Home Archive by category ಕರಾವಳಿ (Page 355)

ಬೆಳುಪು ದೇವಿಪ್ರಸಾದ್ ಶೆಟ್ಟಿ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ..!

ಕಾಂಗ್ರೆಸ್ ಪಕ್ಷದ ಪ್ರತಿಷ್ಠಿಯ ತಾಣವಾಗಿರುವ ಕಾರ್ಕಳ ಕ್ಷೇತ್ರಕ್ಕೆ ಬಹಳ ಆಕಾಂಕ್ಷಿಗಳಿದ್ದರೂ ಅಂತಿಮವಾಗಿ ಬಹಳಷ್ಟು ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ಕೈಯಾಡಿಸಿ ಯಶಸ್ವಿಯಾಗಿರುವ ಬೆಳಪು ದೇವಿಪ್ರಸಾದ್ ಶೆಟ್ಟಿ ಹೆಸರು ಅಂತಿಮವಾಗುವ ಮಾತು ರಾಜಧಾನಿಯಿಂದ ಕೇಳಿ ಬರುತ್ತಿದೆ.ಒಂದು ಕಡೆಯಿಂದ ಗೋಪಾಲ ಭಂಡಾರಿಯವರಿಂದ ತೆರವಾಗಿದ್ದ ಸ್ಥಾನಕ್ಕೆ ಬಹಳಷ್ಟು ಆಕಾಂಕ್ಷಿಗಳ

ಫೆ.27ರಂದು ತುಳು ಚಿತ್ರಮಾಲಾ ಪ್ರದರ್ಶನ

ಮಂಗಳೂರಿನ ಮಾಲೆಮಾರ್‍ನ ದೃಶ್ಯಾಲಯ ಸಂಚಯನ ಸಮಿತಿ ವತಿಯಿಂದ ತಮ್ಮ ಲಕ್ಷ್ಮಣ ಅವರ ತುಳು ಬೆಳ್ಳಿತೆರೆಯ ಸುವರ್ಣಯಾನ ಮತ್ತು ತುಳು ಚಿತ್ರರಂಗದ 50 ವರ್ಷಗಳ ಇತಿಹಾಸ ಗ್ರಂಥ ಕೃತಿ ಬಿಡುಗಡೆ ಸಮಾರಂಭ ಮತ್ತು ತುಳು ಚಿತ್ರಮಾಲಾ ಪ್ರದರ್ಶನ, ತುಳು ಚಿತ್ರರಂಗದ ಉನ್ನತಿಗೆ ಶ್ರಮಿಸಿದ ಹಿರಿಯ ಸಾಧಕರಿಗೆ ಗೌರವ ಪ್ರದಾನ ಕಾರ್ಯಕ್ರಮವು ಫೆ.27ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ರಾಜಶೇಖರ್ ಕೋಟ್ಯಾನ್ ಹೇಳಿದರು. ಅವರು ನಗರದ

ಅಶ್ವತ್ಥ್ ನಾರಾಯಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿದೆ : ಐವನ್ ಡಿಸೋಜ

ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು

ರಾಜ್ಯ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್ : ನಳಿನ್ ಕುಮಾರ್ ಕಟೀಲ್

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,

ಡಿವೈಎಫ್ಐ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಸಭಾ ಸದಸ್ಯರಾದ ಎ.ಎ ರಹೀಮ್ ಮಂಗಳೂರಿಗೆ.

ಮಂಗಳೂರು ತಾಲೂಕಿನ ಹರೇಕಳ ಗ್ರಾಮದಲ್ಲಿ ಗೇಣಿದಾರ ರೈತರ, ಹೆಂಚು, ನೇಯ್ಗೆ, ಬೀಡಿ ಕಾರ್ಮಿಕರ ಹೋರಾಟದ ನೇತೃತ್ವ ವಹಿಸಿ ಕಮ್ಯೂನಿಸ್ಟ್‌ ಪಕ್ಷವನ್ನು ಮುನ್ನಡೆಸಿದ್ದ ಹಿರಿಯ ಸಂಗಾತಿ ಕಡೆಂಜ ಕಾಮಣ್ಣ ರೈಗಳ ಸ್ಮರಣಾರ್ಥವಾಗಿ ಹರೇಕಳದಲ್ಲಿ ಕಾಂ. ಕಾಮಣ್ಣ ರೈ ಭವನ ಡಿವೈಎಫ್ಐ ನವೀಕೃತ ಕಟ್ಟಡವು ನಿರ್ಮಾಣಗೊಳ್ಳುತ್ತಿದೆ. ಹರೇಕಳದಲ್ಲಿ ಡಿವೈಎಫ್ಐ 90 ರ ದಶಕದಲ್ಲಿ ಊರಿನ ಜನನಾಯಕ ಕಾಮ್ರೇಡ್ ಕಾಮಣ್ಣ ರೈ ನೆನಪಿನಲ್ಲಿ ಸ್ವಂತ ಕಟ್ಟಡವನ್ನು ಕಟ್ಟಿತು. ಈ ಕಟ್ಟಡ ನಂತರ ಗ್ರಾಮದ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ : ನೂತನ ಬ್ರಹ್ಮ ರಥ ಲೋಕಾರ್ಪಣೆ ಕಾರ್ಯಕ್ರಮ

ಕುಂದಾಪುರ: ಜಗತ್ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಬ್ರಹ್ಮ ರಥವನ್ನು ಲೋಕಾರ್ಪಣೆ ಮಾಡಲಾಯಿತು. ಕೋಟೇಶ್ವರದಿಂದ ಪುರ ಮೆರವಣಿಗೆಯಲ್ಲಿ ಕೊಲ್ಲೂರಿಗೆ ಬಂದಿದ್ದ ಬ್ರಹ್ಮ ರಥವನ್ನು ದೇವಸ್ಥಾನದ ಮುಂಭಾಗದಲ್ಲಿ ಇರಿಸಲಾಗಿದ್ದು, ಗುರುವಾರ ಬೆಳಿಗ್ಗೆ ಶುದ್ದಾದಿ ಕಾರ್ಯಗಳು ಮುಗಿದ ಬಳಿಕ ಬ್ರಹ್ಮ ರಥದ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ಋತ್ವೀಜರ ನೇತೃತ್ವದಲ್ಲಿ ಹೋಮ ನಡೆಸಲಾಯಿತು. ಬಳಿಕ ಹಳೆಯ ರಥದ ವಿಸರ್ಜನೆ ಹಾಗೂ ಕಳೆ ಇಳಿಸುವ ಸಲುವಾಗಿ

ಮಾ.4 ರಂದು ಮೂಡೂರು ಪಡೂರು ಕಂಬಳ

ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ವಿಪಕ್ಷ ಸದಸ್ಯರು

ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಗಳ ಅಸಮರ್ಪಕ ಕಾರ್ಯ ನಿರ್ವಾಹಣೆ ಹಾಗೂ ಅಸಮರ್ಪಕ ಅನುಷ್ಠಾನದ ಬಗ್ಗೆ ಕಳೆದ ಅನೇಕ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗುತ್ತಿದ್ದುಗುರುವಾರ ನಡೆದ ಸಾಮಾನ್ಯ ಸಭೆಯಲ್ಲೂ ಸಿಸಿ ಕ್ಯಾಮರ ನಿರ್ವಹಣೆಯ ಬಗ್ಗೆ ಹಿಂದಿನ ಸಭೆಯ ನಿರ್ಣಯ ಕಾರ್ಯಗತವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ವಿರೋಧ ಪಕ್ಷದ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಅಧ್ಯಕ್ಷರ ಪೀಠದ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ

ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ಧರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಯ ಬಗ್ಗೆ

ಎಸ್ ಡಿ ಎಂ ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಆರು ಕೆಡೆಟ್ ಗಳಿಗೆ ಬಂಗಾರದ ಪದಕ 

ದೆಹಲಿಯಲ್ಲಿ ನಡೆದ 2023 ರ ಗಣರಾಜ್ಯೋತ್ಸವ ಪರೇಡ್ ನಲ್ಲಿ  ಉಜಿರೆ ಎಸ್ ಡಿ ಎಮ್ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್ ಗಳು ಶಿಪ್ ಮೊಡೆಲಿಂಗ್ ವಿಭಾಗದಲ್ಲಿ ಬಂಗಾರದ ಪದಕವನ್ನು ಗಳಿಸಿ ಸಂಸ್ಥೆಗೆ ಗೌರವವನ್ನು ತಂದಿದ್ದಾರೆ. ಪಿಓ ಕೆಡೆಟ್  ಶ್ರೀರಾಮ ಮರಾಠೆ  ಮತ್ತು ಪಿಓ ಕೆಡೆಟ್ ಅನನ್ಯಾ ಕೆ.ಪಿ ಇವರು ಪವರ್ ಮಾಡೆಲ್ ವಿಭಾಗದಲ್ಲಿ ಬಂಗಾರದ ಪದಕವನ್ನು ಸಂಪಾದಿಸಿದ್ದಾರೆ. ಇಡೀ ದೇಶದ 17 ಡೈರೆಕ್ಟರೇಟ್ ನವರು ಸಿದ್ಧಪಡಿಸಿ ಪರೀಕ್ಷೆಗೊಳಪಡಿಸಿದ ಈ ಸ್ಪರ್ಧೆಗಳಲ್ಲಿ ಇವರು