Home Archive by category ಕರಾವಳಿ (Page 312)

ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ವಿವಾ ಫ್ಯಾಶನ್ ಗೆ ಬೆಂಕಿ.

ಪುತ್ತೂರು ತಾಲ್ಲೂಕು ಉಪ್ಪಿನಂಗಡಿ ಇಲ್ಲಿನ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್ , ಆರ್ ಕೆ ಜ್ಯುವೆಲ್ಲರ್

ಸುಳ್ಯ : ಹಿರಿಯ ಕಾರ್ಯಕರ್ತರ ಭೇಟಿ ಮಾಡಿದ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆನಂದ ಪೂಜಾರಿ

ಬಿ.ಎಸ್.ವೈ ಭೇಟಿ ಮಾಡಿದ ಕಾರ್ಕಳ ಟಿಕೆಟ್ ಆಕಾಂಕ್ಷಿ ಮಮತಾ ಹೆಗ್ಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿರುವ ಡಾ.ಮಮತಾ ಹೆಗ್ಡೆ ಅವರು ತನ್ನ ಬೆಂಬಲಿಗರೊಂದಿಗೆ ಸೋಮವಾರ ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಪ್ರಾಮಾಣಿಕ ರಾಜಕಾರಣ ಮಾಡ ಬಯಸಿರುವ ತನಗೆ ಕಾರ್ಕಳದಿಂದ ಬಿಜೆಪಿ ಮೂಲಕ ಸ್ಪರ್ಧೆ ಮಾಡಲು ಅವಕಾಶ ನೀಡಬೇಕು ಎಂದು ಮಮತಾ ಹೆಗ್ಡೆ ಅವರು ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಬಿ.ಎಸ್. ವಿಜಯೇಂದ್ರ ಅವರನ್ನು ಕೂಡ ಭೇಟಿ ಮಾಡಿದರು. ಸಚಿವ

ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿ : ತುಳು ಲಿಪಿ ನಾಮಫಲಕ ಅನಾವರಣ

ಕಾಸರಗೋಡಿನ ಬದಿಯಡ್ಕದ ವಿದ್ಯಾಗಿರಿಯ ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿಯಲ್ಲಿ ತುಳು ಲಿಪಿ ನಾಮಫಲಕವನ್ನು ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಬದಿಯಡ್ಕದ ಗ್ರಾಮ ಪಂಚಾಯತ್ ಮೆಂಬರ್ ಶ್ರೀ ಬಾಲಕೃಷ್ಣ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು, ಇವರು ತಮ್ಮ ಭಾಷಣದಲ್ಲಿ ತುಳು ಬಾಷೆಯು ಶೀಘ್ರದಲ್ಲಿ 8ನೇ ಪರಿಚ್ಚೆದಕ್ಕೆ ಸೇರುವಂತಾಗಲಿ ಎಂದರು. ಸ್ಥಳದ ಹಿರಿಯ ದೈವ ಪಾತ್ರಿ ಶ್ರೀ ನಿಟ್ಟೋನಿ ಇವರು ತುಳು ಲಿಪಿ ನಾಮಫಲಕವನ್ನು ಉದ್ಘಾಟಿಸಿದರು.

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

  “ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.         ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ

ಬಂಟ್ವಾಳ : 170ಕ್ಕೂ ಹೆಚ್ಚು ಗಡಿಯಾರಗಳಿರುವ ಮನೆ

ಮನುಷ್ಯನ ಜೀವನದಲ್ಲಿ ಸಮಯಕ್ಕೆ ಎಷ್ಟು ಮಹತ್ವವಿದೆಯೋ, ಸಮಯವನ್ನು ಸೂಚಿಸುವ ಗಡಿಯಾರಕ್ಕೂ ಅಷ್ಟೇ ಪ್ರಾಮುಖ್ಯತೆಯಿದೆ. ಇಂದಿನ ಯುಗದಲ್ಲಿ ಕನಿಷ್ಟ ಒಂದಾದರೂ ಗಡಿಯಾರ ಇಲ್ಲದ ಮನೆ ಇರೋದು ಅಪರೂಪವೇ ಅಲ್ಲವೇ. ಆದರೆ ಈ ಮನೆಯಲ್ಲಿ ಮಾತ್ರ ಎಲ್ಲಿ ನೋಡಿದರೂ ಅಲ್ಲಿ ಗಡಿಯಾರ. 170 ಕ್ಕಿಂತಲೂ ಹೆಚ್ಚು ಗಡಿಯಾರಗಳಿರುವ ಈ ಮನೆ ಒಂದು ಗಡಿಯಾರಗಳ ಮ್ಯೂಸಿಯಂ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡ್ತಮುಗೇರು ಸಮೀಪದ ಶಶಿ ಭಟ್ ಪಡಾರ್ ಎಂಬವರಿಗೆ ಸೇರಿದ ಮನೆ.

ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು

ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಆರ್ಥಿಕ ನೆರವು

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ : 11ನೇ ಸಾಲೆತ್ತೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು

ಪುತ್ತೂರು ಮೆಡಿಕಲ್ ಕಾಲೇಜು ವಿಚಾರ : ಮಂಜೂರು ಜಾಗದಲ್ಲಿ `ಸೀಫುಡ್ ಕಾರ್ಖಾನೆ’ ಮುಂದಾದವರು ಯಾರು : ಎಂ.ಬಿ. ವಿಶ್ವನಾಥ ರೈ ಪ್ರಶ್ನೆ

ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೊದಲು ಕನಸು ಕಂಡವರೇ ನಾವು ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದು, ಕಾಲೇಜು ಹೋರಾಟ ಅಭಿಯಾನ ಕಾಂಗ್ರೆಸ್ನ ಟೂಲ್ ಕಿಟ್ ಎಂದು ಆಪಾದಿಸಿದ್ದಾರೆ. ಒಂದು ವೇಳೆ ಬಿಜೆಪಿ ಮೆಡಿಕಲ್ ಕಾಲೇಜಿಗೆ ಮೊದಲು ಕನಸು ಕಂಡಿದ್ದು ನಿಜವೇ ಆಗಿದ್ದರೆ ಪುತ್ತೂರು ಶಾಸಕರು ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ `ಸೀಫುಡ್