ಶೈಕ್ಷಣಿಕ ಮತ್ತು ಮೆಡಿಕಲ್ ಹಬ್ ಎಂದೇ ಗುರುತಿಸಲ್ಪಟ್ಟಿರುವ ಕುತ್ತಾರ್-ದೇರಳಕಟ್ಟೆ ಪರಿಸರದ ಪ್ರಮುಖ ರಸ್ತೆಯ ಬದಿ ಅಂದರೆ ಮದನಿ ನಗರದ ಮೂರನೆ ಅಡ್ಡರಸ್ತೆಯ ಬಳಿ ರಾಶಿ ಹಾಕಲಾಗಿದ್ದ ತ್ಯಾಜ್ಯ ವಸ್ತುವನ್ನು ಮುನ್ನೂರು ಗ್ರಾಮದ 5ನೆ ವಾರ್ಡಿನ ಸದಸ್ಯೆ ರೆಹನಾ ಭಾನು ತಡರಾತ್ರಿಯವರೆಗೂ ಸ್ವತಃ ನಿಂತು ತೆರವುಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದೊಂದು ವಾರದಿಂದ
ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಕೀರ್ಣದಲ್ಲಿ ದಿನಾಂಕ 17.09.2021 ರಂದು ಪೂರ್ವಾಹ್ನ9.೦೦ ಗಂಟೆಯಿಂದ ಮೂರನೇ ಸಾಲಿನ ಕೋವಿಡ್ ಲಸಿಕೆ ವಿತರಣಾಕಾರ್ಯಕ್ರಮ (ಪ್ರಥಮ ಹಾಗೂ ದ್ವಿತೀಯಡೋಸ್) ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಆಸಕ್ತ ಅಭ್ಯರ್ಥಿಗಳು ಆಧಾರ್‌ಕಾರ್ಡ್ ಹಾಗೂ ಪ್ರಥಮ ಲಸಿಕೆ ಪಡೆದಿದ್ದಲ್ಲಿ ಅದರ ಮಾಹಿತಿ ಪತ್ರವನ್ನು ಜೊತೆಗೆ ತಂದು
ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರ ಬದ್ಧತೆಯೊಂದಿಗೆ
ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಇರುವ ಈ ಕಾಮಗಾರಿಗೆ
ಪುತ್ತೂರು: ಶುಕ್ರವಾರ ಪುತ್ತೂರು ಹಾಗೂ ಕಡಬ ತಾಲೂಕಿನ ಸುಮಾರು 76 ಕಡೆಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದ್ದು, ನಗರಸಭೆ ವ್ಯಾಪ್ತಿಯೊಳಗೆ ಆರು ಕಡೆ ನಡೆಯಲಿದೆ. ಈ ಮೂಲಕ ನಗರಸಭಾ ವ್ಯಾಪ್ತಿಯನ್ನು ಲಸಿಕೆ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಲಸಿಕೆ ಪಡೆಯದ ಎಲ್ಲಾ ಸಾರ್ವಜನಿಕರು ಲಸಿಕೆ ಪಡೆದು ಸಹಕರಿಸುವಂತೆ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ತಿಳಿಸಿದ್ದಾರೆ. ದ.ಕ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ
ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ ಸ್ಪಂದನೆ ನೀಡಿದ ಹೆದ್ದಾರಿ ಇಲಾಖೆ ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಮೂಲಕ ಕಟೌಟ್ ತೆರವು ಕಾರ್ಯ ನಡೆದಿದೆ. ಕಟೌಟ್ ಅಳವಡಿಸಲು ಯಾವುದೇ ಸಂಸ್ಥೆಗಳು ಗುತ್ತಿಗೆ ನೀಡಿದ್ದಲ್ಲಿ ಕಂಬ ಅಳವಡಿಸುವ ಕಷ್ಟ ತಪ್ಪಿಸಲು ಹೆದ್ದಾರಿ ಪಕ್ಕದ
ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯದಿಂದ ಅವರ ಮಿದುಳು ನಿಷ್ಕ್ರೀಯಗೊಂಡಿತ್ತು. ಇದನ್ನು ತಿಳಿದ ಕವನಳ ಸಹೋದರಿ ಅಂಗಾಂಗ ದಾನಕ್ಕೆ ಮುಂದಾದರು. ಈ ಮಾಹಿತಿಯನ್ನು ಆಸ್ಪತ್ರೆಯಿಂದ ಜೀವನ ಸಾರ್ಥಕತೆ ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ
ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್‍ನ
ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಕನ್ನಡ ಮೂಲದ ಅನಾರೋಗ್ಯಪೀಡಿತ ಮಗುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ಆಂಬುಲೆನ್ಸ್‌ನ ಟಯರ್ ಏಕಾಏಕಿ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ


















