Home Archive by category ಕರಾವಳಿ (Page 244)

ಶಾಲಾ ಮಕ್ಕಳ ಮೊಟ್ಟೆ ಡೀಲ್ ಪ್ರಕರಣ : ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ

ಮೂಡುಬಿದಿರೆ ಪುರಸಭಾ ಅಧಿವೇಶನ : ಎಸ್‍ಎಫ್‍ಸಿ ನಿಧಿ ಕಾಮಗಾರಿ ಟೆಂಡರ್ ತಡೆ ಹಿಡಿಯಲು ಆಗ್ರಹ

 ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ ನೀಡುವಿಕೆಯಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್‌ಗೆ ಅನುಮೋದನೆಯನ್ನು

ಮರವೂರು ಸೇತುವೆ ದುರಸ್ತಿ ಕಾರ್ಯ ಬಹುತೇಕ ಪೂರ್ತಿ : ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ

ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ

ಆಸ್ಕರ್ ಫೆರ್ನಾಂಡಿಸ್ ರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ನ್ಯೂರಾಲಜಿಸ್ಟ್ ಡಾ.ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ

ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆ ಆರಂಭ

ಮಂಗಳೂರಿನ ಪ್ರಸಿದ್ಧ ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆಯು ಉಡುಪಿಯ ತೆಂಕಪೇಟೆಯಲ್ಲಿರುವ ಹೆಡ್‌ಪೋಸ್ಟ್ ಆಫೀಸಿನ ಮುಂಭಾಗದಲ್ಲಿರುವ ಶ್ರೀರಾಮ್ ಆರ್ಕೇಡ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತ್ತು. ನೂತನ ಶಾಖೆಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕರಾದರಘುಪತಿ ಭಟ್, ಇವರು ನೇರವೇರಿಸಿದರು. ದೀಪ ಪ್ರಜ್ವಲನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ

ರಾಜ್ಯ ಸರ್ಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಪತ್ರಿಕೋದ್ಯಮ ಕ್ಷೇತ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಜಗನ್ನಾಥ ಶೆಟ್ಟಿ ಬಾಳ ಅವರು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಕಳೆದ 16 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಸಿನಿಮಾ ಕ್ಷೇತ್ರದ ವರದಿಯನ್ನು ಮಾಡುವ ಮೂಲಕ ಪ್ರಸಿದ್ಧಿಯಾಗಿದ್ದಾರೆ. ಅವರಿಗೆ 2017ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, 2008 ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಸಾಧ್ಯತೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದ್ದು, ಒಂದು ವೇಳೆ ಝಿಹುಯಿ ಅವರು ಉದ್ದೀಪನ ಔಷಧಿ ಸೇವಿಸಿರುವುದು ಸಾಬೀತಾದಲ್ಲಿ ಅವರು ಪದಕವನ್ನು ಕಳೆದುಕೊಳ್ಳುವರು. ಇಂತಹ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿರುವ ಮೀರಾಬಾಯಿ ಚಾನು ಅವರನ್ನು

ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು : ಮಾಜಿ ಸಚಿವ ಆಂಜನೇಯ

ಮಂಗಳೂರು:  ಬಿ.ಎಸ್  ಯಡಿಯೂರಪ್ಪ ರಾಜೀನಾಮೆ ಬಗ್ಗೆ ಮಾಜಿ ಸಚಿವ ಆಂಜನೇಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು.ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು. ಜನಾದೇಶದಿಂದ ಬಂದದ್ದು ಅಲ್ಲ. ಶಾಸಕರನ್ನು ಖರೀದಿ ಮಾಡ್ಕೊಂಡು ಸರ್ಕಾರ ರಚನೆ ಮಾಡಿತ್ತು.ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ ಸರ್ಕಾರ ಕೂಡಾ ಅಲ್ಲ. ಕಾಂಗ್ರೆಸ್, ಜೆಡಿಎಸ್ ನಿಂದ ಶಾಸಕರನ್ನು ಖರೀದಿ ಮಾಡಿ ಜನಸ್ನೇಹಿ ಸರ್ಕಾರ ಅಂದ್ರು. ಇದು ಜನಸ್ನೇಹಿ ಅಲ್ಲ, ಜನವಿರೋಧಿ ಸರ್ಕಾರ ಎಂದು ಮಾಜಿ ಸಚಿವ ಹೆಚ್.

ಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ