Home Archive by category ಕರಾವಳಿ (Page 38)

ಸುರತ್ಕಲ್: ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ಇದೆ: ಅಬ್ದುಲ್ ಬಶೀರ್

ಸುರತ್ಕಲ್: ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರಿ ಅಬ್ದುಲ್ ಬಸೀರ್ ನುಡಿದರು ಅವರು ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೆಸಿಐ ಸುರತ್ಕಲ್ ಸಹಯೋಗ ದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ

ತೊಕ್ಕೊಟ್ಟು: ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ

ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಆಗಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ

ಡ್ರೋನ್ ಮೂಲಕ ರೈತರ ಕಣ್ಣೀರು ತರಿಸಿದ ಸಂಶೋಧನೆ

ದಿಲ್ಲಿಗೆ ಪ್ರತಿಭಟನೆ ಮಾಡಲು ಬಂದ ರೈತರಿಗೆ ಗೃಹ ಮಂತ್ರಿ ಅಮಿತ್ ಶಾ ನಿರ್ವಹಣೆಯ ಪೊಲೀಸ್ರು ನೀವು ಊಟ ಕೊಟ್ರೆ ನಾವು ಲಾಠಿ ಬೀಸ್ತೀವಿ ಎಂದಿದ್ದಾರೆ. ಕೊಟ್ಟ ಊಟಕ್ಕೆ ನ್ಯಾಯ ಬೆಲೆ ಕೇಳಿದರೆ ಡ್ರೋಣ್ ಮೂಲಕ ಹೊಗೆ ಬಾಂಬು ಸಿಡಿಸಿ ಕಣ್ಣೀರು ತರಿಸ್ತೀವಿ ಎಂದೂ ಹೊಸ ಸಂಶೋಧನೆ ಮಾಡಿ ತೋರಿಸಿದ್ದಾರೆ. ಗದ್ದೆಯಲ್ಲಿ ಇರಬೇಕಾದವರು ದಿಲ್ಲಿಗೆ ಬಂದ್ರೆ ನಾವು ಎಲ್ಲಿಗೆ ಹೋಗಬೇಕು, 144 ಸೆಕ್ಷನ್ ತಿಂಗಳುಗಟ್ಟಲೆ ಹಾಕ್ತೀವಿ ಎಂದು ಮೋದಿಯವರ ಸರಕಾರ ಪಣ ತೊಟ್ಟಂತಿದೆ. ಸದ್ಯ

ಉಳ್ಳಾಲ: ಸಿಪಿಐಎಂ ಹಿರಿಯ ಮುಖಂಡ ನಾರಾಯಣ ತಲಪಾಡಿ ನಿಧನ

ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ( 68) ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ಸಾಗುವಾಗ ಹೃದಯಾಘಾತ ಉಂಟಾಗಿದೆ.ಇವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ಸದಸ್ಯರು, ದಲಿತ ಹಕ್ಕುಗಳ ಹೋರಾಟ ಸಮಿತಿ ಜಿಲ್ಲಾ ಸದಸ್ಯರು, ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ವಲಯ ಸಮಿತಿ ಸದಸ್ಯ, ಕೆಪಿಆರ್ ಎಸ್ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಕೋಟೆಕಾರು

ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನ

ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನರಾದರು. ಮಂಜೇಶ್ವರ ಪಂಚಾಯತ್‌ನ ವತಿಯಿಂದ ನಡೆದ ಶುಚಿತ್ವ ಮಿಷನ್‌ನ ಸಭೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿರುವ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಜೇಶ್ವರದ ರಾಜಕೀಯ ವಲಯದಲ್ಲಿ ಬಿ.ವಿ.ರಾಜನ್ ವಿಶೇಷ ವ್ಯಕ್ತಿತ್ವದೊಂದಿಗೆ ಗುರುತಿಸಿದವರು. ಈ ಪ್ರದೇಶದಲ್ಲಿ ಸಿಪಿಐ ಚಳುವಳಿಯಲ್ಲಿ ದಿ.ಕಾಮ್ರೇಡ್ ಡಾ.ಸುಬ್ಬರಾವ್ ರವರ ಕಾಲಘಟ್ಟದಿಂದಲೇ ಮುಂಚೂಣಿಯಲ್ಲಿ

ಪುತ್ತೂರು: ವ್ಯಕ್ತಿ ನಾಪತ್ತೆ

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು 6 ಅಡಿ

“ಅನೈತಿಕತೆಯಲ್ಲಿ ನೈತಿಕತೆಯ ಹುಡುಕಾಟ”

ತಮಿಳುನಾಡು ವಿಧಾನ ಸಭೆಯ ಸಭಾಪತಿ ಎಂ. ಅಪ್ಪಾವು ಅವರು ಅಲ್ಲಿನ ರಾಜ್ಯಪಾಲ ಆರ್. ಎನ್. ರವಿಯವರನ್ನು ಗೋಡ್ಸೆಯ ಪೂಜೆ ಮಾಡುವ ಮನುಷ್ಯ ಎಂದು ಜರಿದಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ಬಂದ ರವಿ ರಾಜ್ಯಪಾಲರ ಕರ್ತವ್ಯಕ್ಕಿಂತ ಅಪ್ಪಾವು ಹೇಳಿದಂತೆ ಗೋಡ್ಸೆ ನಿಷ್ಠೆ ಮತ್ತು ಬಿಜೆಪಿಯೇತರ ಸರಕಾರಗಳ ವಿರುದ್ಧ ಅತಿ ಕೆಟ್ಟದಾಗಿ ನಡೆದುಕೊಂಡ ದಾಖಲೆ ಮಾಡಿದ್ದಾರೆ. ರಾಜ್ಯಪಾಲರ ಹುದ್ದೆ ನೇರವಾಗಿ ಒಕ್ಕೂಟ ಸರಕಾರದಿಂದ ನೇಮಕಗೊಳ್ಳುವುದಾಗಿದೆ. ಹಿಂದೆ ಕಾಂಗ್ರೆಸ್ಸಿನಿಂದ

“ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ – ಫೆಬ್ರವರಿ 13”

ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ (B.D.S) ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ (M.D.S) ಪಡೆಯುವ ಅವಕಾಶÀವಿದೆ. ಇದರಲ್ಲಿ ಒಂದು ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಸ್ನಾತಕೋತ್ತರ ಪದವಿಯನ್ನು ಬಾಯಿ, ಮುಖ ಮತ್ತು ದವಡೆ ಶಾಸ್ತ್ರ (“ORAL AND MAXILLOFACIAL SURERY) ಎಂದು ಕರೆಯಲಾಗುತ್ತದೆ. ಬಾಯಿ ಮುಖ ಮತ್ತು ದವಡೆ

ಅಪಸ್ಮಾರ ಮತ್ತು ಅಪನಂಬಿಕೆಗಳು

ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12 ಪ್ರತಿ ವರ್ಷ ವಿಶ್ವದಾದ್ಯಂತ ಫೆಬ್ರವರಿ ತಿಂಗಳ ಎರಡನೇ ಸೋಮವಾರದಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ

ಮಂಗಳೂರು ರಥೋತ್ಸವ ಪ್ರಾರಂಭ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಇಂದು ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಮಹಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರು ಯಜ್ಞಕ್ಕೆ ಚಿತ್ತೈಸಿದರು ಬಳಿಕ ಯಜ್ಞದಲ್ಲಿ ಲಘು ಪೂರ್ಣಾಹುತಿ ಧ್ವಜಾರೋಹಣ ನೆರವೇರಿತು . ಬಳಿಕ ಸಮಾರಾಧನೆ ನಡೆಯಿತು . ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ