Home Archive by category ಕರಾವಳಿ (Page 198)

ಉಡುಪಿ : ಎಡೆಬಿಡದ ಮಳೆಗೆ ಮತ್ತೊಂದು ಸಾವು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ತಡರಾತ್ರಿ ಉಡುಪಿ ಜಿಲ್ಲೆಯ ಬೆಳ್ಮಣ್ ಪೇಟೆ ಬಳಿಯಲ್ಲಿ, ಬೈಕ್ ಸವಾರನ‌ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಪಿಲಾರುಕಾನದ ಪ್ರವೀಣ್ ಆಚಾರ್ಯ (30), ಕಾರ್ಕಳದಿಂದ ತನ್ನ ಮನೆಯತ್ತ ತೆರಳುತ್ತಿದ್ದಾಗ ಏಕಾಏಕಿ ಉರುಳಿಬಿದ್ದ ಬೃಹತ್‌

ಜುಲೈ 7ರಂದು ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆಲವೆಡೆ ಹಾನಿ ಸಂಭವಿಸಿದೆ. ಜುಲೈ 7 ರಂದು ಮಳೆ ಮುಂದುವರೆಯುವ ಮುನ್ಸೂಚನೆಯಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಕೂಡ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ,

ಜುಲೈ 7ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7ರ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ

ಪಜೀರು: ಫ್ಯಾನಿಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.ಇಂದು ಮದ್ಯಾಹ್ನ 12.30ರ ವೇಳೆಗೆ

ದೈವಾರಾಧನೆ ಪ್ರದರ್ಶನದ ವಸ್ತುವಲ್ಲ : ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಗರಂ

ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ದೈವಾರಾಧನೆ ಪ್ರದರ್ಶನದ ವಸ್ತುವಲ್ಲ. ಶಿಕ್ಷಣ ಇಲಾಖೆ ಕೂಡಲೇ ತನ್ನ ಆದೇಶದಲ್ಲಿ ಬದಲಾವಣೆ ಮಾಡಿ, ದೈವಾರಾಧನೆ, ಕೋಲ ಕೈಬಿಡಬೇಕು

ಉಳ್ಳಾಲ: ಭಾರೀ ಮಳೆಗೆ ತಲಪಾಡಿಯ ಖಾಸಗಿ ಕಾಲೇಜಿನ ಬೃಹತ್ ಮೇಲ್ಛಾವಣಿ ಕುಸಿತ

ಉಳ್ಳಾಲ: ಭಾರೀ ಮಳೆಗೆ ತಲಪಾಡಿ ಖಾಸಗಿ ಶಿಕ್ಷಣ ಸಂಸ್ಥೆಯ ಬೃಹತ್ ಮೇಲ್ಛಾವಣಿ ಕುಸಿದುಬಿದ್ದು, ಹಲವು ವಾಹನಗಳು ಜಖಂ ಆಗಿವೆ. ರಜೆಯಿದ್ದ ಹಿನ್ನೆಲೆ ವಿದ್ಯಾರ್ಥಿಗಳಿಲ್ಲದೆ ಯಾವುದೇ ದುರಂತ ಸಂಭವಿಸಿಲ್ಲ. ದೇವಿನಗರದ ಖಾಸಗಿ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ

ಮಣಿಪುರ ಗಲಭೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿಕೆ

ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು. ಪುತ್ತೂರು ಪ್ರೆಸ್‍ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ

ಪುತ್ತೂರಿನ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ನಿಷೇಧ

ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಮೊದಲ ಬಾರಿಗೆ ಈ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾದ ಹಿನ್ನಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಶೇಧಿಸಲಾಗಿದ್ದು, ಆ ಭಾಗದ

ರಕ್ಷಣೆಗೆ ಎಲ್ಲಾ ತಂಡಗಳು ಸನ್ನದ್ಧವಾಗಿವೆ : ಉಡುಪಿ ಡಿಸಿ ಎಂ. ಕೂರ್ಮ ರಾವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಅರೆಂಜ್ ಅಲೆರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಸ್ಥಳಾಂತರ ನಡೆಸಲು ಅಗ್ನಿಶಾಮಕ ದಳ ಸಿದ್ದವಾಗಿದೆ. ಉಡುಪಿಯ 9 ಪ್ರದೇಶಗಳಿಗೆ ಈಗಾಗಲೇ ಬೋಟ್ ವ್ಯವಸ್ಥೆ ಮಾಡಲಾಗಿದೆ. ಉಡುಪಿ ನಗರದ ತಗ್ಗು ಪ್ರದೇಶಗಳಲ್ಲಿ ಕೂಡಾ ನೀರು ಮನೆಗೆ ನುಗ್ಗಿದೆ. ಆದ್ದರಿಂದ ಜನರನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರ ಮಾಡುತ್ತಿದ್ದೇವೆ. ರಕ್ಷಣೆಗೆ ಎಲ್ಲಾ ತಂಡಗಳು ಸನ್ನದ್ಧವಾಗಿವೆ. ಉಸ್ತುವಾರಿ ಸಚಿವರು ಕೂಡಾ ನಿರಂತರವಾಗಿ ಸಂಪರ್ಕದಲ್ಲಿದ್ದು

ಮಂಗಳೂರು : ಮಳೆಯ ಅಬ್ಬರಕ್ಕೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ

ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ