Home Archive by category ಕರಾವಳಿ (Page 837)

ಅಮೆರಿಕಾ ನಿವಾಸಿ ಭಾರತೀಯರಿಂದ ಸ್ವಾಂತಂತ್ರ್ಯ ದಿನಾಚರಣೆ

ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್‍ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ ಮೆರವಣಿಗೆ ನಡೆಯಿತು. ಮೆರವಣಿಗೆ ಬಳಿಕ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ಕಾನ್ಸಲೇಟ್ ಜನರಲ್ ರಣಧೀರ್ ಜೈಸ್ವಾಲ್ , ಪ್ರಸಿದ್ದ ಸಿನಿಮಾ ನಟಿ ಐಲಿನಾ

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ಭಯೋತ್ಪಾದಕ ಸಂಘಟನೆಗಳ ವಿರುದ್ದ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ನೀಡಿದ ಮನವಿಯಲ್ಲಿ ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಡೆಸಿ ಭಯೋತ್ಪಾದಕ ಚಟುವಟಿಕೆಗೆ ಬಳಸುತ್ತಿದ್ದಾರೆ. ಆದರೆ ಮುಸಲ್ಮಾನರ ಮದುವೆಯಾದ ಹಿಂದೂ ಹೆಣ್ಣು ಮಕ್ಕಳ ಸದ್ಯದ ಸ್ಥಿತಿಗೆ ಹೇಗಿದೆ ಎಂದು

ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಕೊರೊನಾ ವೈರಸ್ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತದೇಹದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್‌ನ ಅಪಾರ್ಟ್‌ಮೆಂಟ್‌ನಲ್ಲಿ ರಮೇಶ್ ಹಾಗೂ ಗುಣಾ ದಂಪತಿ ಆತ್ಮಹತ್ಯೆ ಪ್ರಕರಣ ಆತಂಕವನ್ನು ಮೂಡಿಸಿತ್ತು. ಡೆತ್‌ನೋಟ್ ನಲ್ಲಿ ಕೊರೊನಾ ಹಾಗೂ ಬ್ಲ್ಯಾಕ್ ಫಂಗಸ್‌ಗೆ ಹೆದರಿ ಆತ್ಮಹತ್ಯೆ

ಗಡಿ ಗ್ರಾಮದಲ್ಲಿ ಕೇರಳದ ಗ್ರಾಮಸ್ಥರು ಕೋವಿಡ್ ಲಸಿಕೆ ಪಡೆದುಕೊಳ್ಳುವಂತಿಲ್ಲ: ಸಚಿವ ಎಸ್. ಅಂಗಾರ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಪಕ್ಕದ ಕೇರಳದ ಗ್ರಾಮಸ್ಥರು ಬಂದು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅವಕಾಶವಿಲ್ಲ. ನಮ್ಮ ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸ್ಪಷ್ಟ ನಿರ್ದೇಶನ ನೀಡಿದರು. ಪುತ್ತೂರು ತಾಲೂಕಿನ ಗಡಿ ಗ್ರಾಮವಾದ ನೆಟ್ಟಣಿಗೆ ಮುಡ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಗ್ರಾಮಸ್ಥರಿಂದ ಕೇಳಿ ಬಂದ

ಹೆಚ್ಚುತ್ತಿರುವ ಲವ್ ಜಿಹಾದ್‍ : ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು

ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಸಿಟಿ ಬಸ್ ಮೇಲೆ ಬಿದ್ದ ತೆಂಗಿನ ಮರ..!

ನಗರದ ಮಲ್ಲಿಕಟ್ಟೆಯ ಸರ್ಕಲ್‌ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗಳು ಜಖಂಗೊಂಡಿವೆ. ಇನ್ನು ರಸ್ತೆಗೆ ಬಿದ್ದ ಮರದಿಂದ ತೆಂಗಿನಕಾಯಿಗಳನ್ನು ಸಾರ್ವಜನಿಕರು ಕಿತ್ತು ಕೊಂಡೊಯ್ದರು. ನಂತರ ಸಾರ್ವಕನಿಕರ ಸಹಕಾರದಲ್ಲಿ ಸಂಚಾರ ಪೊಲೀಸರು ಬಿದ್ದಿದ್ದ ತೆಂಗಿನಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದರು.

ಬೈಕಂಪಾಡಿ : ಕಮಿಷನರ್ ಗೆ ಮೆಸೇಜ್‌ ಮಾಡಿ ದಂಪತಿ ಆತ್ಮಹತ್ಯೆ

ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ. ಸುಮಾರು 10ದಿನಗಳಿಂದ ಕೋವಿಡ್  ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ