ಮೂಡುಬಿದಿರೆ: ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್
ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಶಾನ್ ಎಂ ಗೆ ಚಿನ್ನದ ಪದಕ. ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದಿರುತ್ತಾರೆ. […]
ತುಳು ಅಕಾಡೆಮಿ ಪ್ರಕಟಿಸಿದ ಮನು ಇಡ್ಯಾರ ನಾಟಕ ಕೃತಿಗಳ ಬಿಡುಗಡೆ ಮಂಗಳೂರು: ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು. ಕೆ .ಕುಮಾರನಾಥ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಕಾಡೆಮಿ ಪ್ರಕಟಿಸಿರುವ
ಮೂಡುಬಿದಿರೆ : ಕಳೆದ ಐದು ವಷ೯ಗಳ ಹಿಂದೆ ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಚೇತನ್ ಎಂಬವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ ಆರೋಪಿ ಚಿದಾನಂದ ಪರಶುನಾಯ್ಕಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆಳ್ವಾಸ್ ಕ್ಯಾಂಟೀನ್ ನಲ್ಲಿ 2020 ರ ಅಕ್ಟೋಬರ್ 30 ರಂದು ಈ ಪ್ರಕರಣ ನಡೆದಿತ್ತು. ಚಿದಾನಂದ ಮತ್ತು ಚೇತನ್ ಎಂಬವರು ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸದ
ಮೂಡುಬಿದಿರೆ :ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾ ಅಧೀನದಲ್ಲಿ ನಡೆಯುತ್ತಿರುವ ಶ್ರೀ ರಾಮ ದಿಗ್ವಿಜಯ ರಥಯಾತ್ರೆಯು ಮಂಗಳೂರಿನ ಮಂಗಲರಾಮ ಜಪಕೇಂದ್ರದಿಂದ ಬುಧವಾರ ಮೂಡುಬಿದಿರೆಗೆ ಆಗಮಿಸಿತು. ಆಗಮಿಸಿದ ರಥವನ್ನು ಭಜಕರು ಹನುಮಂತ ದೇವಳದ ಎದುರು ಪೂರ್ಣಕುಂಭ, ಮಂಗಳವಾದ್ಯ, ಭಜನೆ ಸಂಕೀರ್ತನೆಯೊಂದಿಗೆ ವೆಂಕಟರಮಣ ದೇವಳದ ಎದುರು ಬರಕೊಂಡರು. ಮೂಡುವೇಣುಪುರದ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ವಿದ್ಯಾನಿಧಿ ಜಪ ಕೇಂದ್ರದಲ್ಲಿ ರಥವನ್ನು
ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ತಿಂಗಳು
ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿಯಿಂದ ಸನ್ಮಾನ ಸುಬ್ರಹ್ಮಣ್ಯ.ಸುಳ್ಯದಲ್ಲಿ ಮೂರು ದಿನಗಳ ಕಾಲ ನಡೆದ ವೈಟ್ ಲಿಫ್ಟಿಂಗ್ ನಲ್ಲಿ ರವಿ ಕಕ್ಕೆಪದವು ಅವರ ಸುಪುತ್ರ ಗಣೇಶ್ ಸುಬ್ರಹ್ಮಣ್ಯ ಅವರು ಎರಡು ಗೋಲ್ಡನ್ ಮಡೆಲ್ ಪಡೆದಿದ್ದಾರೆ.ಈ ಹಿನ್ನೆಲೆಯಲ್ಲಿ ನ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗಣೇಶ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಇದೇ ಸಂದರ್ಭ ಬೆಳ್ಳಿ ರಥ ಸಮರ್ಪಣಾ
ಮಂಗಳೂರು : ತುಳು ಭಾಷೆಯಲ್ಲಿ ಅಪಾರವಾದ ಸಾಹಿತ್ಯವಿದೆ , ಈ ಸಾಹಿತ್ಯ ಕೃತಿಗಳ ಪರಿಚಯ ಮಾಡಿಕೊಳ್ಳಲು ಅಕಾಡೆಮಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ, ಈ ಮೂಲಕ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಪ್ರೇರಣಾದಾಯಿಯಾಗಿ ಅಕಾಡೆಮಿ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ
ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ. ಅವರು ಲೇಡಿ ಸೂಪರ್ ಸ್ಟಾರ್ ಎಂದೇ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕುಕ್ಕೆ ಶ್ರೀ
ಸುಬ್ರಹ್ಮಣ್ಯ : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ,ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿರುವರು. ಬೆಳಗ್ಗೆ ಹೊತ್ತು ಮೂರು ಬ್ಯಾಚಿನಲ್ಲಿ ಆಶ್ಲೇಷ ಬಲಿ ಸೇವೆ ನಡೆಯುತ್ತಿದ್ದು ಮೂರು ಬ್ಯಾಚುಗಳಲ್ಲಿ ಕೂಡ ಅಧಿಕ ಸಂಖ್ಯೆಯ ಭಕ್ತಾದಿಗಳು ಸೇವೆ ಸಲ್ಲಿಸಿರುವರು ಹಾಗೆಯೇ ಮಧ್ಯಾಹ್ನದ ನಾಗ ಪ್ರತಿಷ್ಠ ಮಂಟಪದ ಎದುರು ಸ್ಥಳವಕಾಶ ಕಡಿಮೆ




























