ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ಸ್, ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೇಷನ್ ಕಿಟ್, ಔಷಧ ವಿತರಣೆ ಮಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರ ಮಹಾನ್ ಕಾರ್ಯವನ್ನು ಪರಿಗಣಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಉಡುಪಿ
ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು ಭಾರತದ ಮಹಿಳಾ ಹಾಕಿಗೆ ಹೊಸದೊಂದು ಸಂಭ್ರಮವನ್ನು ತಂದಿದ್ದಾರೆ. `ಗೆಲುವಿಗೆ ನೂರು ವಾರಿಸುದಾರರು` ಎಂಬಂತೆ ಭಾರತದ ಹಾಕಿ ತಂಡದ ಸಾಧನೆಗೂ ಈಗ ಹಲವು ವಾರಿಸುದಾರರು. ಈ ರೀತಿಯ ವಿದ್ಯಾಮಾನಗಳು ಯಾವುದೇ ಕ್ಷೇತ್ರದ ಗೆಲವಿನ ಸಂದರ್ಭದಲ್ಲೂ ಸಾಮಾನ್ಯ. ಆದರೆ
ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್‌ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ. ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇತರ ತಾಲೂಕುಗಳೊಂದಿಗೆ ಸುಳ್ಯವನ್ನು ಹೋಲಿಸಿದರೆ, ಸುಳ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗಿದ್ದು ಇದಕ್ಕೆ ಇಲ್ಲಿನ ಜನರು ನೆರೆಯ ಕಾಸರಗೋಡು
ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು,ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಲಿದೆ ಎಂದು ರೈತ ಕಾರ್ಮಿಕ ಸಂಘಟನೆಗಳಾದ CITU – AIKS ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿದೆ. ಕೃಷಿ ರಂಗದ
ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.
ಮುಲ್ಕಿ:ಗ್ರಾಮೀಣ ಪ್ರದೇಶದ ಸಹಕಾರಿ ಕ್ಷೇತ್ರದಲ್ಲಿ ಜನಸೇವೆ ಮೂಲಕ ರಂಗನಾಥ ಶೆಟ್ಟಿಯವರ ಸಾಧನೆ ಅನುಕರಣೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಮುಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕರಾಗಿ ಆಯ್ಕೆಯಾದ ಮುಲ್ಕಿ ವಿಜಯ ಸೊಸೈಟಿಯ ಅಧ್ಯಕ್ಷ ರಂಗನಾಥ ಶೆಟ್ಟಿಯವರನ್ನು ಗೌರವಿಸಿ ಮಾತನಾಡಿದರು.ಕಳೆದ ಹಲವಾರು
ಬಳ್ಳಾರಿ: ರಾಜ್ಯದ ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಖಾತೆ ಹಂಚಿಕೆ ಬೆನ್ನಲ್ಲೆ ಗಣಿನಾಡಿನ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಳಿದ ಖಾತೆ ಕೊಟ್ಟಿಲ್ಲ , ಕೊಟ್ಟರೆ ಸರಿ ಇಲ್ಲದಿದ್ದರೆ ಶಾಸಕನಾಗಿಯಷ್ಟೇ ಮುಂದುವರೆಯುವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಾನು ಕೇಳಿದ ಖಾತೆಯನ್ನು ನೀಡಿಲ್ಲ. ಇದು ನನಗೆ ಮಾಡಿದ ಅವಮಾನ ಎನ್ನಲ್ಲ. ನನಗೆ ನಿರಾಸೆಯಾಗಿದೆ
ಬಂಟ್ವಾಳ: ಬೊರೆವೆಲ್ ಕೊರೆಸುವ ವಾಹನ ಬಂದು ರಸ್ತೆ ಹಾಳಾಗಿದೆ ಎಂದು ಆರೋಪಿಸಿ ವ್ಯಕ್ತಿಯೊರ್ವರಿಗೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆಯೊಡ್ಡಿದ ಘಟನೆ ಸಂಗಬೆಟ್ಟು ಗ್ರಾಮದ ಅಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಲ್ವಿನ್ ರಿಚರ್ಡ್ ಫಲೇರಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸ್ಥಳೀಯ ನಿವಾಸಿ ಅನಿಲ್ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.ರಿಚರ್ಡ್ ಫಲೇರಾ ತನ್ನ ತಂದೆಯಿಯೊಂದಿಗೆ ಅಳಿಕೆ ಎಂಬಲ್ಲಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಸೇರ್ಪಡೆಗೊಂಡ ಸಚಿವರಿಗೆ ಇದೀಗ ಖಾತೆಗಳನ್ನು ಹಂಚಲಾಗಿದೆ. ಸುನಿಲ್ ಕುಮಾರ್ ಅವರಿಗೆ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಅರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ ಬಿ.ಸಿ.ನಾಗೇಶ್ -ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶ್ರೀರಾಮುಲು- ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಮುರುಗೇಶ್ ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಪ್ರಭುಚೌಹಾಣ್- ಪಶುಸಂಗೋಪನೆ ಎಸ್ಟಿ ಸೋಮಶೇಖರ್ –
ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು


















