ಮೂಡುಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಫೆಬ್ರವರಿ 7 ಮತ್ತು 8ರಂದು ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಬಿ. ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆಳ್ವಾಸ್
ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. 20ರಿಂದ 22ರ ವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ವಾರ್ಷಿಕ ಕಬ್ಸ್-ಬುಲ್ ಬುಲ್ಸ್ ಉತ್ಸವ, ಸ್ಕೌಟ್-ಗೈಡ್ ಮೇಳ ಹಾಗೂ ರೋವರ್ಸ್-ರೇಂಜರ್ಸ್ ಸಮಾಗಮವು ಭಾನುವಾರ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆಯಿತು. ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ವಸಂತ್ ದೇವಾಡಿಗ ಅವರು ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿ ದೆಸೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಶಿಸ್ತು, ಸಮಾಜ ಸೇವೆ ಮತ್ತು ನಾಯಕತ್ವದ
ಮೂಡುಬಿದಿರೆ: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ನಡೆದ 2025–26ನೇ ಸಾಲಿನ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮೂಡುಬಿದಿರೆ ಜ್ಯೋತಿನಗರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅರ್ಪಿತಾ ಸ್ಪರ್ಧಿಸಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಸಾಧನೆಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ, ವಿದ್ಯಾರ್ಥಿವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಹಳೆವಿದ್ಯಾರ್ಥಿ
ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ
ಉಡುಪಿ:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇದರ ಉಡುಪಿ ಕಾಪು ಬ್ರಹ್ಮಾವರ ಶೌರ್ಯ ವಿಪತ್ತು ನಿರ್ವಹಣಾ ತಾಲೂಕು ಸಮಿತಿಯ ಸ್ವಯಂಸೇವಕರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಎನ್ ಡಿ ಆರ್ ಎಫ್ (NDRF) 10th ಬೆಟಾಲಿಯನ್ ವತಿಯಿಂದ ವಿಶೇಷ ತರಬೇತಿ ಕಾರ್ಯಗಾರವನ್ನು ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಆನಂದ ಸುವರ್ಣರವರು ಉದ್ಘಾಟಿಸಿದರು.ಉದ್ಘಾಟಿಸಿ
ಉಡುಪಿ : ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಭಾನುವಾರ ಮುಂಜಾನೆ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಸಮೀಪದ ಉಚ್ಚಿಲ ಕಲತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ. ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ಮಾಹಿತಿಯಂತೆ, ಮೂರು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಸಮೀಪದ
ಮಂಗಳೂರು: ಪ್ರಖ್ಯಾತ 30 ಮಾರ್ಕಿನ ಬೀಡಿಗಳ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕರಾದ ಮಂಜುನಾಥ ಪೈ ಅವರ 113 ನೇ ಜನ್ಮ ದಿನಾಚರಣೆಯನ್ನು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಸಲಾಯಿತು.ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಸುಬ್ರಾಯ ಎಂ. ಪೈ ಅವರು ಸಂಸ್ಥೆಯು ನಡೆದು ಬಂದ ದಾರಿ, ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆ, ಸಂಸ್ಥಾಪಕರ ದೂರ ದೃಷ್ಟಿಯ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕುಗಳ ಅಧಿಕಾರಿಗಳು, ತಮ್ಮ
ಕಾಪು: ಕಾಪು ತಾಲೂಕಿನ ಕಟಪಾಡಿ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ ಕೋಟೆಶ್ರೀ ನಾಗ ಬ್ರಾಮ್ಮದಿ ಪಂಚ ದೈವಿಕ ಸನ್ನಿದಿ ಕೋಟೆ ಸಭಾ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ 2.ಲಕ್ಷ ಸಹಾಯ ಧನದ ಮಂಜೂರಾತಿ ಪತ್ರವನ್ನು ಇಂದು ವಿತರಣೆ ಮಾಡಲಾಯಿತು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಅವರುಸಮಿತಿ ಅಧ್ಯಕ್ಷರಾದ ಮಧುಕರ ಮತ್ತು ಸಮಿತಿ ಪದಾಧಿಕಾರಿಗಳ ಮುಖಾಂತರ ಸಭಾ ಭವನ ನಿರ್ಮಾಣಕ್ಕೆ 2 ಲಕ್ಷ ರೂಪಾಯಿ ಸಹಾಯ ಧನದ ಮಂಜೂರಾತಿ
ಮೂಡುಬಿದಿರೆ: 2022-23ನ ಸಾಲಿನಲ್ಲಿ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಭತ್ತ( ಮುಂಗಾರು- ಮಳೆಯಾಶ್ರಿತ)ದಲ್ಲಿ ಮಹಿಳಾ ವಿಭಾಗದಲ್ಲಿ ಮೂಡುಬಿದಿರೆ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡು ಅವರು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರನ್ನು ರೂ.1.25 ಲಕ್ಷ ನಗದು ಸಹಿತ ಗೌರವಿಸಲಾಯಿತು.ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಹಾಗೂ ಉತ್ಪಾದನೋತ್ತರ ಕೃಷಿ,- ಸಶಕ್ತೀಕರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಪ್ರಶಸ್ತಿ


























