Home Archive by category ಕರಾವಳಿ (Page 10)

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಕುಂದಾಪುರ:ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ. ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ

ಯಕ್ಷಾಂಗಣ ತಾಳಮದ್ದಳೆ ಸಪ್ತಾಹ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಾಂಗಣದಿಂದ ಕನ್ನಡದ ನುಡಿ ಹಬ್ಬ ಆಚರಣೆ: ಕೆ.ಕೆ.ಶೆಟ್ಟಿ ಮಂಗಳೂರು: ‘ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಾರವಿಡೀ ಯಕ್ಷಗಾನ ತಾಳಮದ್ದಳೆಗಳನ್ನು ನಡೆಸುವ ಮೂಲಕ ಯಕ್ಷಾಂಗಣ ಸಂಸ್ಥೆ ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವನ್ನು ಆಚರಿಸುತ್ತಿದೆ. ಸುಲಲಿತವಾದ ಕನ್ನಡ ಭಾಷೆಯನ್ನು ಯಕ್ಷಗಾನದಂತೆ ಸಶಕ್ತವಾಗಿ ಬಳಸಿಕೊಳ್ಳುವ ಕಲಾ ಮಾಧ್ಯಮ ಬೇರೊಂದಿಲ್ಲ’ ಎಂದು ಅಹ್ಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ

ವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಯ ಅನಾವರಣಕ್ಕೆ ಪತ್ರಿಕೆಯು ಉತ್ತಮ ವೇದಿಕೆಯಾಗಲಿ- ಅಭಯಚಂದ್ರ ಜೈನ್

ಮೂಡುಬಿದಿರೆ : ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ದ್ವೈಮಾಸಿಕ ಪತ್ರಿಕೆ “ವಾಯ್ಸ್ ಆಫ್ ವೈಬ್ರೆಂಟ್”ನ ಬಿಡುಗಡೆ ಸಮಾರಂಭವು ಸೋಮವಾರ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಾಯ್ಸ್ ಆಫ್ ವೈಬ್ರೆಂಟ್ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಯೊಂದಿಗೆ ಪಠ್ಯೇತರ ಕೌಶಲವನ್ನು ಬರವಣಿಗೆಯ ರೂಪದಲ್ಲಿ ಈ ಪತ್ರಿಕೆಯಲ್ಲಿ ಪ್ರಕಟಿಸಬೇಕು. ಸಂಸ್ಥೆಯು ತಮಗೆ

ಮಿಸ್‌ ಮಲೆನಾಡು ಸೌಂದರ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ರಹಿನಿ ವಿನ್ನರ್

ಮೂಡುಬಿದಿರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16ರಂದು ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್‌ ಆಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯ 7 ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಈಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮೂಡುಬಿದಿರೆ ಸಂಪಿಗೆ ನಿವಾಸಿ ಪ್ರಕಾಶ್ ಪೂಜಾರಿ- ಗೃಹಿಣಿ ಸೌಮ್ಯ ದಂಪತಿಯ ಪುತ್ರಿ.

ಬಾಲಕ-ಬಾಲಕಿಯರ ರಾಜ್ಯಮಟ್ಟದ ಯೋಗಾಸನ ಸ್ಪಧೆ೯: ಆಳ್ವಾಸ್ ಗೆ ತಂಡ ಪ್ರಶಸ್ತಿ

ಮೂಡುಬಿದಿರೆ: 12 ಸ್ಪಧಿ೯ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ ನಾಗಮಂಗಲದಲ್ಲಿ ನಡೆದ ರಾಜ್ಯ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಆಳ್ವಾಸ್ ಶಾಲೆಯ 12 ಯೋಗ ಕೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ […]

ಕಾಪು : ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಪಡು ಕುತ್ಯಾರು ಆರನೇ ವಾರ್ಷಿಕ ಮಹಾಸಭೆ

ಕಾಪು ತಾಲೂಕು ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ” ಆರನೇ ವಾರ್ಷಿಕ ಮಹಾಸಭೆಯು” ದಿನಾಂಕ: 16.11.2025ರಂದು ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ದುರ್ಗಾ ಮಂದಿರದಲ್ಲಿ ಜರಗಿತು. ಮಹಾಸಭೆಯು ಸುರೇಶ್ ಆರ್ ಆಚಾರ್ಯ ರವರ ಸ್ವಾಗತದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಶಶಿಧರ್ ಪುರೋಹಿತರು, ಸಮಾಜ ಸೇವಕರು ಸಮಾನ ಮನಸ್ಕರ ತಂಡದ ರೂವಾರಿ ರವರು ಭಾಗವಹಿಸಿದ್ದರು. ಭಾಗವಹಿಸಿ

ಬೆಳ್ತಂಗಡಿ : ಕುತ್ರೋಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ, ಓರ್ವ ಬಾಲಕ ಸಾವು

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ

ವಿರಾಜಪೇಟೆ ಗೌಡ ಸಮಾಜದಿಂದ ಅದ್ದೂರಿ ಅಭಿನಂದನಾ ಕಾರ್ಯಕ್ರಮ

ವಿರಾಜಪೇಟೆ ಗೌಡ ಸಮಾಜದಲ್ಲಿ ಇಂದು ಪೂಜ್ಯರಾದ ಕುರುoಜಿ ಜಾನಕಿ ವೆಂಕಟರಮಣ ಗೌಡರ ಸುಪುತ್ರರಾದ ಡಾ.ಚಿದಾನಂದ ಗೌಡರು ಮತ್ತು ಡಾ.ರೇಣುಕಾ ಪ್ರಸಾದ್ ರವರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಅಭಿನಂದನೆ ಯನ್ನು ಸ್ವೀಕರಿಸಿ ಮಾತನಾಡಿದ ಡಾ. ಚಿದಾನಂದರವರು ಸುಮಾರು 20 ವರ್ಷಗಳಿಂದ ಆಗಬೇಕಿದ್ದ ಕೆಲಸವನ್ನು ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಮತ್ತು ಅವರ ತಂಡವು ನಮ್ಮೊಂದಿಗೆ ಬಂದು ಚರ್ಚಿಸಿ ಆದ ನಂತರ ಕೆಲವು ಕಾನೂನು ಕ್ರಮಕ್ಕೆ

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು. ನಾರಾಯಣಗುರು ಆಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ್‌ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾತನಾಡಿ ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು,