Home ಕರಾವಳಿ Archive by category ಸುಳ್ಯ (Page 7)

ಸುಬ್ರಹ್ಮಣ್ಯ :ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ

ಸುಳ್ಯ :ಕೆವಿಜಿ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾಪ್ರಸಾದ್ ಗೆ ಜೀವಾವಧಿ ಶಿಕ್ಷೆ

ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ

ಸುಳ್ಯ: ಮೈರೋಲ್ ಹಣ್ಣು ಎಂದು ಭಾವಿಸಿ ಜ್ಯೂಸ್ ಮಾಡಿ ಕುಡಿದ ಮಹಿಳೆ ಸಾವು

ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಳ್ ಹಣ್ಣ ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟವರು. ಇವರ ಇದೇ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ

ಕಡಬ: ಪಟ್ಟಣ ಪಂಚಾಯತ್, ಗ್ಯಾರೇಜ್ ಮಾಲಕರ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ

ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಗ್ಯಾರೇಜ್ ಮಾಲಕರ ಹಾಗೂ ಸಹೋದ್ಯೋಗಿಗಳ ಸಂಘ (ರಿ ), ಕಡಬ, ಇವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಕಡಬ ಪಟ್ಟಣ ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ ಕಡಬದ ಶ್ರೀ ಗಣೇಶ್ ಬಿಲ್ಡಿಂಗ್ ಕಟ್ಟಡದ ಎದುರುಗಡೆ ನಡೆಯಿತು. ಕಾರ್ಯಕ್ರಮವನ್ನು ಕಡಬ ತಾಲೂಕು ಉಪ ತಹಸೀಲ್ದಾರ್ ಗೋಪಾಲ್ ಕಲ್ಲುಗುಡ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ವಚ್ಚತೆ ಪ್ರತಿಯೊಬ್ಬರ

ಕಡಬ: ಬಾಲಕಿ ಬರೆದ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ: ಟ್ವಿಟ್ಟರ್(x)ನಲ್ಲಿ ಸಂತಸ ಹಂಚಿಕೊಂಡ ಸಿದ್ದರಾಮಯ್ಯ

ಶಾಲೆಯ ಪಕ್ಕದ ಅಂಗಡಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ತಡೆಯಿರಿ ಎಂಬ ಬಾಲಕಿಯ ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಸ್ಪಂದಿಸಿದ್ದೂ,ಇದೀಗ ತನ್ನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸಾರ್ವಜನಿಕ ವಲಯದಿಂದ ಬರುತ್ತಿರುವ ಕೆಲವು ವಿಶೇಷ ವಿಚಾರಗಳಿಗೆ ತ್ವರಿತವಾಗಿ ಸ್ಪಂದಿಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಕೈಕಂಬದ ಸರ್ಕಾರಿ ಶಾಲೆಯಲ್ಲಿ

ಕಡಬ: ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ, ಪರಿಶೀಲನೆ

ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಐತ್ತೂರು ಕೋಕಲಾ ಸ್ಥಳವನ್ನು ಪರಿಶೀಲಿಸಿ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ನಂತರ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿರವರು ಭೇಟಿ ನೀಡಿದರು. ಮನೆಯಲ್ಲಿ ಚೋಮ ರವರ ಪತ್ನಿಯ ಜೊತೆ ಮಾತನಾಡಿ ಧೈರ್ಯ ತುಂಬಿದರು. ಸರ್ಕಾರದಿಂದ ಸಿಗುವ ಸೌಲಭ್ಯ ನೀಡುವುದಾಗಿ ಹೇಳಿದರು.

ಕಡಬ : ವ್ಯಕ್ತಿಯ ಮೇಲೆ ಕಾಡಾನೆ ದಾಳಿ- ಗಂಭೀರ ಗಾಯ

ಕಡಬ: ಐತ್ತೂರು ಗ್ರಾಮದ ನೇಲ್ಯಡ್ಕ ಎಂಬಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು, ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ.ಐತ್ತೂರು ಗ್ರಾಮದ ಗೇರ್ತಿಲ ನಿವಾಸಿ ಚೋಮ ಎಂಬವರು ಮರ್ದಾಳದಿಂದ ಕೊಣಾಜೆ ಮಾರ್ಗವಾಗಿ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದೆ.

ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: 6 ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2011ರ ಏಪ್ರಿಲ್ ತಿಂಗಳಿನಲ್ಲಿ ಎ.ಎಸ್. ರಾಮಕೃಷ್ಣ ಸುಳ್ಯ ನಗರದ ರಸ್ತೆಯೊಂದರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ

ಕಡಬ: ಮಸೀದಿ ಆವರಣದೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಬಂಧನ

ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಆಗಮಿಸಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು

ಕಡಬ : ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲು ಸುಳ್ಯ ಬ್ಲಾಕ್‍ನಿಂದ ಶಿಫಾರಸ್ಸು ಮಾಡಿಲ್ಲ, ಮಮತಾ ಗಟ್ಟಿ

ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್‍ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು ಕೆ.ಪಿ.ಸಿ.ಸಿ ಉಸ್ತುವಾರಿ ಮಮತಾ ಗಟ್ಟಿ ಸ್ಪಷ್ಟಪಡಿಸಿದರು. ಅವರು ಕಡಬ ಅನುಗ್ರಹ ಸಭಾಭವನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷ