Home Archive by category ಕರಾವಳಿ (Page 237)

ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ – ಬೈಕ್ ಸವಾರನಿಗೆ ಗಂಭೀರ ಗಾಯ

ಉಳ್ಳಾಲ: ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ರಾ.ಹೆ 66ರ ಸಂಕೊಳಿಗೆ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಘಟನೆಗೆ ಕಾರಣವಾದ ಕೇರಳ ನೋಂದಾಯಿತ ಇನೋವಾ ಕಾರಿನ ದಾಖಲೆಯನ್ನು ಸಿಸಿಟಿವಿ ಮೂಲಕ ಪತ್ತೆಹಚ್ಚಲಾಗಿದೆ.ಕೋಟೆಕಾರು ವೈದ್ಯನಾಥ ದೇವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್

ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಖಾದರ್

ಉಳ್ಳಾಲ: ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು. ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಚಾರ ಬೆಳಕಿಗೆ ಬರುತ್ತಿದ್ದಂತೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವನಿಗದಿ ಪಡಿಸಿದ

ಸುಳ್ಯ ಪದವು:ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು

ಕೈಕಂಬ : ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮ

ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ

ಮೂಡುಬಿದಿರೆ : ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ- 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ

ಬಂಟರ ಸಂಘ ಸುರತ್ಕಲ್ : 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆ

ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ

ಬಜಪೆ:ಗಾಂಜಾ ಸೇವನೆ ಮಾಡುತಿದ್ದ ಇಬ್ಬರ ಬಂದನ

ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್ ರೆಹಮಾನ್ (24 ) ಹಾಗೂ ಫಾಜೀಲ್( 25 ) ಎಂದು ಗುರುತಿಸಲಾಗಿದೆ.ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾಸೇವನೆ ಮಾಡಿದ ಬಗ್ಗೆ ದೃಡಪಟ್ಟ ಮೇರೆಗೆ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸ್ ಠಾಣಾ

ಪರಿಸರ ಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು – ಡಾ.ಜೀವನ ರಾಜ್ ಕುತ್ತಾರ್

 ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ

ಪಡುಬಿದ್ರಿ: ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಮೌನ: ಗ್ರಾಮಸ್ಥರ ಆಕ್ರೋಶ

ಪಡುಬಿದ್ರಿಯ ಜನತೆ ಕುಡಿಯುವ ನೀರಿಗಾಗಿ ಜನ ಒಂದು ಕಡೆ ಹಾಹಾಕಾರ ಪಡುತ್ತಿದ್ದರೆ, ಮತ್ತೊಂದು ಕಡೆ ನಿರಂತರವಾಗಿ ಕುಡಿಯುವ ನೀರು ಪೊಲಾಗುತ್ತಿದ್ದರೂ ನಿಗಾ ವಹಿಸಬೇಕಾಗಿದ್ದ ಗ್ರಾ.ಪಂ. ಅಧಿಕಾರಿಗಳು ಸಹಿತ ಆಡಳಿತ ಸಮಿತಿ ಮೌನವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲ್ಲಿ ಇಲ್ಲಿ ಅಲೆದಾಡುವ ಸ್ಥಿತಿ ಇದೆ. ಆದರೆ ಪಡುಬಿದ್ರಿ ಸರ್ಕಾರಿ ಬೋರ್ಡ್ ಶಾಲಾ ಮೈದಾನದ ಬಳಿಯ ಒವರ್ ಹೆಡ್ ಟ್ಯಾಂಕ್ ನಲ್ಲಿ

ಸುರತ್ಕಲ್‌ ನ ತಡಂಬೈಲ್‌ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರು

ಸುರತ್ಕಲ್ ತಡಂಬೈಲ್‌ನಲ್ಲಿ ರವಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು  ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕಾರಿನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಸಮೀಪದ ವೆಂಕಟರಮಣ ರಾವ್ ಅವರ ಮಾಲಕತ್ವದ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಕಟ್ಟಡದ ಶೆಟರ್,ಮೇಲ್ಛಾವಣಿ ಹಾನಿಗೊಂಡಿದ್ದು ಎರಡು ಲಕ್ಷ ರೂ. ನಷ್ಟವಾಗಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಏರ್ ಬಲೂನ್ ಇದ್ದುದರಿಂದ