Home Archive by category ಕರಾವಳಿ (Page 19)

ದಿಲ್ಲಿಯ ವಾಯು ಮಾಲಿನ್ಯ ಮತ್ತು ರಾಜಕೀಯ ಕೊಳೆ

ದಿಲ್ಲಿಯ ಗಾಳಿಯ ಗುಣಮಟ್ಟವು ಅತಿ ಕೆಟ್ಟದಾಗಿ ಬದಲಾಗುತ್ತ ಸಾಗಿದೆ. ಅತಿಯಾದ ವಾಹನ ದಟ್ಟಣೆ ಮತ್ತು ಅಂಗಾರಾಮ್ಲ ಹೊರ ಸೂಸುವಿಕೆಯೆ ಇದಕ್ಕೆ ಕಾರಣ ಎನ್ನಲಾಗಿದೆ. ಭಾರತದ ರಾಜಧಾನಿಯ ಗಾಳಿ ಒಂದೇ ಅಲ್ಲ ರಾಜಕೀಯ ಗಾಳಿಯೂ ಕೆಟ್ಟು ಕೂತಿದೆ ಎನ್ನುವವರಿದ್ದಾರೆ. ರಾಜಕೀಯ ಗಾಳಿ ಕೆಟಿದ್ದರೆ ಅದನ್ನು ಸರಿ ಪಡಿಸಲು ಮತದಾರರಿಗೆ ಅವಕಾಶವಿದೆ. ಮತ ಯಂತ್ರ ಸಂಚು ಮಾಡಿದರೆ ಕಷ್ಟ.

ಪಡುಬಿದ್ರಿಯಲ್ಲಿ ಆತಂಕ ಸೃಷ್ಟಿಸಿದ ಬೆಂಕಿ ಅನಾಹುತ

ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್‌ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ

ಉಳ್ಳಾಲ : ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ ಮರಳು ಸಾಗಾಟ

ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದು ನಡೆಸಿದ

ಮೂಡಬಿದಿರೆ : ಮಾ. 23ರಂದು ದೊಡ್ಡಮನೆ ರಸ್ತೆಯಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

ಸಾರ್ವಜನಿಕ ಶ್ರೀ ಶನಿಪೂಜಾ ಸಮಿತಿ ದೊಡ್ಡಮನೆ ರಸ್ತೆ ಮೂಡಬಿದಿರೆ ಇದರ ಆಶ್ರಯದಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಮಾರ್ಚ್ 23ರಂದು ದೊಡ್ಡಮನೆ ರಸ್ತೆಯ ಅಶ್ವತ್ಥಕಟ್ಟೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಮಾರೂರು ಖಂಡಿಗ ಶ್ರೀಯುತ ರಾಮದಾಸ ಅಸ್ರಣ್ಣ ಅವರ ನೇತೃತ್ವದಲ್ಲಿ ಶನಿಪೂಜೆಯು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಕಟ್ಟೆಯಲ್ಲಿ ನಾಗಬನಕ್ಕೆ ನಾಗತಂಬಿಲ, ಸಂಜೆ 6 ಗಂಟೆಗೆ ಕಲಶ ಪ್ರತಿಷ್ಠೆ, ಸಂಜೆ 6.30ಕ್ಕೆ ಶನಿಪೂಜೆ ಪ್ರಾರಂಭ, ರಾತ್ರಿ

ಸುಳ್ಯ : ಅಭಿವೃದ್ಧಿ ಕಾಣದ ರಸ್ತೆ: ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸುಳ್ಯ ತಾಲೂಕಿನ ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ. ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೂ ಸಹಿತ ಕಳಂಜ

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.

ಲೋಕಸಭಾ ಚುನಾವಣೆ: ಉಡುಪಿ ಚಿಕ್ಕಮಗಳೂರಿಗೂ ಸದಾನಂದ ಗೌಡರ ಹೆಸರು

ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಅವರಿಗೆ ದಿಢೀರನೆ ಮುಖ್ಯಮಂತ್ರಿ ಆಗುವ ಅವಕಾಶ ಬಂದುದರಿಂದ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಗೆದ್ದಿದ್ದರು. ಈಗ ಜಯಪ್ರಕಾಶ್ ಹೆಗ್ಡೆ ಅವರ ಜೊತೆಗೆ ಸದಾನಂದ

ಉಳ್ಳಾಲ: ಮಾದಕ ವಸ್ತು ಕೋಕೆನ್ ಪತ್ತೆ ಇಬ್ಬರು ಆರೋಪಿಗಳ ಸೆರೆ

ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಂಡಿದ್ದಾರೆ‌. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ

ಕೊಣಾಜೆ: ಗಾಂಜಾ ಬೇಟೆ – ನಾಲ್ವರ ಬಂಧನ

ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡ ಕರ‍್ಯಾಚರಣೆ ನಡೆಸಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದೆ.ದೇರಳಕಟ್ಟೆಯ ಬೆಳ್ಮ ಕನಕೂರಿನ ಅಶ್ರಫ್ ಯಾನೆ ಪೊಂಗ (30), ತಿಲಕನಗರದ ಮೊಹಮ್ಮದ್ ಅಲ್ಫಾಝ್ ( 26) ಇಬ್ಬರನ್ನು 115 ಗ್ರಾಂ

ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ. ಡಯನೀಶಿಯಸ್ವಾಜ್‍ರವರು ಇತ್ತೀಚೆಗೆ ಔಪಚಾರಿಕವಾಗಿ ಘೋಷಿಸಿದ್ದಾರೆ. ಮೇ 20, 1974 ರಂದು ಉಡುಪಿ ಜಿಲ್ಲೆಯ