Home Archive by category ಕರಾವಳಿ (Page 847)

ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಟ್ಟುನಿಟ್ಟಿನ ಕರ್ಪ್ಯೂ ಪಾಲನೆಯಾಗದ ಹಿನ್ನಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ಸರಕಾರಿ ಅಂಗಡಿ, ಬಸ್, ಕಾರು, ರಿಕ್ಷಾ ಸಹಿತ ಖಾಸಗಿ ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಕೆಲವೊಂದು ಅಂಗಡಿ,

ನ್ಯಾನೋ ವಿಜ್ಞಾನ ಮತ್ತು ನ್ಯಾನೊ ತಂತ್ರಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳ ಕುರಿತು ಅಂತರಾಷ್ಟ್ರೀಯ ವಿಚಾರ ಸಮ್ಮೇಳನ

ಜಿ.ಹೆಚ್‌.ಎಸ್‌. ರಸ್ತೆ: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ವತಿಯಿಂದನ್ಯಾನೊ ವಿಜ್ಞಾನಮತ್ತು ನ್ಯಾನೊತಂತ್ರಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳ ಕುರಿತ ವಿಚಾರಸಮ್ಮೇಳನವನ್ನು ನಗರದ ಜಿ.ಹೆಚ್.‌ಎಸ್‌.ನಲ್ಲಿರುವಹೋಟೇಲ್‌ ಶ್ರೀನಿವಾಸ್‌ನಲ್ಲಿ (ಆನ್‌ಲೈನ್‌ ವೇದಿಕೆಯಮೂಲಕ) ಆಯೋಜಿಸಲಾಯಿತು. ಈ ವಿಚಾರಸಮ್ಮೇಳನವನ್ನು ಸಿಂಗಾಪುರದ ನ್ಯಾಶನಲ್‌ ಯೂನಿವರ್ಸಿಟಿಯಫ್ರೆಂಗ್ ನಿರ್ದೇಶಕಡಾ ಸೀರಾಮ್ ರಾಮಕೃಷ್ಣ ಅವರು

ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚಿ:ಸಚಿವ ಎಸ್. ಅಂಗಾರ ಸೂಚನೆ

ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಸೂಚಿಸಿದರು.ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ 10.000 ರೂ. ಪರಿಹಾರ ಮೊತ್ತವನ್ನು ಶೀಘ್ರವಾಗಿ ಮತ್ತು ಕಡ್ಡಾಯವಾಗಿ ಆಯಾ ಕುಟುಂಬಗಳಿಗೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಅವರು ಮಾತನಾಡಿ, ಜಿಲ್ಲೆಯಲ್ಲಿ ನೆರೆಯಿಂದಾಗಿ ಹೆಚ್ಚಿನ

ಕೋವಿಡ್ ಪಾಸಿಟಿವಿಟಿ ಕಡಿಮೆ ಮಾಡಲು ಅಗತ್ಯ ಕ್ರಮಕೈಗೊಳ್ಳಿ: ಸಚಿವ ಅಂಗಾರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಪಾಸಿಟಿವಿಟಿಯನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಎಸ್. ಅಂಗಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಆ.6ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೋವಿಡ್ ಹಾಗೂ ಅದರ ಪಾಸಿಟಿವಿಟಿಯನ್ನು

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ಅಗಸ್ಟ್‌ 23ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್‌ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿಂದು ತಜ್ಞರು, ಶಿಕ್ಷಣ ತಜ್ಞರು, ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ರಾಜ್ಯದಲ್ಲಿ ಹಂತ

ಚೌತಿ ಯ ಗಣಪನನ್ನೂ ಕಾಡಿದ ಜಿ ಎಸ್‍ ಟಿ : ತತ್ತರಿಸಿದ ಗಣಪತಿ ವಿಗ್ರಹ ತಯಾರಾಕರು

ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ. ಸ್ಪೆಷಲ್ ರಿಪೋರ್ಟ್… ಹೌದು ಮಂಗಳೂರಿನ ಮಣ್ಣಗುಡ್ಡೆಯ ರಾವ್ ಪ್ಯಾಮಿಲಿ, ಕಳೆದ 92 ವರ್ಷದಿಂದ,

ಉರ್ ದ ಮಾರಿ ಗಿಡಪೆರೆ ಬತ್ತೆ ಆಟಿ ಕಳಂಜೆ

ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ

ಆಗಸ್ಟ್ 14ರಂದು ಲೋಕ ಅದಾಲತ್

ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಲೋಕ ಅದಾಲತ್‍ನಲ್ಲಿ ರಾಜಿ ಮೂಲಕ ಪರಿಹರಿಸಲಾದ ಪ್ರಕರಣಗಳಲ್ಲಿ ಮೇಲ್ಮನವಿಗೆ