Home Archive by category ಕರಾವಳಿ (Page 164)

ಉಡುಪಿ: ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸದಿರಲಿ – ಜಗದೀಶ್ ಶೆಟ್ಟರ್

ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಹೇಳಿದರು. ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಯೋಜಿಸಿದ್ದ

ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ : ಶೈಕ್ಷಣಿಕ ಗೋಡೆ ಬರಹದ ಅನಾವರಣ

ಮಂಗಳೂರಿನ ಪರಪಾದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗೋಡೆ ಬರಹವನ್ನು ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅನಾವರಣಗೊಳಿಸಿದರು. ಕಾರ್ಯಕ್ರಮವು ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ ಮತ್ತು ಪ್ರಥ್ವಿ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವೇರಿತು. ಇದೇ ವೇಳೆ ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅವರು ಮಾತನಾಡಿ, ಮುತ್ತೂಟ್‍ನ ಸಿಎಸ್‍ಆರ್ ಕಾರ್ಯಕ್ರಮವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ

ಕಾಂಗ್ರೆಸ್ ಸೇರಲು ತಾಲೂಕು, ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ :ಜಗದೀಶ್ ಶೆಟ್ಟರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲಾ ತಾಲೂಕು ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ

ಬಂಟ್ವಾಳ: ಕುಲಾಲ ಸುಧಾರಕ ಸಂಘದಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ

ಮಂಗಳೂರು: ತನಿಷ್ಕ್ ಜ್ಯುವೆಲ್ಲರಿಯಲ್ಲಿ ವರಮಹಾಲಕ್ಷ್ಮೀ ಪೂಜೆ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಮಂಗಳೂರಿನ ಜ್ಯೋತಿ ಸರ್ಕಲ್‍ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‍ಗಳನ್ನು ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ಗ್ರಾಹಕರಾದ ಭರತ್ ಉಳ್ಳಾಲ್ ದಂಪತಿಗಳು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಟಾಟಾ ಎಂದರೆ ಜಗತ್ತಿನಲ್ಲಿಯೇ ಒಂದು ನಂಬಿಕೆಯ ಹೆಸರಾಗಿದ್ದು,

ಮಂಗಳೂರು: ಕಿಡ್ನಾಪ್ ಮಾಡಿ ಸುಲಿಗೆ ಮಾಡಿದ ಪ್ರಕರಣ: ಆರೋಪಿಯ ಬಂಧನ

ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಪಾಂಡೇಶ್ವರ ಪೆÇಲೀಸರು ಬಂಧಿಸಿದ್ದಾರೆ.ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ ಎಂಬವರು ಕಿಡ್ನಾಪ್ ಮಾಡಿ 5 ಲಕ್ಷ ರೂ. ಹಾಗೂ ಕಾರು ನೀಡುವಂತೆ ಬೇಡಿಕೆ ಇಟ್ಟಿದ್ದರು. ಅವರು ಕೊಡಲು ನಿರಾಕರಿಸಿದಾಗ ಅವರ

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ

ಮಂಗಳೂರು || ಎಸ್‍ಬಿಇಬಿಎ “ಕೌಮಾರಂ”-ಬಾಲ ರೋಗ ಚಿಕಿತ್ಸೆಯ ವಿಚಾರ ಸಂಕಿರಣ

ಭಾರತ್ ಮಿಷನ್ ಬಿಷಾಕ್ ಬಿಎಮ್‍ಬಿ ಮಂಗಳೂರು ಘಟಕದ ವೈದ್ಯರುಗಳಾದ ಡಾ. ಹರಿಕೃಷ್ಣ ಭಟ್, ಡಾ. ಸೌಮ್ಯಶ್ರೀ ಕೆ ಎಂ ಮತ್ತು ಡಾ. ಜ್ಯೋತಿ ಭಾರಧ್ವಾಜ್ ರವರು ಆಯೋಜಿಸಿದ ಎಸ್‍ಬಿಇಬಿಎ “ಕೌಮಾರಂ” – ಬಾಲ ರೋಗ ಚಿಕಿತ್ಸೆಯ ಬಗ್ಗೆ ರಾಷ್ಟ್ರೀಯ ಮಟ್ಟದ 50ನೇ ವಿಚಾರ ಸಂಕಿರಣವು ಮಂಗಳೂರು ನಗರದ ಜಿ. ಎಚ್. ಎಸ್ ರೋಡ್‍ನ ಹೋಟೆಲ್ ವರ್ದ ಸಾಫ್ರೋನ್‍ನಲ್ಲಿ ಸಂಪನ್ನಗೊಂಡಿತು. ಭಾರತದ ವಿವಿಧ 14 ರಾಜ್ಯಗಳಿಂದ ಬಂದ ಆಯುರ್ವೇದ

ಮಂಗಳೂರು: ಅದ್ಯಪಾಡಿ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಂಗಳೂರಿನ ಅದ್ಯಪಾಡಿ ಶ್ರೀ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್ ಅವರು, ಪೂಜ ವಿಧಿ ವಿಧಾನ ನೆರವೇರಿಸಿದರು. ಊರ ಪರ ವೂರ ಹಾಗೂ ಬೈಲು ಮಾಗಣೆಯ ಸಮಸ್ತ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಕ್ಷೇತ್ರದ ಆಡಳಿತ ಮಂಡಳಿಯವರು ಹಾಗೂ ಮೊಕ್ತೇಸರರದ ಮೋನಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.