Home Archive by category ಕರಾವಳಿ (Page 167)

ಪಾಲಡ್ಕ ಗ್ರಾಮ ಪಂಚಾಯತ್ : ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಸಿಕ್ವೇರಾ ಆಯ್ಕೆ

ಮೂಡುಬಿದಿರೆ: ಪಾಲಡ್ಕ ಗ್ರಾ.ಪಂಚಾಯತ್ ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಸಿಕ್ವೇರಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಗಾದಿಗೆ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದ್ದು, ಪಂಚಾಯತ್‌ದಲ್ಲಿದ್ದ ಏಕೈಕ ಮಹಿಳೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಪಾಲಾಗಿದೆ. ಬಿಜೆಪಿ ಪಕ್ಷದ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಪ್ರವೀಣ್ ಸಿಕ್ವೇರಾ ಅವರು ಕಾಂಗ್ರೆಸ್ ಉಪಾಧ್ಯಕ್ಷ

ಬಂಟ್ವಾಳ: ನೀರಪಾದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳ ಕೃಷಿ ಪ್ರೇಮ

ಬಂಟ್ವಾಳ: ಬಾಳ್ತಿಲ ಗ್ರಾಮದ ನೀರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಿ, ಬಳಿಕ ಸ್ಥಳೀಯ ಗದ್ದೆಯೊಂದರಲ್ಲಿ ಬತ್ತದ ನೇಜಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಶಾಲೆಯ ನಾಲ್ಕು ಗೋಡೆಯ ಮಧ್ಯೆ ಕಲಿಯುವ ವಿದ್ಯೆಯೊಂದಿಗೆ ಪ್ರಕೃತಿಯ ಮಡಿಲಲ್ಲಿ, ಕೆಸರು ಗದ್ದೆಯಲ್ಲಿ ಮೇಟಿ ವಿದ್ಯೆಯನ್ನು ಕರಗತಮಾಡಿಕೊಂಡಿದ್ದಾರೆ.ತುಳುನಾಡಿನಲ್ಲಿ ಬತ್ತದ ಬೇಸಾಯ ಕಡಿಮೆಯಾಗುತ್ತಿದೆ, ಯುವಕರು ಉದ್ಯೋಗ

ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮ ಪಂಚಾಯತ್ ಎರಡನೇ ಬಾರಿಗೆ SDPI ತೆಕ್ಕೆಗೆ

ಮಂಗಳೂರು : ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ SDPI ಬೆಂಬಲಿತ ಅಭ್ಯರ್ಥಿಗಳಾದ ಪ್ರೇಮ ಅದ್ಯಕ್ಷರಾಗಿ ಇಲ್ಯಾಸ್ ಪಾದೆ ಉಪಾಧ್ಯಕ್ಷ ರಾಗಿ ಅವಿರೋದವಾಗಿ ಆಯ್ಕೆಯಾಗಿ ಪಂಚಾಯತ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮೀಸಲಾತಿ ನಿಗದಿಯಾಗಿತ್ತು . ಒಟ್ಟು ಒಂಬತ್ತು ಸದಸ್ಯ ಬಲ ಹೊಂದಿರುವ

ಬೈಂದೂರು: ಅಶಕ್ತರ ಬಾಳಿಗೆ ಬೆಳಕಾದ ಬೆಂಕಿ ಮಣಿ ಸಂತು: ಜಾತ್ರೆಗಳಲ್ಲಿ ವೇಷ ಹಾಕಿ ಹಣ ಸಂಗ್ರಹ

ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮರವಂತೆ ಶ್ರೀ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆಯಲ್ಲಿ ಅಶಕ್ತರ ಚಿಕಿತ್ಸಾ ಸಹಾಯಾರ್ಥವಾಗಿ ಹಣ ಸಂಗ್ರಹಿಸುವ ಮೂಲಕ ಅಶಕ್ತಿರ ಬಾಳಿಗೆ ಬೆಳಕಾದ ಬೆಂಕಿ ಮಣಿ ಸಂತು ಅವರು. ಬೆಂಕಿ ಮಣಿ ಸಂತು ಅಶಕ್ತರ ಚಿಕಿತ್ಸಾ ಸಹಾಯರ್ಥ ವಿಶೇಷ ವೇಷ ಧರಿಸಿ ಹಣಸಂಗ್ರಹಣೆ ಮಾಡುತ್ತಿರುವುದು ಇದೆ ಮೊದಲೇನಲ್ಲ… ಅದೆಷ್ಟೋ ಅನಾರೋಗ್ಯ ಪೀಡಿತರಿಗೆ ವಿವಿಧ ಜಾತ್ರೆಯಲ್ಲಿ ವೇಷ ಹಾಕುವುದರ ಮೂಲಕ ಹಣವನ್ನು

ಮಂಜೇಶ್ವರ: ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ

ಮಂಜೇಶ್ವರ : ಮಂಜೇಶ್ವರ ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್‍ನ ಆಶ್ರಯದಲ್ಲಿ ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ ಮಚ್ಚಂಪ್ಪಾಡಿ ಮದ್ರಸದಲ್ಲಿ ನಡೆಯಿತು. ಪಿ. ಎಚ್.ಅಬ್ದುಲ್ ಹಮೀದ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಅಬ್ದುಲ್ ಬಾಸಿತ್ ಹುದವಿ ಪ್ರಾರ್ಥನೆಗೈದರು. ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಕಾಸರಗೋಡು ಜಿಲ್ಲಾ ಮುಶಾವರ ಸದಸ್ಯ ಅಬ್ದುಲ್ ಮಜೀದ್ ದಾರಿಮಿ ಪಯ್ಯಕ್ಕಿ ಸಭೆಯನ್ನು ಉದ್ಘಾಟಿಸಿದರು. ಅಬ್ದುಲ್ ಅಝೀಝ್ ಹಾಜಿ ಮಚ್ಚಂಪಾಡಿ

ಸುಳ್ಯ: ತಾಲೂಕು ಮಟ್ಟದ ಚೆನ್ನೆಮಣೆ ಆಟದ ಸ್ಪರ್ಧೆ

ತುಳುನಾಡಿನ ಜಾನಪದ ಕ್ರೀಡೆಗಳಲ್ಲೊಂದಾದ ಚೆನ್ನೆಮಣೆ ಆಟ ಇಂದು ನಶಿಸಿ ಹೋಗುವ ಹಂತದಲ್ಲಿದೆ. ಚೆನ್ನೆಮಣೆ ಆಟದ ಬಗ್ಗೆ ಹಿರಿಯರು, ಪೋಷಕರು ಇಂದಿನ ಮಕ್ಕಳಿಗೆ ತಿಳಿಸುವ ಜೊತೆಗೆ ಆಟವನ್ನು ಕಲಿಸುವ ಮೂಲಕ ಚೆನ್ನೆಮಣೆ ಆಟದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹೇಳಿದರು. ಅವರು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಶಾಲಾ ಶಿಕ್ಷಣ ಇಲಾಖೆ, ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ

ಬಿಸಿ ರೋಡ್‍ನ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ: ನಳಿನ್

ಬಂಟ್ವಾಳ: 26.18 ಕೋಟಿ ರೂ ಅನುದಾನದ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆಯಾಗಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿ ಈ ವಿಚಾರವನ್ನು ತಿಳಿಸಿದರು. ನಮ್ಮ ಬೇಡಿಕೆಯಂತೆ ಜಿಲ್ಲೆಯ ಮೂರು ರೈಲ್ವೆ

ಮಂಗಳೂರು ಪ್ರೀಮಿಯರ್ ಕಬಡ್ಡಿಲೀಗ್ : ಖಾದ್ಯ ಪ್ರಿಯರಿಗಾಗಿ ಫುಡ್ ಫೆಸ್ಟಿವಲ್

ವಿ.ಆರ್. ಯುನೈಟೆಡ್ ಮಂಗಳೂರು ಸಂಸ್ಥೆ ವತಿಯಿಂದ ಅ. 18ರಿಂದ 20ರ ವರೆಗೆ ಮಧ್ಯಾಹ್ನ 2ರಿಂದ ರಾತ್ರಿ 10ರವರೆಗೆ ನಗರದ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ಆಹಾರ ಉತ್ಸವ ಏರ್ಪಡಿಸಲಾಗಿದೆ. ಪ್ರೊಕಬಡ್ಡಿ ಆಟಗಾರರನ್ನೊಳ ಗೊಂಡಂತೆ ಒಟ್ಟು 8 ತಂಡಗಳು ಈ ಕಬಡ್ಡಿ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿ ಆರ್ ಯುನೈಟೆಡ್ ಸಂಸ್ಥೆ ಕೋಶಾಕಾರಿ ಸುದೇಶ್‌ ಭಂಡಾರಿ ಇರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆ. 18ರಂದು ಆಹಾರ

ಅಡ್ಯನಡ್ಕ : ಪ್ರಿಂಟಿಂಗ್ ಪ್ರೆಸ್ ಮಾಲಕ ಬಾವಿಗೆ ಬಿದ್ದುಆತ್ಮಹತ್ಯೆ

ಪುತ್ತೂರು:ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿ ವ್ಯವಹಾರ ನಿರ್ವಹಿಸುತ್ತಿದ್ದ ಪುತ್ತೂರು ಪೋಳ್ಯ ನಿವಾಸಿಯೊಬ್ಬರು ಮನೆ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.16ರಂದು ಬೆಳಕಿಗೆ ಬಂದಿದೆ. ಅಡ್ಯನಡ್ಕದಲ್ಲಿ ಅನುಗ್ರಹ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪೋಳ್ಯ ನಿವಾಸಿ ಪದ್ಮಯ್ಯ ಗೌಡ(50ವ)ರವರು ಮೃತಪಟ್ಟವರು.ಪೋಳ್ಯ ದಿ.ಲಿಂಗಪ್ಪ ಗೌಡ ಅವರ ಪುತ್ರ ಪದ್ಮಯ್ಯ ಗೌಡ ಅವರು ಆರಂಭದಲ್ಲಿ ಪುತ್ತೂರಿನಲ್ಲಿ ಹುಸೈನ್ ಅವರ ಮಾಲಕತ್ವದ ಕೆನರಾ

ಶತಮಾನೋತ್ಸವ ಸಂಭ್ರಮದಲ್ಲಿರುವ ಕುಳೂರು ಶಾಲೆಯಲ್ಲಿ ಸ್ಮರಣೀಯ ಸ್ವಾತಂತ್ರ್ಯೋತ್ಸವದ ಆಚರಣೆ

ದೇಶದ ಐಕ್ಯತೆಯನ್ನು ಒಂದೇ ಸೂರಿನಡಿಯಲ್ಲಿ ತರುವ ಭಾರತದ ಅಭಿಮಾನದ ಆಚರಣೆಯಾದ 77 ನೇ ಸ್ವಾತಂತ್ರ್ಯೋತ್ಸವವನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.         ಶತಮಾನೋತ್ಸವವನ್ನು ಆಚರಿಸುತ್ತಿರುವ ಕುಳೂರು ಶಾಲೆಯಲ್ಲಿ ಈ ವರ್ಷದ ಸ್ವಾತಂತ್ರ್ಯೋತ್ಸವವು ಸ್ಮರಣೀಯವಾಯಿತು. ಆಕರ್ಷಕ ಮೆರವಣಿಗೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಬಳಿಕ ಶಾಲಾ ಶತಮಾನೋತ್ಸವ ಸಮಿತಿಯವರು ಕೊಡುಗೆ ನೀಡಿದ ನೂತನ ಧ್ವಜಸ್ತಂಭದ ಲೋಕಾರ್ಪಣೆ