Home Archive by category ಕರಾವಳಿ (Page 841)

ಕುಟುಂಬದ ಇಚ್ಛೆಯಂತೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ರವಾನೆ

ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ

ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಉಡುಪಿಗೆ ರವಾನೆ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು : ದ. ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ

ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,

Mangaluru girl tops CA exam

Mangaluru girl Ruth Clare D’silva has secured All India first rank (Old scheme) in Chartered Accountants (CA) July 2021 examination conducted by the Institute of Chartered Accountants of India (ICAI). The results were declared on Monday. ‘ She is the first candidate to secure top rank in CA exams from this region. She did the […]

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಗಣ್ಯರಿಂದ ಸಂತಾಪ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ವಿಧಿವಶ

ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ನಟನ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವನಟಿ ಸಿಂಚನಾ ಚಂದ್ರಮೋಹನ್

ನಟನೆ ಎಂಬುವುದು ಒಂದು ಕಲೆ ಆ ಕಲೆಯನ್ನು ಪ್ರದರ್ಶಿಸುವ ಜಾಣ್ಮೆ ಎಲ್ಲರಲ್ಲಿಯೂ ಇರುವುದಿಲ್ಲ, ಇನ್ನೂ ಕೆಲವರಿಗೆ ಅವಕಾಶ ದೊರೆಯುವುದಿಲ್ಲ, ಅದರೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡವರು ಉತ್ತಮ ನಟನಾಗಬಹುದು. ನಟನೆ ಎಂಬುವುದು ಜೀವವಿಲ್ಲದ ಪಾತ್ರಕ್ಕೆ ಜೀವ ತುಂಬುವುದು. ತನನ್ನು ತಾನು ಆ ಪಾತ್ರಕ್ಕೆ ಅರ್ಪಿಸಿಕೊಳ್ಳಬೇಕಾಗುತ್ತದೆ. ಎಂತಹ ಪಾತ್ರವಾದರು ನಿರ್ವಹಿಸುತ್ತೇನೆ ಎಂಬ ಗಟ್ಟಿ ನಿರ್ಧಾರ ನಮ್ಮಲ್ಲಿರಬೇಕು ಆಗ ಮಾತ್ರ ಆ ಪಾತ್ರಕ್ಕೆ ಜೀವ ಬರುತ್ತದೆ. ಅಂತಹ

ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ ತಳ್ಳಾಟ, ನೂಕಾಟ ನಡೆಯಿತು.ಪ್ರತಿಭಟನೆ ನಿರತ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸಬೇಕೆಂದು

ಮಹಿಳಾ ಸುರಕ್ಷತಾ ಜಾಗೃತಿ ಅಭಿಯಾನ: ಮಹಿಳೆಯರ ಸುರಕ್ಷತೆ ದೇಶದ ಹೊಣೆ

ನಮ್ಮ ದೇಶದ ಸಂಸ್ಕೃತಿಯಲ್ಲಿ ಮಹಿಳೆಯರನ್ನು ಹೆಚ್ಚಾಗಿ ಗೌರವಿಸಲಾಗುತ್ತದೆ. ಇಂದು ಮಹಿಳೆಯರು ಹಲವಾರು ರಂಗಗಳಲ್ಲಿ, ವಿವಿಧ ವ್ಯವಹಾರ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮನ್ನು ರಾಜಕೀಯ ರಂಗದಲ್ಲಿಯೂ ಪ್ರತಿನಿಧಿಸುತ್ತಿದ್ದಾರೆ. ಹಾಗಿದ್ದರೂ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ದಿನೇ ದಿನೇ ಹೆಚ್ಚುತ್ತಿರುವ ಆತಂಕಕಾರಿ ಘಟನೆಗಳು, ಅವರ ಮೇಲೆ ಅವ್ಯಾಹತವಾಗಿ ನಡೆಯುತ್ತಿರುವ ದೌರ್ಜನ್ಯಗಳು ನಮ್ಮ ಸಭ್ಯ ಸಮಾಜವನ್ನು ಕಂಗೆಡಿಸಿದೆ. ನಮ್ಮ

ಪುತ್ತೂರಿನಲ್ಲಿಂದು ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ