Home Archive by category ಕರಾವಳಿ (Page 319)

ಪುತ್ತೂರು: ರೈಲ್ವೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು. ರೈಲ್ವೇ ಮೇಲ್ಸೇತುವೆಯ ಬಳಿ ತೆಂಗಿನ ಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು

ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ನಾಮಕರಣ

ಪುತ್ತೂರು: ಜಿಲ್ಲೆಯ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ಸು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಮಾನ್ಯತೆಯನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ಬಸ್ಸು ನಿಲ್ದಾಣ  ನಾಮಕರಣ

ಮಂಗಳೂರು: ಮೆ. ಕೆ ಕಮಲಾಕ್ಷ ಪೈ ಆಂಡ್ ಸನ್ಸ್ ಸಂಸ್ಥೆಯ ಮಾಲಕ ನಿಧನ

ಕೆ ಕಮಲಾಕ್ಷ ಪೈ (91 ವ) ನಗರದ ಮಣ್ಣಗುಡ್ಡೆಯಲ್ಲಿರುವ ತಮ್ಮ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಶನಿವಾರ (ಮಾ 25)ನಿಧನ ಹೊಂದಿದರು. ಎಳವೆಯಿಂದಲೇ ವ್ಯವಹಾರಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಏಳುವರೆ ದಶಕಗಳ ಕಾಲ ತಮ್ಮ ವ್ಯವಹಾರ ಸಂಸ್ಥೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಅವರು ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮೂಡುಬಿದಿರೆ: ಹೈಮಾಸ್ಟ್ ದೀಪ ಲೋಕಾರ್ಪಣೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ 12ನೇ ವಾರ್ಡಿನ ಹಳೆ ಪೊಲೀಸ್ ಠಾಣೆಯ ಬಳಿ ರೂ 9.50 ಲಕ್ಷ ಪುರಸಭಾ ನಿಧಿಯಿಂದ ಮಾಡಿರುವ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ ಅಗಲೀಕರಣ ಮತ್ತು ಇಂಟರ್ ಲಾಕ್ ಅಳವಡಿಕೆ, ಚರಂಡಿ ಹಾಗೂ ಹೈ ಮಾಸ್ಟ್ ದೀಪವನ್ನು ಶನಿವಾರ ಸಂಜೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರಾದ ಸ್ವಾತಿ

ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: 2022-23 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಡಿ 14,ಮಂದಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನ, ವೀಲ್ ಚೆರ್ ಹಾಗೂ ಶ್ರವಣ ಸಾಧನಗಳನ್ನು ಮಾನ್ಯ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶನಿವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿತರಿಸಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಈ ಸಂದರ್ಭದಲ್ಲಿದ್ದರು.

ಮೂಳೂರು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ: ಅಪಘಾತದಲ್ಲಿ ಇಬ್ಬರು ಮೃತ್ಯು

ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಸಂಜೆಯ ವೇಳೆ ನಡೆದಿದೆ. ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿತ್ತು.   ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದಿದೆ.ಬೈಕ್ ನಲ್ಲಿದ್ದವರು ಯಾರೆಂದು

ಸುಳ್ಯ : ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

ಸುಳ್ಯ: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯದ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ. ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಸುವ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಇಂದು ಕೆಲ ನಿರ್ವಹಿಸುವ ವೇಳೆ ಒಮ್ಮೆಲೇ

ಕುಂಪಲ: ಯುವಕ ಆತ್ಮಹತ್ಯೆ : ಊರಲ್ಲಿ ಹೆಚ್ಚಾದ ಅಕಾಲಿಕ ಸಾವುಗಳು

ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದ ಮಾಡಿಕೊಂಡಿದ್ದಾರೆ‌. ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು.ಮೊಬೈಲ್ ಶಾಪ್

ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಂಘದಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ ನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯಿಂದ ಅನುಮೋದಿಸಲ್ಪಟ್ಟ ಬೀದಿಬದಿ ವ್ಯಾಪಾರಿಗಳಾಗಿದ್ದರು. ಘಟನೆಯ

ನಾಳೆ (ಮಾ.26) ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 : ಮಂಗಳೂರಿನ ಜನತೆ ಸಂಭ್ರಮಿಸುವ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಂಗಳೂರಿನ ಜನತೆಗಾಗಿ ನಾಳೆ ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಇದೊಂದು ಅದ್ಭುತ ಅವಕಾಶ. ಇದೇ ಮಾರ್ಚ್ 26ರಂದು ಅಂದ್ರೆ ನಾಳೆ ಕ್ಲಬ್ ಮಂತ್ರ ವತಿಯಿಂದ ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6ನ್ನು ಆಯೋಜನೆ