Home Archive by category ಕರಾವಳಿ (Page 844)

ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ 3.96 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿಪೂಜೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಮರಕಡ 14ನೇ ವಾರ್ಡಿನಲ್ಲಿ ವಿಮಾನ ನಿಲ್ದಾಣ ರಸ್ತೆಗೆ ತಡೆ ಗೋಡೆ ಹಾಗೂ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಎ .ಆರ್ ನಿಧಿಯಿಂದ ಮತ್ತು ಸಾಮಾನ್ಯ ನಿಧಿಯಿಂದ 3.96 ಕೋಟಿ ಅನುದಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ

ವಿನ್ಯಾಸ ಅನುಮೋದನೆ ಶುಲ್ಕ ಕಡಿಮೆ ಮಾಡಿರುವುದು ಸ್ವಾಗತಾರ್ಹ:ಕ್ರೈಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ನಗರ ಯೋಜನಾ ವಿಭಾಗಕ್ಕೆ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆಯ ಶುಲ್ಕವನ್ನು ಪರಿಷ್ಕರಿಸಿರುವುದನ್ನು ಕ್ರೆಡಾಯ್ ಮಂಗಳೂರಿನ ಅಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿದ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್, ಜನ ಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೂಡಾದ

ಆಳ್ವಾಸ್ ವಿದ್ಯಾರ್ಥಿ ಗಣೇಶ್ ಎಸ್‌ ಎಸ್‌ ಎಲ್‌ ಸಿಯಲ್ಲಿ ಟಾಪರ್

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಣೇಶ್ ಹನುಮಂತಪ್ಪ ವೀರಪುರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಮೂಲತಃ ಬಾಗಲಕೋಟೆಯ ಇಳಕಲ್ಲ್‌ನ ಗಣೇಶ್, ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಕಳೆದ 5 ವರ್ಷದಿಂದ ಉಚಿತ ಶಿಕ್ಷಣ ಪಡೆಯುತ್ತಿದ್ದಾನೆ. ಈತ ಹನುಮಂತಪ್ಪ-ಯಶೋಧ ದಂಪತಿಯ ಪುತ್ರ. 625  ಅಂಕದ ನಿರೀಕ್ಷೆ ಇರಲಿಲ್ಲ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡಿಕೊಳ್ಳುತ್ತೇನೆ.

ಕರಾವಳಿಯಲ್ಲಿಅಗಸ್ಟ್ 12ರವರೆಗೆ ಭಾರೀ ಮಳೆ ಸಾಧ್ಯತೆ

 ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.  

ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್‍ಗಳು ಬಂದ್: ಜಿಲ್ಲಾಧಿಕಾರಿ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ, ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‍ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೋನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಗಮನಿಸಲಾಗಿದೆ.  ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಟ ಒಂದು ಮೀಟರ್ ಸಾಮಾಜಿಕ ಅಂತರ ಸಾಧ್ಯತೆ ಇರುವುದಿಲ್ಲ,

ಎಸೆಸೆಲ್ಸಿ ಫಲಿತಾಂಶ: ಬಂಟ್ವಾಳದ ಎನ್. ಪ್ರತೀಕ್ ಮಲ್ಯ ಪೂರ್ಣ ಅಂಕ

ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿರುವ ಎಸ್‌ವಿಎಸ್ ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ 625 ಅಂಕ ಪಡೆದುಕೊಂಡು ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಇಲ್ಲಿನ ತ್ಯಾಗರಸ್ತೆಯ ನಿವಾಸಿ ಎನ್. ವೆಂಕಟೇಶ್ ಮಲ್ಯ ಹಾಗೂ ಎನ್.ರಾಧಿಕ ಮಲ್ಯ ಅವರ ಪುತ್ರರಾಗಿರುವ ಪ್ರತೀಕ್ ಮುಂದೆ ಉದ್ಯಮಿಯಾಗುವ ಗುರಿ ಹೊಂದಿದ್ದಾರೆ. ತನ್ನ ಸಾಧನೆಗೆ ಶಿಕ್ಷಕರ ಪ್ರೋತ್ಸಾಹ, ಪೋಷಕರು, ಮನೆಯವರ ಬೆಂಬಲವೇ

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಕಾಪಿಗುಡ್ಡೆ ಅಯ್ಯಪ್ಪ ಮಂದಿರದ ಮೇಲ್ಚಾವಣಿ ಲೋಕಾರ್ಪಣೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಅವರು 35 ಲಕ್ಷದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಾದ ಅಕಾಶಭವನ ಲಾಸ್ಟ್ ಸ್ಟಾಪ್ ಬಳಿ ಅಡ್ಡ ರಸ್ತೆ 15 ಲಕ್ಷ ,ಕಾಪಿಗುಡ್ಡೆ ಲಕ್ಷ್ಮಣ ನಾಯರ್ ಮನೆಯ ಬಳಿ ಕಾಂಕ್ರಿಟ್ ರಸ್ತೆ 10 ಲಕ್ಷ,ಮಂಜಲ ಕಟ್ಟೆ ಕಾಂಕ್ರಿಟ್ ರಸ್ತೆ ವಿಸ್ತರಣೆ 5 ಲಕ್ಷ ,ಶಿವನಗರ 4 ನೆಯ ಅಡ್ಡ ರಸ್ತೆಗೆ ಕಾಂಕ್ರಿಟ್ 5 ಲಕ್ಷದ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ಹಾಗೂ ಕಾಪಿಗುಡ್ಡೆ ಶ್ರೀ ಅಯ್ಯಪ್ಪ […]

ಎಸ್ ಎಸ್ ಎಲ್ ಸಿ ಫಲಿತಾಂಶ: ಪುತ್ತೂರಿನ ಬೆಥನಿ ಸ್ಕೂಲ್ ನ ತನಿಶಾ ರೈ ರಾಜ್ಯಕ್ಕೆ ಪ್ರಥಮ

ಪುತ್ತೂರು: ಎಸ್ ಎಸ್ ಎಲ್. ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಬೆಥನಿ ಪ್ರೌಢಶಾಲಾ ವಿದ್ಯಾರ್ಥಿನಿ ತನಿಶಾ ರೈ 625 ರಲ್ಲಿ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಸಂಪ್ಯದ ಪ್ರಸನ್ನ ಕುಮಾರ್ ರೈ,ಜ್ಯೋತಿ ಪಿ ರೈ ದಂಪತಿ ಪುತ್ರಿಯಾಗಿದ್ದಾಳೆ.

ಎಸೆಸೆಲ್ಸಿ ಫಲಿತಾಂಶ: ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಕಡಬ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ತೋರಿದ್ದಾರೆ.ಅನನ್ಯ.ಎಂ.ಡಿ ಮತ್ತು ವೆನಿಸಾ ಶೆರಿನಾ ಡಿಸೋಜಾ ಈ ಸಾಧನೆ ತೋರಿದ ವಿದ್ಯಾರ್ಥಿನಿಯರಾಗಿದ್ದು, ಲಾಕ್ ಡೌನ್ ನಿಂದಾಗಿ ಶಾಲೆ ಮುಚ್ಚಿ ಸರಿಯಾದ ರೀತಿಯ ತರಗತಿ ನಡೆಯದ ಸಮಯದಲ್ಲೂ ತನ್ನ ಪರಿಶ್ರಮದಿಂದಾಗಿ ಈ ಸಾಧನೆ

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ