ಕಾಣಿಯೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ
ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ
ಮಂಗಳೂರಿನ ಖ್ಯಾತ ಸಮಾಜ ಸೇವಾ ಸಂಸ್ಥೆಯಾದ ಟೀಂ ಬಿ-ಹ್ಯೂಮನ್ ಇದರ ಸಂಸ್ಥಾಪಕರಾದ ಆಸಿಫ್ ಡೀಲ್ಸ್ ರವರು ಹಿದಾಯ ಫೌಂಡೇಶನ್ ನ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಸಕ್ರಿಯವಾಗಿ ಹಿದಾಯ ಫೌಂಡೇಶನ್ ಸದಸ್ಯರಾಗಿದ್ದು ಪ್ರಸ್ತುತ ವೈಸ್ ಚೇರ್ಮನ್ ಹಾಗೂ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಷ್ಟು ವರ್ಷಗಳಿಂದ ಯಾವುದೇ ಪೂರ್ವಾಗ್ರಹವಿಲ್ಲದೆ ಎರಡೂ ಸಂಸ್ಥೆಗಳಲ್ಲಿ ಸಮಾನವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಸೇವೆಗೈಯುತ್ತಿದ್ದುದು
ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ
ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣಕ್ಕೆ ಬೇಡಿಕೆ
ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸುವಾಗ ಸರಕಾರ ಸಬ್ಸಿಡಿ ನೀಡುತ್ತಿದೆ. ಆ ಸಬ್ಸಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಬೇಕು
ನಂದಿಕೂರಿನ ದೇವರಕಾಡು ಪ್ರದೇಶವನ್ನು ನೆಲಸಮ ಮಾಡಿ ಕಾಮಗಾರಿ ನಡೆಸುತ್ತಿರುವ ಕಂಪನಿಯೊಂದು ಗ್ರಾ.ಪಂ.ಗೆ ತಪ್ಪು ಮಾಹಿತಿ ನೀಡಿ ತಮಗೆ ಬೇಕಾದಂತೆಲ್ಲಾ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನನ್ವಯ ಸಭೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಕಂಪನಿಗೆ ಪಲಿಮಾರು ಗ್ರಾ.ಪಂ. ಸೂಚನೆ ನೀಡಿದೆ. ಅಡುಗೆ ಎಣ್ಣೆ ಕಂಪನಿ ಎಂಬುದಾಗಿ ಆಡಳಿತ ಸಮಿತಿ ಅಸ್ಥಿತ್ವದಲ್ಲಿ ಇಲ್ಲದ ವೇಳೆ ಆಡಳಿತಾಧಿಕಾರಿಯಿಂದ ಯಾವುದೇ ಪೂರಕ ಮಾಹಿತಿ ನೀಡದೆ ಅನುಮತಿ ಪತ್ರ ಪಡೆದ
ಭಾರತದಲ್ಲಿ ಅತಿ ಹೆಚ್ಚು ಅವಾರ್ಡ್ ಗಳನ್ನು ಪಡೆದಿರುವ ಅತೀ ದೊಡ್ಡ ರೇಡಿಯೋ ನೆಟ್ವರ್ಕ್ ,93.5 ರೆಡ್ ಎಫ್ ಎಂ . ಮೈಸೂರು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಹಾಗೂ ಕಲಬುರ್ಗಿ ನಗರಗಳಲ್ಲಿ ಪ್ರಸ್ತುತಪಡಿಸುತ್ತಿದೆ “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”. ಕೇಳುಗರಿಗೆ ಅತಿ ಹೆಚ್ಚು sಸೂಪರ್ ಹಿಟ್ ಹಾಡುಗಳನ್ನು ದಿನ ಪೂರ್ತಿ ಪ್ರಸಾರ ಮಾಡುವ ಸಲುವಾಗಿ ಈ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ನಾನ್ ಸ್ಟಾಪ್ 8 ಹಾಡುಗಳನ್ನು (8 ಹಾಡುಗಳ ಸರಮಾಲೆಯಾಗಿ )
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ
ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ


















