Home Archive by category ಕರಾವಳಿ (Page 2)

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ನಮ್ಮಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು

ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು – ನ್ಯಾಯಕ್ಕಾಗಿ ಹಾಗೂ ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ

ದ.ಕ ಜಿಲ್ಲೆಯ ವಿಶೇಷ ಚೇತನರಿಗೆ ವಿವಿಧ ಉದ್ಯೋಗದಾತರ ಪ್ರಾಯೋಜಿತ ಯಾಂತ್ರಿಕ ತ್ರಿಚಕ್ರವಾಹನ ವಿತರಣಾ ಕಾರ್ಯಕ್ರಮ

ಮಂಗಳೂರು; ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು. ಅವರು ಪದವಿನಂಗಡಿಯ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಬೆನಕ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದ.ಕ ಜಿಲ್ಲೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ

ಅರೆಬಾಸೆ ಗ್ರಾಮೋತ್ಸವ -2026

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ –2026’ ಕಾರ್ಯಕ್ರಮವು ಮಾರ್ಚ್ 8ರಂದು ಜರುಗಲಿದೆ. ಅಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ‘ಅರೆಬಾಸೆ ಒಳ್ಸೊಮ… ಅರೆಬಾಸೆ ಬೆಳ್ಸೊಮ..’ ಎಂಬ ಆಶಯದೊಂದಿಗೆ ಪೂರ್ವಾಹ್ನ ಗಂಟೆ 9.30ರಿಂದ ಜರುಗಲಿರುವ ಕಾರ್ಯಕ್ರಮವನ್ನು ಅರೆಭಾಷೆ ಅಕಾಡೆಮಿಯ

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯಾನ್

​ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖ‌ರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್ ಪಾಂಡ್ಯನ್ ಅವರ ಜೀವನಗಾಥೆ ಯುವ ಪೀಳಿಗೆಗೆ ದೊಡ್ಡ ಪ್ರೇರಣೆ. ಇಡುಕ್ಕಿಯ ಸಾಧಾರಣ ಕೃಷಿಕ ಮತ್ತು ಅಂಗನವಾಡಿ ಶಿಕ್ಷಕಿಯ ಮಗನಾದ ಇವರು,

ಪಣಂಬೂರು: ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ

ಮಂಗಳೂರು: ಉದ್ಯಮಿ ಲಂಚುಲಾಲ್ ಕೆ.ಎಸ್.ಅವರಿಗೆ ವ್ಯವಹಾರ ಮತ್ತು ಮನೋರಂಜನಾ ವ್ಯಕ್ತಿತ್ವ ಪ್ರಶಸ್ತಿ ಪ್ರದಾನ

ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ ೨೦೨೬ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರಿನ ಉದ್ಯಮಿ ಲಂಚುಲಾಲ್ ಕೆ.ಎಸ್. ಅವರು ಬಿಸ್‌ನೆಸ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಭಾಗವಹಿಸಿದ್ದರು. ಉದ್ಯಮಿ ಲಂಚುಲಾಲ್ ಅವರು, ಈ ವರ್ಷದ ವ್ಯವಹಾರ ಮತ್ತು

ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಕಲ್ಲಬೆಟ್ಟು ಶಾಲೆಯಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮೂಡುಬಿದಿರೆ : ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಶ್ವ ವಿದ್ಯಾನಿಲಯ ದೇರಳಕಟ್ಟೆ ಇಲ್ಲಿನ ಮಕ್ಕಳ ದಂತ ಚಿಕಿತ್ಸಾ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿಗಳ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ’ವು ಕಲ್ಲಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ವನಜಾಕ್ಷಿ ಎಜುಕೇಶನ್ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಕೆ. ಶ್ರೀಪತಿ ಭಟ್ ಶಿಬಿರವನ್ನು

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ: ವಿದ್ಯುತ್ ಕಂಬ ಮುರಿದು ಮೀನುಗಾರಿಕಾ ಕಾರ್ಮಿಕ ಸಾವು

ಕಾಪು:ಮಂಗಳೂರು ನಗರದ ಮೀನುಗಾರಿಕಾ ಧಕ್ಕೆಯಲ್ಲಿ ವಿದ್ಯುತ್ ಕಂಬವೊಂದು ಮುರಿದು ಮೈ ಮೇಲೆ ಬಿದ್ದ ಪರಿಣಾಮ ಮೀನುಗಾರಿಕಾ ಕಾರ್ಮಿಕ, ತಮಿಳುನಾಡು ಮೂಲದ ಮುರುಗನ್ (35) ಭಾನುವಾರದಂದುಮೃತಪಟ್ಟಿದ್ದಾರೆ. ಭಾನುವಾರ ಮುಂಜಾನೆ ಧಕ್ಕೆಯಲ್ಲಿ ಮೀನಿನ ಬಾಕ್ಸ್ ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮುರುಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ಮೂವರು