Home Archive by category ಕರಾವಳಿ (Page 302)

ಶ್ರೀ ವೀರನಾರಾಯಣ ದೇವಸ್ಥಾನ ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆ , ವೆಬ್ಸೈಟ್ ಲೋಕಾರ್ಪಣೆ ,

ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಕಡಿಮೆ ಸಮಯದಲ್ಲಿ ಸುಂದರವಾಗಿ ರೂಪಗೊಂಡಿರುವ ಶ್ರೀ ಕ್ಷೇತ್ರ ಹಿಂದೂ ಧರ್ಮದ ರಕ್ಷಣೆಯ

ರೈಲು ನಿಲ್ಲಿಸುವ ಮೂಲಕ ಅಪಘಾತ ತಪ್ಪಿಸಿದ ಮಹಿಳೆ

ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ  ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು

ವಿಧಾನಸಭೆ ಚುನಾವಣೆ ಹಿನ್ನೆಲೆ : ಶಿರೂರು ಪೊಲೀಸ್ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿ ಭೇಟಿ

ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ

ವಿಧಾನಸಭೆ ಚುನಾವಣಾ ಕಣದಿಂದ ಹಿಂದೆ ಸರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ

ಡಿವೈಎಫ್ ಐ ನಿಂದ ಹರೇಕಳ ಸೇತುವೆ ಗೇಟ್ ತೆರವು : ಸಂಚಾರಕ್ಕೆ ಮುಕ್ತ

ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ ಆದೇಶ ಸಿಗದೇ

ಪ್ರೊ. ನರೇಂದ್ರ ನಾಯಕ್ ಅವರಿಗೆ ಪೊಲೀಸ್ ಭದ್ರತೆ ಮುಂದುವರಿಸಲು ಆಗ್ರಹಿಸಿ ಮನವಿ

ಪ್ರೋ. ನರೇಂದ್ರ ನಾಯಕ್ ಅಖಿಲ ಭಾರತ ವಿಚಾರವಾದಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷರು. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರು. ಮೌಢ್ಯಾಚರಣೆಗಳನ್ನು ಬಯಲಿಗೆಳೆಯುವುದು, ವೈಜ್ಞಾನಿಕ ಮನೋಭಾವ ಮೂಡಿಸುವುದರಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಂವಿಧಾನದ ಉದ್ದೇಶಗಳಾದ ವೈಜ್ಞಾನಿಕ ಮನೋಭಾವ, ಜಾತ್ಯಾತೀತ ತಿಳುವಳಿಕೆಗಳನ್ನು ಸಮಾಜದಲ್ಲಿ ಮೂಡಿಸುವ ಕಾರಣಕ್ಕೆ ಪ್ರತಿಗಾಮಿ ಶಕ್ತಿಗಳಿಂದ ಹಲವು ಬಾರಿ ದಾಳಿಗಳಿಗೆ ಗುರಿಯಾಗಿದ್ದಾರೆ. ಸಮಾಜದಲ್ಲಿ

ಕರ್ಕಷ ಹಾರ್ನ್ ಬಳಕೆ : ಮೂರು ದಿನದಲ್ಲಿ 130 ಪ್ರಕರಣಗಳು

ಉಳ್ಳಾಲ: ಕರ್ಕಷ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾರ್ನ್ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾರ್ನ್ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.

ತೊಕ್ಕೊಟ್ಟು : ಲಾರಿಯಿಂದ ಕೆಳಗೆ ಬಿದ್ದ ಪೈಪುಗಳು : ತಪ್ಪಿದ ಅನಾಹುತ

ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ತೊಕ್ಕೊಟ್ಟು ಫ್ಲೈಓವರ್ ಮೇಲೆ ಲಾರಿ ತೆರಳುವ ಸಂದರ್ಭ , ಪೈಪ್ ಗಳನ್ನು ಕಟ್ಟಲಾಗಿದ್ದ ವಸ್ತು ತುಂಡಾಗಿ ಲಾರಿಯಿಂದ ಪೈಪುಗಳು ರಸ್ತೆಗೆ ಉರಳಿದೆ.

ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ವಿವಾ ಫ್ಯಾಶನ್ ಗೆ ಬೆಂಕಿ.

ಪುತ್ತೂರು ತಾಲ್ಲೂಕು ಉಪ್ಪಿನಂಗಡಿ ಇಲ್ಲಿನ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್ , ಆರ್ ಕೆ ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ. ಸ್ಥಳೀಯರು ಹಾಗೂ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ

ಸುಳ್ಯ : ಹಿರಿಯ ಕಾರ್ಯಕರ್ತರ ಭೇಟಿ ಮಾಡಿದ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆನಂದ ಪೂಜಾರಿ