Home Archive by category ಕರಾವಳಿ (Page 54)

ಮಂಗಳೂರು: ಎಂಡಿಎಂಎ ಮಾರಾಟ ಆರೋಪ, ಇಬ್ಬರ ಬಂಧನ 

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಜಾಲ್‌ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್‌ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಎಂಡಿಎಂಎ ಹಾಗೂ ಕೃತ್ಯಕ್ಕೆ

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿ ಧಾಮ ಸಂಪ್ರೋಕ್ಷಣೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಳವಾರ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಸ್ವಾಮೀಜಿ ಅವರು, ಹಿರೇ ಬಸದಿಯು ಅತ್ಯಂತ ಪ್ರಾಚೀನ ಬಸದಿಯಾಗಿದೆ. 24 ತೀರ್ಥಂಕರರ ಲೆಪ್ಪದ ಮೂರ್ತಿಗಳನ್ನು

ಪುತ್ತೂರು: ಗುತ್ತಿಗೆದಾರ ವಿಜಯ್ ಕುಮಾರ್  ಆತ್ಮಹತ್ಯೆ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ

ಮೂಡುಬಿದಿರೆ: ಕಿಡ್ನಿ ವೈಫಲ್ಯ, ಚಿಕಿತ್ಸೆಗೆ ಸ್ಪಂದಿಸಿದ ಸಾಯಿ ಮಾರ್ನಾಡ್ ಸೇವಾ ಸಂಘ

ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ.    ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ 3ರಿಂದ 4 ಸಾವಿರದಷ್ಟು ವೆಚ್ಚವಾಗುತ್ತದೆ. ತೀರ ಬಡತನದಲ್ಲಿರುವ ಈ ಕುಟುಂಬಕ್ಕೆ ಚಿಕಿತ್ಸೆಯ

ಮೂಡುಬಿದಿರೆ: ಪ್ರೇಮ್ ಬಹದ್ದೂರ್ ನಿಧನ

ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ.    ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.  ಬಹದ್ದೂರು ಅವರಿಗೆ ಪತ್ನಿ, ಓರ್ವ ಪುತ್ರ

ಮಂಗಳೂರು: ಬ್ರಹ್ಮಸಮಾಜ ಕಾಂಪ್ಲೆಕ್ಸ್‌ನಲ್ಲಿ ಹೈಯರ್ ಎಕ್ಸ್‌ಕ್ಲೂಸಿವ್ ಸ್ಟೋರ್ ಶುಭಾರಂಭ

ಮಂಗಳೂರಿನ ನವಭಾರತ್ ವೃತ್ತದಲ್ಲಿರುವ ಬ್ರಹ್ಮ ಸಮಾಜ ಕಾಂಪ್ಲೆಕ್ಸ್‌ನಲ್ಲಿ ಡಿಜಿಟಲ್ ಪ್ಲಾನೆಟ್‌ನವರ ಹೈಯರ್ ಎಕ್ಸ್ ಕ್ಲೂಸಿವ್ ಸ್ಟೋರ್‌ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿಶ್ವದ ನಂಬರ್ ವನ್ ಹೋಮ್ ಅಪ್ಲೈಯನ್ಸಸ್ ಹಾಗೂ ಭಾರತದ ಮೂರನೇ ಅತೀ ದೊಡ್ಡ ಬ್ರ್ಯಾಂಡ್ ಆಗಿರುವ ಹೈಯರ್‌ನ ಎಕ್ಸ್‌ಕ್ಲೂಸಿವ್ ಸ್ಟೋರ್ ಮಂಗಳೂರಿನಲ್ಲಿ ಶುಭಾರಂಭಗೊಂಡಿತು. ನೂತನ ಹೈಯರ್‌ನ ಎಕ್ಸ್‌ಕ್ಲೂಸಿವ್ ಸ್ಟೋರ್‌ನ್ನು ಮೂಡುಬಿದಿರೆಯ ಆಳ್ವಾಸ್ ಸಂಸ್ಥೆಯ ಚೇರ್ಮನ್ ಡಾ. ಎಂ. ಮೋಹನ್ ಆಳ್ವಾ

ಮಂಗಳೂರು: ತಮಾಮ್ ಫರ್ನೀಚರ್ ವರ್ಲ್ಡ್ ನೂತನ ಶೋರೂಂ ಉದ್ಘಾಟನೆ

ಪೀಠೋಪಕರಣ ಉದ್ಯಮದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ತಮಾಮ್ ಫರ್ನೀಚರ್ ವರ್ಲ್ಡ್ ನೂತನ ಶೋರೂಂ ನಗರದ ಪಂಪ್‌ವೆಲ್‌ನ ಬಳಿ ಸಿಟಿ ಗೇಟ್ ಬಿಲ್ಡಿಂಗ್‌ನಲ್ಲಿ ಉದ್ಘಾಟನೆಗೊಂಡಿತು. ಹಿಂದುಸ್ತಾನ್ ಬಾವಾ ಬಿಲ್ಡರ್ಸ್‌ನ ಆಡಳಿತ ನಿರ್ದೇಶಕರಾದ ಬಾವಾ ಅಬ್ದುಲ್ ಖಾದರ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಮಂಜೇಶ್ವರ ಶಾಸಕರಾದ ಎ.ಕೆ.ಎಂ ಅಶ್ರಫ್ ಅವರು ಮಾತನಾಡಿ, ತಮಾಮ್ ಸಂಸ್ಥೆಯು ಸಾಮಾನ್ಯ ವರ್ಗದಿಂದ ಶ್ರೀಮಂತನವರೆಗೆ ಕೈಗೆಟಕುವ ದರದಲ್ಲಿ ವಸ್ತುಗಳನ್ನು ಖರೀದಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರಕ್ಕೆ 5 ಲಕ್ಷ ರೂ.ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜೀರ್ಣೋದ್ದಾರಗೊಳ್ಳುತ್ತಿರುವ ಕೊಣಾಲು ಗ್ರಾಮದ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಲಕ್ಷ ರೂ. ನೆರವು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು 5 ಲಕ್ಷ ರೂ.ನೆರವಿನ ಮೊತ್ತದ ಚೆಕ್ ಅನ್ನು ದೇವಸ್ಥಾನದ ಜೀರ್ಣೋದ್ದಾರ ಸಮಿತಿಗೆ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹಸ್ತಾಂತರಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ತಿರ್ಲೆ

ಮಂಗಳೂರು: ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನ

ಜನವರಿ 22ರ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಜನವರಿ 15ರವರೆಗೆ ನಡೆಯಲಿದೆ. ಅಯೋದ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಾಣಪ್ರತಿಷ್ಠಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ ಹವನ ಸತ್ಸಂಗ,  ಭಜನೆ , ಮುಂತಾದ ಕಾರ್ಯಕ್ರಮ ನಡೆಯಲಿದೆ. ಪ್ರಾಣ ಪ್ರತಿಷ್ಠೆಯ ನೇರಪ್ರಸಾರ ಕೂಡ ಆಯಾಯ

ಮೂಡುಬಿದಿರೆ : ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ಸ್ಪಂದಿಸಿದ ನೇತಾಜಿ ಬ್ರಿಗೇಡ್

ಮೂಡುಬಿದಿರೆ : ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ಮೂಡುಬಿದಿರೆಯ “ಕೋಟಿ – ಚೆನ್ನಯ್ಯ” ಜೋಡುಕರೆ ಕಂಬಳದಲ್ಲಿ ನಡೆದ 14ನೇ ಸೇವಾ ಯೋಜನೆಯಲ್ಲಿ ಸಂಗ್ರಹವಾದ ರೂ.1,34,894 ಧನವನ್ನು ಆಯ್ದ 5 ಮಂದಿ  ಫಲಾನುಭವಿಗಳಿಗೆ  ಸ್ವರಾಜ್ಯ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನ ಮಾರಿಗುಡಿ ಬಳಿ ಹಸ್ತಾಂತರಿಸಲಾಯಿತು. ಕಣ್ಣಿನ ಕ್ಯಾನ್ಸರ್ ಚಿಕಿತ್ಸೆಗಾಗಿ ಕಿನ್ನಿಗೋಳಿ ತಾಳಿಪಾಡಿಯ 6 ತಿಂಗಳ ಮಗು ಪೂಜಿತಾ ಶೆಟ್ಟಿಗಾರ್,  ಗಾಂಧಿ