Home Archive by category ಕರಾವಳಿ (Page 493)

ಪ್ರಾಜೆಕ್ಟ್ ಚೀತಾ ತಂಡದಲ್ಲಿ ಪುತ್ತೂರಿನ ಕುವರ ಸನತ್ ಕೃಷ್ಣ

ಪುತ್ತೂರು :ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದಂದೇ ಆಫ್ರಿಕಾದ ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾದ ಎಂಟು ಚೀತಾಗಳ ಐತಿಹಾಸಿಕ ಪಯಣದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವ ವನ್ಯಜೀವಿ ತಜ್ಞ ಸನತ್ ಕೃಷ್ಣ ಮುಳಿಯ ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ವತ: ಪ್ರಧಾನಿ ಮೋದಿ ಅವರಿಂದ ಶಹಬ್ಬಾಸ್ ಪಡೆದ ಪ್ರಾಜೆಕ್ಟ್ ಚೀತಾ

ಮಿಸ್ ಸೌತ್ ಇಂಡಿಯಾ ಸ್ಪರ್ಧೆ : ಬೆಂಗಳೂರಿನ ಅಕ್ಷಿತಾ ಸತ್ಯನಾರಾಯಣ್ ಮಿಸ್ ಕ್ವೀನ್-2022 ಕಿರೀಟ

ಕೇರಳದ ಕೊಚ್ಚಿಯಲ್ಲಿ ನಡೆದ ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿದ್ದ ಬೆಂಗಳೂರಿನ ವಿದ್ಯಾರ್ಥಿನಿ ಅಕ್ಷಿತಾ ಸತ್ಯನಾರಾಯಣ್ ಅವರು ಕರ್ನಾಟಕ ಮಿಸ್ ಕ್ವೀನ್ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಕ್ಷಿತಾ ಸತ್ಯನಾರಾಯಣ್ ಅವರು, ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪತ್ರಿಕೋದ್ಯಮ ಮತ್ತು ಮನೋವಿಜ್ಞಾನ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮುಂಬೈಯಲ್ಲಿ ತರಬೇತಿ ಪಡೆದು ರೂಪದರ್ಶಿಯಾಗಿದ್ದಾರೆ. 2019ರ ಮಿಸ್ ಕರ್ನಾಟಕ

ಪುತ್ತೂರು : “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಗ್ರಾಮ ವಾಸ್ತವ್ಯ

ಪುತ್ತೂರು: ಕಾಲುವೆ ವಿಚಾರದಲ್ಲಿ ಜಾಗ ಅತಿಕ್ರಮಣ ಆಗಿದ್ದರೆ ಯಾವುದೇ ನೋಟೀಸ್ ನೀಡದೇ ತೆರವು ಮಾಡಿ. ಇಂದು ಬೆಂಗಳೂರು, ನಾಳೆ ನಮ್ಮೂರು. ಆದ್ದರಿಂದ ತೆರವು ಕಾರ್ಯವನ್ನು ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಕಂದಾಯ ಅಧಿಕಾರಿಗಳು ಸೇರಿದಂತೆ ಗ್ರಾಪಂಗಳಿಗೆ ಕಡಕ್ ಆದೇಶ ನೀಡಿದರು. ಇದು ಮುರ ಗೌರ ಸಮುದಾಯ ಭವನದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು

ಸೆ.24 : ರಾಮಕೃಷ್ಣ ವಿದ್ಯಾರ್ಥಿಭವನಕ್ಕೆ ಅಮೃತ ಮಹೋತ್ಸವದ ಸಂಭ್ರಮ

ಹೆಣ್ಮಕ್ಕಳು ಶಿಕ್ಷಣ ಪಡೆಯಬಾರದು ಎನ್ನುವ ಹೊತ್ತಲ್ಲಿ ಅವರ ಶಿಕ್ಷಣಕ್ಕಾಗಿ ವಿದ್ಯಾರ್ಥಿನಿ ನಿಲಯ ತೆರೆದು ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದವರು ಕರಾವಳಿಯ ಬಂಟರು. ಒಂದೆಡೆ ಸ್ವಾತಂತ್ರ್ಯದ ಕಿಚ್ಚು ಹಚ್ಚುತ್ತಿದ್ದ ಹೊತ್ತಲ್ಲೇ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ಬಂಟರ ಸಂಘದವರು ಮಂಗಳೂರಿನಲ್ಲಿ ರಾಮಕೃಷ್ಣ ವಿದ್ಯಾರ್ಥಿನಿ ಭವನ ಆರಂಭಿಸಿದ್ದರು. ಸ್ವಾತಂತ್ರ್ಯ ಸಿಗೋದಕ್ಕೂ ಮೊದಲೇ ಸ್ಥಾಪನೆಗೊಂಡಿದ್ದ ವಿದ್ಯಾರ್ಥಿನಿ ಭವನಕ್ಕೀಗ ಅಮೃತೋತ್ಸವದ ಸಂಭ್ರಮ.ಮಂಗಳೂರು ನಗರದ

ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ಸರ್ಕಾರದಿಂದ ತಾರತಮ್ಯ

ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ತೋರುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಐಕ್ಯತಾ ವೇದಿಕೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್ ಸರ್ಕಲ್ ನಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ನೂರಾರು ಜನ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್

ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಮಂಗಳೂರು, ಸೆ.17: ಅಕ್ಟೋಬರ್ 3ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಅಖಿಲ ಭಾರತ ಬ್ಯಾರಿ ಪರಿಷತ್ ವಿವಿಧ ಬ್ಯಾರಿ ಸ್ಪರ್ಧೆಗಳನ್ನು ಆಯೋಜಿಸಿದೆ.1) ಪ್ರಬಂಧ ಸ್ಪರ್ಧೆ: “ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಮತ್ತು ಸಂದೇಶ” ಎಂಬ ವಿಷಯದಲ್ಲಿ ಕನ್ನಡ ಲಿಪಿ ಬಳಸಿ ಬ್ಯಾರಿ ಭಾಷೆಯಲ್ಲಿ ನಾಲ್ಕು ಪುಟಗಳಿಗೆ ಮೀರದ ಪ್ರಬಂಧವನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು (ಮುಕ್ತ ಸ್ಪರ್ಧೆ) ಬರೆದು ಸೆಪ್ಟೆಂಬರ್ 30ರೊಳಗೆ ಅಖಿಲ ಭಾರತ ಬ್ಯಾರಿ

ಪುತ್ತೂರು ನಗರಸಭೆ ವತಿಯಿಂದ ಸ್ವಚ್ಛತಾ ಶ್ರಮದಾನ

ಪುತ್ತೂರು: ನಗರಸಭೆ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಸೆ.17ರಂದು ಬೆಳಿಗ್ಗೆ ಪುತ್ತೂರು ಪರ್ಲಡ್ಕದಲ್ಲಿರುವ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ನಡೆಯಿತು. ಸಹಾಯಕ ಕಮೀಷನರ್ ಗಿರೀಶ್‍ನಂದನ್ ಮತ್ತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಸ್ವಚ್ಛತಾ ನಿಶಾನೆ ತೋರಿಸುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಸಹಾಯಕ ಕಮೀಷನರ್ ಗಿರೀಶ್‍ನಂದನ್ ಅವರು ಮಾತನಾಡಿ ಪುತ್ತೂರು ನಗರಸಭೆ ಸ್ವಚ್ಛತೆಯಲ್ಲಿ ಮಾದರಿ ಕೆಲಸ

ಮೂಡುಬಿದಿರೆಯ ಪುರಸಭೆಯಿಂದ ಸ್ವಚ್ಛತಾ ಲೀಗ್

ಮೂಡುಬಿದಿರೆ : ಸೇವಾ ದಿವಸದ ಅಂಗವಾಗಿ ಕೇಂದ್ರ ಸರಕಾರವು ಭಾರತ ಸ್ವಚ್ಛತಾ ಲೀಗ್ ‘ ಎಂಬ ಅಂತರ್ ನಗರ ಸ್ಪರ್ಧೆಯನ್ನು ಆಯೋಜಿಸಿದ್ದು ಮೂಡುಬಿದಿರೆಯ ಪುರಸಭೆಯು ವಿವಿಧ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ಸಮಗ್ರ ಸ್ವಚ್ಛತಾ ಆಂದೋಲನ ನಡೆಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶ್ರೀ ಜೈನ ಮಠದ ಭಟ್ಟಾರಕ ಸ್ವಾಮೀಜಿ ಸಾವಿರ ಕಂಬದ ಬಸದಿಯ ಆವರಣದಲ್ಲಿ

ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ

ಭಾರತ ಸರ್ಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಮಂತ್ರಿಗಳಾದ ಬಳಿಕ ದೇಶದಲ್ಲಿ ಸ್ವಚ್ಛತಾ ಆಂದೋಲನಾ

ವಿಶುವಲ್ ಕಮ್ಯೂನಿಕೇಶನ್ ಶಿಕ್ಷಣದಲ್ಲಿ ಮೊದಲಿಗ ಸಂತ ಅಲೋಶಿಯಸ್ ಕಾಲೇಜು

ಸೆಪ್ಟೆಂಬರ್ 15 ರಂದು ಸಂತ ಅಲೋಶಿಯಸ್ ಕಾಲೇಜು ಸ್ವಾಯತ್ತ ಮಂಗಳೂರು, ತಮ್ಮ ಪತ್ರಿಕೋದ್ಯಮ ವಿಭಾಗದಲ್ಲಿನ ಹೊಚ್ಚ ಹೊಸ ಕೋರ್ಸ್ ಬಿ.ಎಸ್ಸಿ ವಿಶುವಲ್ ಕಮ್ಯುನಿಕೇಶನ್ ಅನ್ನ ಅಧಿಕೃತವಾಗಿ ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ರವರಿಂದ ಲೋಕಾರ್ಪಣೆಗೊಳಿಸಲಾಯಿತು. ಈ ಐತಿಹಾಸಿಕ ಕ್ಷಣದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎಲ್ ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ಉದ್ಘಾಟಕರ ಕೈಯಿಂದ ಸಭೆಯಲ್ಲಿದ್ದ ವಿದ್ಯಾರ್ಥಿಗಳ ಭಾವಚಿತ್ರವನ್ನು ಪೋಲರಾಯ್ಡ್