Home Archive by category ಕರಾವಳಿ (Page 14)

ಬಿಜೆಪಿ ಸುಳ್ಯ ಮಂಡಲದಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರತಿ ಮುರುಳ್ಯ, ಜಿಲ್ಲಾ

ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ

ಹೆಜಮಾಡಿ: ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಜಂಟಿ ಆಶ್ರಯದಲ್ಲಿಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಲೇಡಿಗೋಷನ್‌ ಆಸ್ಪತ್ರೆ ಮಂಗಳೂರು ಅವರ ಸಹಯೋಗದಲ್ಲಿ ರಕ್ತದಾನ ಶಿಬಿರದಿನಾಂಕ 05.10.2025ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ 1.00ರ ವರೆಗೆ ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿ. ಪ್ರಧಾನ ಕಛೇರಿ, ಕರ್ಕೇರ ಟವರ್ಸ್ ಕಣ್ಣಂಗಾರ್ ಬೈಪಾಸ್, ಹೆಜಮಾಡಿ ಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ

ಮಂಜೇಶ್ವರ: ನಾಲ್ಕನೇ ತರಗತಿಯ ವಿದ್ಯಾರ್ಥಿ ಕುಸಿದು ಬಿದ್ದು ಸಾವು

ಮಂಜೇಶ್ವರ: ನಾಲ್ಕನೇ ತರಗತಿಯ ವಿದ್ಯಾರ್ಥಿ ಶಾಲೆಯ ಕ್ರೀಡಾ ಸ್ಪರ್ಧೆಯ ಮಧ್ಯೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮಂಗಲ್ಪಾಡಿ ಜಿಎಲ್‌ಪಿ ಶಾಲೆಯ ವಿದ್ಯಾರ್ಥಿ ಹಸನ್ ರಝಾ (10) ಸಾವನ್ನಪ್ಪಿದ ದುರ್ದೈವಿ . ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶಾಲೆಯ ಕ್ರೀಡಾ ಸ್ಪರ್ಧೆ ನಡೆಯುವಾಗ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಉಡುಪಿ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆ

ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು ಪ್ರಸ್ತುತ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಆಯುರ್ವೇದ ದಿನಾಚರಣೆ

ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ ಸಾಮಾನ್ಯರಿಗೆ ಅತ್ಯಾವಶ್ಯಕ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ ಯವರು ಮಾತನಾಡಿ

ದೇವಳದ ಸೇವಾ ಮೌಲ್ಯ ಏರಿಸಿದ್ದು ಕಾಂಗ್ರೆಸ್ ಸರಕಾರವೆಂಬುದು ಬಿಜೆಪಿಯಿಂದ ಅಪಪ್ರಚಾರ : ಬ್ಲಾಕ್ ಕಾಂಗ್ರೆಸ್ ದೂರು

ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಮೂಡುವಂತೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.ಬಿಜೆಪಿಯ ಐಟಿ ಸೆಲ್,ವಾಟ್ಸಾಪ್ ಮತ್ತು ಫೇಸ್ ಬುಕ್ ಗಳಂತಹ ಸಾಮಾಜಿಕ

ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ ಗುದ್ದಲಿ ಪೂಜೆ

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ

ಡಾ. ಎಂ. ಮೋಹನ ಆಳ್ವ ಅವರಿಗೆ ‘ಕೀರಿಕ್ಕಾಡು ಪ್ರಶಸ್ತಿ ‘

ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ “ಕೀರಿಕ್ಕಾಡು ಪ್ರಶಸ್ತಿ”ಯನ್ನುಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ

ಮಹಿಳಾ ಕಥಾಹಂದರವಿರುವ ಡಾ. ಶಯದೇವಿಸುತೆ ಮರವಂತೆಯವರ “ಕೆಂದಾವರೆ” ಕೃತಿಗೆ ಸಿನಿಮಾ ರೂಪ

ವಿನೋದ್‌ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಡಾ. ಶಯದೇವಿಸುತೆ ಮರವಂತೆ (ಡಾ. ಜ್ಯೋತಿ ಜೀವನ್‌ಸ್ವರೂಪ್) ಅವರ ಹೊಚ್ಚ ಹೊಸ ಮಹಾ ಕಾದಂಬರಿಯು ಸಿನಿಮಾ ಶೈಲಿಯ ಬರವಣಿಗೆಗಳಿಂದ ವಿಶೇಷ ಮುಖಪುಟ ವಿನ್ಯಾಸದೊಂದಿಗೆ ಪುನಃ ಸಿದ್ಧತೆಗೊಂಡಿದ್ದು, ಅದನ್ನ ಇತ್ತೀಚೆಗಷ್ಟೇ ದಿನಾಂಕ 28/08/2025ರಂದು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷೆ (ಮಕ್ಕಳ ವೈದ್ಯೆ & ಪ್ರಾಧ್ಯಾಪಕಿ), ಡಾ. ನಾಗಲಕ್ಷ್ಮೀ ಚೌಧರಿಯವರು ಗೌರಿ-ಗಣೇಶ ಚತುರ್ಥಿ ಹಬ್ಬದ

ಹೃದಯಾಘಾತಕ್ಕೆ ವಿವಾಹಿತೆ ಬಲಿ

ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ (24ವ)ಮೃತಪಟ್ಟ ಮಹಿಳೆ. ಈಕೆ ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.