Home Archive by category ಕರಾವಳಿ (Page 501)

ಮಂಜೇಶ್ವರದಲ್ಲಿ ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆದುರಾಗಿ ರಾಜ್ಯ ವ್ಯಾಪಕವಾಗಿ ಕೇಂದ್ರ ಸರಕಾರದ ಕಚೇರಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹಲವೆಡೆಗಳಲ್ಲೂ ಪ್ರತಿಭಟನಾ ಧರಣಿ ನಡೆಯಿತು. ಸಿಪಿಐಎಂ ಕುಂಜತೂರು ಲೋಕಲ್ ಸಮಿತಿ ವತಿಯಿಂದ ಕುಂಜತ್ತೂರು ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಸಿಪಿಐಎಂ ಮಂಜೇಶ್ವರ ಏರಿಯಾ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ, ಕದಿರು ವಿನಿಯೋಗ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಾದ್ರಪದ ಶುಕ್ಲ ಹಸ್ತಾ ನಕ್ಷತ್ರದ ಶುಭದಿನವಾದ  ಇಂದು ಸಂಪ್ರದಾಯದಂತೆ ಕದಿರು ವಿನಿಯೋಗ ಉತ್ಸವ ನಡೆಯಿತು. ಸಾಂಪ್ರದಾಯಿಕ ಪದ್ಧತಿಯಂತೆ ಬೆಳಗ್ಗೆ ದೇವಳದ ಒಳಾಂಗಣದಲ್ಲಿ ನಿತ್ಯ ಬಲಿ ಉತ್ಸವದೊಂದಿಗೆ ಸರ್ವ ವಾದ್ಯದೊಂದಿಗೆ ಕೆರೆಯ ಬಳಿಯ ಅಶ್ವತ್ಥಕಟ್ಟೆಯ ಬಳಿಗೆ ಆಗಮಿಸಿ ಕಟ್ಟೆಯಲ್ಲಿ ತೆನೆ ಪೂಜೆ ನಡೆಯಿತು. ಬಳಿಕ ತೆನೆ ಕಟ್ಟುಗಳೊಂದಿಗೆ ದೇವಳದ ಒಳಾಂಗಣ ಪ್ರವೇಶಿಸಿ ಪೂಜೆ ನಡೆಯಿತು.

ಗ್ರಾಹಕರ ಬಳಿ ಮ್ಯಾನೇಜರ್ ಉಡಾಫೆ ವರ್ತನೆ ಆರೋಪ: ಹಟ್ಟಿಯಂಗಡಿ ಬ್ಯಾಂಕ್ ಗೆ ಮುತ್ತಿಗೆ ಹಾಕಿ ಆಕ್ರೋಶ

ಕುಂದಾಪುರ: ಮಗಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಾಲ ಕೇಳಲು ಹೋದಾಗ ಮ್ಯಾನೇಜರ್ ಸಮರ್ಪಕ ಮಾಹಿತಿ ನೀಡದೇ ಉಡಾಫೆಯಾಗಿ ನಡೆದುಕೊಂಡಿದ್ದಾರೆಂದು ಆರೋಪಿಸಿ ಹಟ್ಟಿಯಂಗಡಿ ಕರ್ನಾಟಕ ಬ್ಯಾಂಕಿಗೆ ಆಗಮಿಸಿದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು. ಹಟ್ಟಿಯಂಗಡಿ ನಿವಾಸಿ ನಾಗರಾಜ ಪೂಜಾರಿ ಎನ್ನುವವರು ತಮ್ಮ ಮಗಳ ಉನ್ನತ ವಿದ್ಯಾಭ್ಯಾಸದ ಸಲುವಾಗಿ ಎಜುಕೇಶನ್ ಲೋನ್ ಕೇಳಲು ಮಂಗಳವಾರ ಕರ್ನಾಟಕ ಬ್ಯಾಂಕ್ ಹಟ್ಟಿಯಂಗಡಿ ಶಾಖೆಗೆ ತೆರಳಿದ್ದರು. ಈ ವೇಳೆ ಬ್ಯಾಂಕ್ ಮ್ಯಾನೇಜರ್

ದ.ಕ.ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲ ಅಡ್ಯಂತಾಯ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲ ಅಡ್ಯಂತಾಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಶೀಲ ಅಡ್ಯಂತಾಯ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದು, ವಿವಿಧ ಸಾಮಾಜಿಕ , ಧಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಜಯಶೀಲ ಅಡ್ಯಂತಾಯ ಅವರು ದ.ಕ.ಜಿಲ್ಲಾ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅಡ್ಯಾರ್ ಗ್ರಾ.ಪಂನ ಸದಸ್ಯರಾಗಿ ಹಗೂ ಎಪಿಎಂಸಿ ನಿರ್ದೆಶಕರಾಗಿಯೂ ಸೇವೆಸಲ್ಲಿಸಿತ್ತಾರೆ.

ಕೇಂದ್ರದ ನೀತಿ ವಿರುದ್ಧ ಸಿಐಟಿಯು ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರ 15 ವರ್ಷಗಳ ಹಿಂದಿನ ವಾಹನಗಳನ್ನು ಗುಜುರಿಗೆ ಹಾಕಬೇಕೆಂಬ ಸರಕಾರದ ತೀರ್ಮಾನ ವನ್ನು ಪ್ರತಿಭಟಿಸಿ ರಿಕ್ಷಾ ಚಾಲಕರ ಯೂನಿಯನ್ citu ಬಂದ್ಯೋಡ್ ಅಂಚೆ ಕಛೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಸಿತು. Aiks ರಾಜ್ಯ ಸಮಿತಿ ಸದಸ್ಯರಾದ ಕಾಂ ಕೆ .ಆರ್ ಜಯಾನಂದ ಧರಣಿಗೆ ಚಾಲನೆ ನೀಡಿ ಮಾತನಾಡಿದರು. ಜನವಿರೋಧಿಯಾಗಿರುವ ಕೇಂದ್ರ ಸರಕಾರದ ನಿಲುವಿನ ವಿರುದ್ಧ ವ್ಯಾಪಕ ಜನಾಕ್ರೋಶ ವ್ಯಕ್ತವಾಗುತ್ತಿದೆ. ದುಡಿದು ಜೀವಿಸುತ್ತಿರುವ ಜೀವಗಳ ಬಾಳಿಗೆ

ಉಚ್ಚಿಲ ಬಬ್ಬು ಸ್ವಾಮಿ ದೈವಸ್ಥಾನದ ಬಳಿಯ ಮನೆಗೆ ಕಳ್ಳರ ಲಗ್ಗೆ, ನಗ, ನಗದು ಕಳವು

ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಬಬ್ಬು ಸ್ವಾಮಿ ದೈವಸ್ಥಾನದ ಪಕ್ಕದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದು 12 ಸಾವಿರ ನಗದು ಮತ್ತು ಎರಡು ಗ್ರಾಂ ಚಿನ್ನದ ಆಭರಣ ಕದ್ದೊಯ್ದ ಘಟನೆ ನಡೆದಿದೆ. ಉಚ್ಚಿಲದ ನಿವಾಸಿ ಅಬ್ದುಲ್ ಮಲೀಕ್‌ನವರ ಬೈತುಲ್ ಅಲ್ ಸಫಾ ಮನೆಗೆ ಹಿಂಬಾಗಿಲ ಚಿಲಕ ಮುರಿದು ಒಳಪ್ರವೇಶಿಸಿದ ಕಳ್ಳರು, ತಳ ಮಹಡಿ ಮತ್ತು ಮೇಲ್ಮಹಡಿಯ ಎರಡೂ ಕಡೆಗಳ ಬೀಗ ಮುರಿದು ಒಳ ನುಗ್ಗಿದ್ದಾರೆ. ಬೀರುವಿನಲ್ಲಿದ್ದ 12 ಸಾವಿರ ರುಪಾಯಿ ನಗದು ಹಾಗೂ 2ಗ್ರಾಂ

“ಅಕ್ಷಮ್ಯ” ಚಿತ್ರದ ಟೀಸರ್ ಬಿಡುಗಡೆ

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ನಿರ್ಮಾಣದ ಕನ್ನಡ ಚಿತ್ರ ಅಕ್ಷಮ್ಯ ಇದರ ಟೀಸರ್ ಬಿಡುಗಡೆ ಕಾರ್ಯಕ್ರಮ ನಗರದ ಮಾಲೇಮಾರ್ ಬಳಿಯ ಎಸ್ ಡಿಎಂ ಸ್ಟುಡಿಯೋದಲ್ಲಿ ನೆರವೇರಿತು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಟೀಸರ್ ಬಿಡುಗಡೆಗೊಳಿಸಿ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, “ಅಕ್ಷಮ್ಯ ಹೊಸಬರೇ ನಿರ್ಮಿಸಿದ ಒಂದು ಹೊಸ ಪ್ರಯತ್ನ. ಟೀಸರ್ ಕುತೂಹಲ ಮೂಡಿಸುತ್ತಿದ್ದು ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರವನ್ನು ಹೊಂದಿದೆ. ಕನ್ನಡ

ಶಿರ್ತಾಡಿ ಮೌಂಟ್ ಕಾರ್ಮೆಲ್‌ನಲ್ಲಿ ಮೊಂತಿ ಹಬ್ಬ, ಬಲಿಪೂಜೆ

ಶಿರ್ತಾಡಿ : “ಮಾತೃ ಸ್ವರೂಪ ಭೂಮಿಯ ಮೇಲೆ ಇರುವ ಉನ್ನತವಾದ ಭಾವನೆಯಾಗಿದೆ. ದೇವರ ಸೃಷ್ಟಿಯಲ್ಲಿ ಉತ್ಕೃಷ್ಟ ಸಂಬಂಧವಾಗಿ ಮತ್ತು ಅಷ್ಟೇ ಗಟ್ಟಿ ಬಾಂಧವ್ಯವನ್ನು ಪ್ರತಿಪಾದಿಸುವ ಮಾತೃಶಕ್ತಿಯು ಮನುಷ್ಯನನ್ನು ಭೂಮಿಯ ಮೇಲೆ ಪೊರೆಯುವ ಮೂಲಕ ಚೈತನ್ಯ ತುಂಬುತ್ತದೆ. ಮೇರಿ ಮಾತೆಯ ಹುಟ್ಟು ಮಾನವ ಕುಲಕ್ಕೆ ಒಳಿತನ್ನು ಉಂಟುಮಾಡಿದೆ” ಎಂದು ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ನ ಧರ್ಮಗುರುಗಳಾದ ವಂ| ಹೆರಾಲ್ಡ್ ಮಸ್ಕರೇನಸ್ ನುಡಿದರು. ಅವರು ಶಿರ್ತಾಡಿ ಮೌಂಟ್

ವಿಟ್ಲ ವ್ಯಾಪ್ತಿಯಲ್ಲಿ ಹಾದುಹೋಗಲಿರುವ 400ಕೆವಿ ವಿದ್ಯುತ್: ಕೃಷಿಕರಿಗೆ ತೊಂದರೆ

ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ಸದ್ಯದ ಮಾಹಿತಿಯಂತೆ ವಿಟ್ಲ ಪಟ್ಟಣ ಪಂಚಾಯಿತಿಯ 4-5 ವಾರ್ಡ್ ಗಳಲ್ಲಿ ಹಾದುಹೋಗುತ್ತಿದೆ. ಕೃಷಿಕರಿಗೆ ಹಾಗೂ ಹಲವಾರು ಜಮೀನು ಮಾಲೀಕರಿಗೆ ಸಮಸ್ಯೆಯಾಗುತ್ತಿದ್ದರೂ, ಈ ಬಗ್ಗೆ ಶಾಸಕರಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲೀ ಸಂತ್ರಸ್ತ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಆರೋಪಿಸಿದರು. ಬಂಟ್ವಾಳ ತಾಲೂಕಿನಲ್ಲಿ ಅಗಾಧ ಪ್ರಮಾಣದಲ್ಲಿ ರೈತರಿಗೆ

ವಿಟ್ಲದಲ್ಲಿ ಮೊಂತಿ ಫೆಸ್ಟ್ ಸಂಭ್ರಮ

ಸೂರಿಕುಮೇರು ಸೈಂಟ್ ಜೋಸೆಪ್ ಚರ್ಚ್ ನಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಬಹಳ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಿಸಲಾಯಿತು. ಫಾದರ್ ಗ್ರೆ ಗರಿ ಪಿರೇರಾ ದಿವ್ಯ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷರಾದ ಸ್ಟೀವನ್ ಮಾರ್ಟಿಸ್ ರವರ ಮಾರ್ಗದರ್ಶನದಲ್ಲಿ ಭಕ್ತಾದಿಗಳಿಗೆ ಕಬ್ಬು ಹಂಚಲಾಯಿತು. ಇನ್ನು ಫಾತಿಮಾ ಮಾತೆಯ ದೇವಾಲಯ ಪೆರುವಾಯಿಯಲ್ಲೂ ಕೂಡ ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಸರಳಾವಾಗಿ ಮೋಂತಿ ಹಬ್ಬ