Home Archive by category ಕರಾವಳಿ (Page 289)

ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ ಅಜ್ಜಾರವರ ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ಗೆ ಭಾಜಪಾ ಸುಳ್ಯ ವತಿಯಿಂದ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಭಾರತವನ್ನು ಪರಮ ವೈಭವದಲ್ಲಿ ಕಾಣುವುದಕ್ಕಾಗಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ,

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು, ಮುಂದಿನ ದಿನಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ನಿಮ್ಮೆಲ್ಲರ ಸಹಕಾರ

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಬೃಹತ್ ಪಾದಯಾತ್ರೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು. ಮೊದಲಿಗೆ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೃಹತ್ ಕಾರ್ಯಕರ್ತರ ಮೆರವಣಿಗೆ ಮೂಲಕ ಸಾಗಿ ಮಂಗಳೂರಿನ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಡಿ ವೇದವ್ಯಾಸ ಕಾಮತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದರು.

ಪೇ ಚಾನಲ್‍ಗಳ ಗ್ರಾಹಕರ ಮಾಸಿಕ ದರ ಏರಿಕೆ

ಕೇಂದ್ರ ಸರಕಾರವು ಎನ್‍ಟಿಒ 3.0 ನಿಯಮದ ಪ್ರಕಾರ ಬ್ರಾಂಡ್ ಕ್ಯಾಸ್ಟರ್ ಪೇ ಚಾನೆಲ್‍ಗಳ ದರ ಏರಿಸಲು ಅನುಮತಿ ನೀಡಿರುವ ಪರಿಣಾಮವಾಗಿ, ಎಲ್ಲಾ ಪೇ ಚಾನೆಲ್‍ಗಳ ದರ ಏಪ್ರಿಲ್ ರಿಂದ ಏರಿಕೆಯಾಗಿರುತ್ತದೆ. ಕಳೆದ ಹಲವು ದಿನಗಳ ಹಿಂದೆ ಕೇಬಲ್ ಆಪರೇಟರ್ ಪ್ರತಿಭಟನೆ ನಡೆಸಿದ್ದು, ಆದರೂ ಪೇ ಚಾನೆಲ್‍ಗಳ ಮಾಸಿಕ ದರವನ್ನು ಏರಿಸಿರುತ್ತಾರೆ. ಹಾಗಾಗಿ ಎಲ್ಲ ಗ್ರಾಹಕರ ಮಾಸಿಕ ದರವು ಹೆಚ್ಚಾಗಿದ್ದು, ಗ್ರಾಹಕರು ಸ್ಥಳೀಯ ಕೇಬಲ್

ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ

ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು ಹಾಗೂ ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ ಸಮಾರಂಭ ತೋಕೂರು ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ನಡೆಯಿತು. ತೋಕೂರು ಸುಬ್ರಹ್ಮಣ್ಯ ಶೀಮಂತ್ರಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಕೂರು ಕ್ಲಸ್ಟರ್ ನ ವಿಶ್ವ ಬ್ಯಾಂಕ್ ನೆರವಿನ ನೀರು ಸರಬರಾಜು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ದಿನಕರ ಸಾಲ್ಯಾನ್ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಶಾಸಕ ಹರೀಶ್ ಪೂಂಜರವರು ಇಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮತ್ತು ಹಿರಿಯ ಮುಂದಾಳು ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತಿಯಲ್ಲಿ ಮೆರವಣಿಗೆಯಲ್ಲಿ ಬಂದು

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮ ಪತ್ರ ಸಲ್ಲಿಕೆ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು

ನಾಗಶ್ರೀ ನಾಗರಕಟ್ಟೆ ಅವರ `ಕೃಷ್ಣ ಸಿಗಲಿಲ್ಲ’ ಕವನ ಸಂಕಲನ ಬಿಡುಗಡೆ

ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ’ ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಕೃತಿ ಪ್ರಕಟಿಸಿರುವ ಅಜೆಕಾರಿನ ಶ್ರೀ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯ ಮುಖ್ಯಸ್ಥ, ಹಿರಿಯ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸೊಸೈಟಿ ಅಧ್ಯಕ್ಷ

ಕಾರ್ಕಳದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಕಾರ್ಕಳ, ಈ ಸಲದ ಚುನಾವಣೆ ಕೌರವರ ಹಾಗೂ ಪಾಂಡವರ ಯುದ್ಧ, ಸತ್ಯದ ಮತ್ತು ಸುಳ್ಳಿನ ನಡುವಿನ ಯುದ್ಧ ವಾಗಿದೆ. ಈ ಸಲದ ಚುನಾವಣೆಯಲ್ಲಿ ಸತ್ಯಕ್ಕೆ ಜಯ ಸಲ್ಲುವುದು ಗ್ಯಾರಂಟಿಯಾಗಿರುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬರುವುದು ಖಚಿತ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಳು ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳದಲ್ಲಿ ತಮ್ಮ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಎಚ್.