Home Archive by category ಕರಾವಳಿ (Page 63)

ಮೂಡುಬಿದಿರೆ: ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : ಆಳ್ವಾಸ್ ನ ಉಷಾಗೆ ಬೆಳ್ಳಿ ಪದಕ

ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್.‌ ಆರ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ

ಮೂಡುಬಿದಿರೆ: ಅಂಚೆ ಪಾಲಕ ಅಶೋಕ್ ವಿರುದ್ಧ ವಂಚನೆ ದೂರು ದಾಖಲು

ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ ಮತ್ತು 4 ಗ್ರಾಹಕರ ವಿವಿಧ ವಿಮಾ ಪಾಲಿಸಿಗಳ ಸುಮಾರು 13.50 ಲಕ್ಷ ಹಣವನ್ನು

ಬಂಟ್ವಾಳ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದು ಸ್ವೀಕರಿಸಿದರು. ತಾಲೂಕು ಬಂಟರ

ಬೆಳ್ತಂಗಡಿ: ಬಜಿರೆ ಹೊಸಪಟ್ಣ ಶಾಲೆಯಲ್ಲಿ ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನ

ಬೆಳ್ತಂಗಡಿ: ತಾಲೂಕಿನ ಬಜಿರೆ ಗ್ರಾಮದ ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 265ನೇ ಕಾರ್ಯಕ್ರಮವಾಗಿ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗಾಗಿ ಸಸ್ಯರಾಶಿಗಳ ಮಹತ್ವ ಎಂಬ ಘೋಷಣೆಯಡಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಮಕ್ಕಳೊಂದಿಗೆ ಸಂವಾದ ನಡೆಸಿ ಪಕ್ಷಿ ಸಂಕುಲಗಳ ಉಳಿವಿನ ಮಹತ್ವದ ಬಗ್ಗೆ ಮನವರಿಕೆ ಮಾಡಿದರು. ಶಿಕ್ಷಕಿಯರು, ಮಕ್ಕಳು

ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024: ಜ.17ರಿಂದ 21ರ ವರೆಗೆ ಕ್ರಿಕೆಟ್: ಹರಾಜು ಪ್ರಕ್ರಿಯೆ

ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಹರಾಜು ಪ್ರಕ್ರಿಯೆ ಕೃಷ್ಣಾಪುರದ ಎಮ್‌ಜೆಎಮ್ ಹಾಲ್‌ನಲ್ಲಿ ನಡೆಯಿತು. ಜನವರಿ 12 ರಿಂದ 21ರ ವರೆಗೆ 32ತಂಡಗಳ ಮದ್ಯೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವು ಕೃಷ್ಣಾಪುರದ ಪ್ಯಾರಡೈಸ್ ಮೈದಾನದಲ್ಲಿ ನಡೆಯಲಿದ್ದು, ಅದರ ಬಿಡ್ಡಿಂಗ್ ಪ್ರಕ್ರಿಯೆಯು ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಮಾತನಾಡಿ,

ಮಹಾರಾಷ್ಟ್ರ: ಏಕನಾಥರದೇ ನಿಜವಾದ ಶಿವಸೇನೆ: ಸ್ಪೀಕರ್ ನಾರ್ವೇಕರ್‌ರ ವಿವಾದ ತೆರೆದ ತೀರ್ಪು

ಮಹಾರಾಷ್ಟ್ರ ವಿಧಾನ ಸಭೆಯ ಸಭಾಪತಿ ರಾಹುಲ್ ನಾರ್ವೇಕರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆಯವರ ಬಣವೇ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು. ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜೀ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೇಳಿದರು. ಬಿಜೆಪಿ ಪರ ಶಿವಸೇನೆಯನ್ನು ಒಡೆದು ಏಕನಾಥ ಶಿಂಧೆ ಮುಖ್ಯಮಂತ್ರಿ ಆದವರು. ಆಗ ಮಹಾ ಅಘಾಡಿ ಮೈತ್ರಿ ಸರಕಾರವನ್ನು ಬೀಳಿಸಲಾಗಿತ್ತು. ಉದ್ಧವ್ ಠಾಕ್ರೆಯವರ ಬಣ ಪಕ್ಷ ಬಿಟ್ಟ ಶಾಸಕರನ್ನು ಅನರ್ಹ ಗೊಳಿಸುವಂತೆ

ದೆಹಲಿ: ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಚಿಂತನ್ ಎಸ್. ಶೆಟ್ಟಿಗೆ 1 ಚಿನ್ನ, 4 ಬೆಳ್ಳಿ ಪದಕ

ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು ಸಂಕೀರ್ಣದಲ್ಲಿ ನಡೆದ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಈಜು

ಬಂಟ್ವಾಳ: ಮನೆಯೊಂದಕ್ಕೆ ನುಗ್ಗಿ ನಗ, ನಗದು ದರೋಡೆ

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಮಾತ್ರ ಇದ್ದು ಇದ್ದು, ಕಪಾಟಿನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ

ಪುತ್ತೂರು: ಅಂದ್ರಟ್ಟ ಸೇತುವೆ ಕಾಮಗಾರಿಗೆ ಎರೆಡೆರಡು ಬಾರಿ ಶಿಲಾನ್ಯಾಸ

ಪುತ್ತೂರು: ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಅಂದ್ರಟ್ಟದ ಸಂಪರ್ಕ ಸೇತುವೆಗೆ 2023 ರ ಮಾರ್ಚ್ 19ರಂದು ಆಗಿನ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಈಗಿನ ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ ಎಂದು ಶಾಂತಿಗೋಡು ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಂ ಭಟ್ ಮತ್ತು ಚಿಕ್ಕಮುಡ್ನೂರು ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದ್ರಟ್ಟದಲ್ಲಿ 2ನೇ

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ನುಡಿನಮನ

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರೊ.ಅಮೃತ ಸೋಮೇಶ್ವರರವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, ಅಮೃತರು ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಸಾಹಿತ್ಯ ಲೋಕದ ದಿಗ್ಗಜರೂ, ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಹಾಗೂ ಸಮಿತಿಯ ಗೌರವ ಸಲಹೆಗಾರರಾಗಿದ್ದು ಸಮಿತಿಗೆ ಮಾರ್ಗದರ್ಶಕರಾಗಿದ್ದರು ಎಂದು ಹೇಳಿದರು. ಸಮಿತಿಯ ಅಧ್ಯಕ್ಷರಾದ ದಿನಕರ