ ಹರೀಶ್ ರೈ ಮೈಲೇರಿ ತಿಳಿಸಿದರು. ಅವರು

ಕುಕ್ಕೆ ಸುಬ್ರಹ್ಮಣ್ಯ: ದೇವರ ನೌಕಾವಿಹಾರ, ಅವಭೃತೋತ್ಸವ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಸಂಪನ್ನವಾಯಿತು.  ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿದಿವಿಧಾನ ನೆರವೇರಿಸಿದರು. ಶ್ರೀ ದೇವಳದ ಅರ್ಚಕರಾದ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯರು ಮತ್ತು

ಸುಳ್ಯ: ಉಜ್ವಲ್ ಯೋಜನೆಯಡಿ ಗ್ಯಾಸ್ ಸಂಪರ್ಕ ವಿತರಣೆ

ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ವಿತರಣಾ ಸಮಾರಂಭವು ಅರಂತೋಡು-ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಕು| ಭಾಗಿರಥಿ ಮುರುಳ್ಯ ಚಾಲನೆ ನೀಡಿದರು. ಅವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಿದ್ಧಗೊಂಡ ಆಕರ್ಷಕ ರಥ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಸಂಭ್ರಮದಲ್ಲಿದ್ದು, ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ರಥಗಳದ್ದೇ ಆಕರ್ಷಣೆ. ಜಾತ್ರೆಗೆ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಆಕರ್ಷಕ ಬೆತ್ತದ ರಥಗಳು ಭೂಷಣವಾಗಿದೆ. ಕಾರ್ತಿಕ ಮಾಸದ ಶುದ್ಧ ಪೌರ್ಣಿಮಿ ದಿನ ಸಹಸ್ರನಾಮಾರ್ಚನೆಯ ಬಳಿಕ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂದರ್ಭ ಎಳೆಯುವ ರಥಗಳಿಗೆ ಗೂಟ ಪೂಜಾ ಮೂಹೂರ್ತವನ್ನು ಕ್ಷೇತ್ರ ಪುರೋಹಿತರು ನೆರವೇರಿಸಿದ್ದರು. ಆನಂತರ

ಮಂಡೆಕೋಲು ಬಳಿ ಆನೆಗಳ ಹಿಂಡು : ಕಾಡು ಬಿಟ್ಟು ನಾಡಲ್ಲಿ ಓಡಾಟ

ಸುಳ್ಯ ತಾಲೂಕಿನ ಮಂಡೆಕೋಲು ಸುತ್ತಮುತ್ತ ಆನೆಗಳ ಹಿಂಡು ಒಂದು ತಳವೂರಿದ್ದು ಕಾಡಿಗಿಂತ ಹೆಚ್ಚಾಗಿ ನಾಡನ್ನು ಆಶ್ರಯಿಸಿದ್ದು, ಸುತ್ತ ಮುತ್ತ ಸಿಕ್ಕ ಕೃಷಿ ಬೆಳೆಗಳನ್ನೆಲ್ಲ ಒಂದು ಹದ ಮಾಡಿವೆ.ಒಂಬತ್ತು ಆನೆಗಳ ಈ ಹಿಂಡಿನಲ್ಲಿ ಒಂದು ಮರಿಯಾನೆ ಕೂಡ ಇದೆ. ಮರಿಯನ್ನು ಜತನದಿಂದ ನೋಡಿಕೊಳ್ಳುವ ಆನೆಗಳು ಜನರತ್ತ, ಜನ ನಿವಾಸಿಗಳತ್ತ ಸಿಟ್ಟಿನಿಂದಲೇ ಇರುವುದಾಗಿಯೂ, ಜನರು ಭಯದಿಂದ ಬದುಕುವ ವಾತಾವರಣ ಇದೆ ಎನ್ನಲಾಗಿದೆ. ಮಂಡೆಕೋಲು ಬಳಿಯ ಪಂಜಿಕಲ್ಲು ಎಂಬಲ್ಲಿ ಪಯಸ್ವಿನಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ – ಡಿ.10ರಿಂದ ಡಿ.24ರ ವರೆಗೆ ಚಂಪಾಷಷ್ಠಿ ಮಹೋತ್ಸವ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಶ್ರೀ ದೇವಳದಲ್ಲಿ ಮೂಲಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮೋಹನ್ ರಾಮ್ ಎಸ್ ಸುಳ್ಳಿ, ವ್ಯವಸ್ಥಾಪನ ಸಮಿತಿಯ ಸದಸ್ಯರು ಸೀತಾರಾಮ ಎಡಪಡಿತಾಯ, ಲೋಕೇಶ್, ಶ್ರೀಮತಿ ವನಜ ವಿ. ಭಟ್ , ಶೋಭಾ ಎಸ್ ಜಿ, ಮನೋಹರ ರೈ, ಪ್ರೀತಿ ಜಿಎಸ್ ಎನ್ ಪ್ರಸಾದ್, ದರ್ಬೆ ಪ್ರಸನ್ನ, ಶ್ರೀವಸ್ತ ವಿ. ಹಾಜರಿದ್ದರು.

ಕಡಬ: :ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದಲ್ಲಿ ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಲಳುತ್ತಿರುವ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಯಿತು. ಕಡಬ ವಲಯದ ಕಡಬ ಜನನಿ ಪ್ರಗತಿಬಂಧು ಸಂಘದ ಪ್ರಭಾಕರ ಶೆಟ್ಟಿಯವರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ರೂ 25000 ಸಹಾಯಧನ ವನ್ನು ವಿತರಿಸಲಾಯಿತು. ಕಡಬ ವಲಯದ ಪಿಜಕ್ಕಳ ತೇಜಸ್ ರವರು ಶಾರೀರಿಕ ಸಮಸ್ಶೆಯಿಂದ ನಡೆಯಲು ಸಾಧ್ಶವಾಗದಿದ್ದು

ಕಡಬ : ಕೊಣಾಜೆ ಆನೆ ದಾಳಿ ಶಂಕೆ; ದನ ಸಾವು

ಕಡಬ: ಕಡಬ ತಾಲೂಕು ಕೊಣಾಜೆಯ ತಮಿಳು ಸಿ.ಆರ್. ಸಿ ಕಾಲೋನಿ ಬಳಿ ದನವೊಂದು ರಾತ್ರಿ ವೇಳೆ ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಟದಲ್ಲಿ ನೀರಾವರಿ ಪೈಪ್

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ

ಕಡಬ: ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಂಧನ ಮುಕ್ತ: ಇಂದು ಸ್ವದೇಶಕ್ಕೆ ಆಗಮನ

ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಬ್ಯಾಂಕ್ ಖಾತೆ ಹ್ಯಾಕರ್ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು