ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು “ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)” ಇದರ ಉದ್ಘಾಟನೆ ನಡೆಯಿತು. ಆಕಿಮ್ ಬುರ್ಕಾರ್ಟ್, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್, ಬೆಂಗಳೂರು ಇವರು ಕಾರ್ಯಕ್ರಮದ ಮುಖ್ಯ
ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಎ. ಸುವರ್ಣ ಅವರು ಮಾತನಾಡಿ, ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ನರ್ಮ್
ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾರ್ಡ್ಸ್ ವಾಪಸ್ಸು ಕಳುಹಿಸುತ್ತಿದ್ದಾರೆ. ಇಂದು ನಸುಕಿನಿಂದ ಚಂಡಾಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದೆ. ಬೃಹತ್
ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ 1 ತಿಂಗಳ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿರುವುದು ಆಶ್ಚರ್ಯ ಪಡುವಂತಹ ಸಂಗತಿ. ರಾಷ್ಟ್ರೀಯತೆ, ಸಂಸ್ಕೃತಿ, ದೇಶಪ್ರೇಮ ಇವೆಲ್ಲವೂ ಪಠ್ಯ
ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಶ್ರೀಮೂಕಾಂಬಿಕಾ ದೇವಳದಲ್ಲಿ ಪ್ರಧಾನ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಸಚಿವರು ಕುಟುಂಬ ಸಮೇತರಾಗಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಸಚಿವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅರ್ಚಕ ರಾಮಚಂದ್ರ ಅಡಿಗ, ಕಾರ್ಯನಿರ್ವಹಣಾಧಿಕಾರಿ ರವಿ
ದಕ್ಷಿಣ ಕನ್ನಡದ ಹಲವೆಡೆ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು
ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ಬಿಪರ್ ಜಾಯ್’ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು ಮಳೆ ವಿಳಂಬವಾಗುವಂತಹ ಸಾಧ್ಯತೆಗಳು ಕೂಡ ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ತೀವ್ರ
ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ
ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.
ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ವಾಸ್ತವ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಘಟನೆ ಬಗ್ಗೆ ಕಿರುಕುಳ ನೀಡುವುದು, ಠಾಣೆಗೆ ಕರೆಸುವುದು ಮಾಡಬಾರದು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದ್ದಾರೆ. ಸೋಮೇಶ್ವರ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರ ಬಂಧನ ವಿಚಾರವಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆಗೆ