ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ ಸಮೀಪದ ಬೆಕ್ಕ ಗ್ರಾಮದ ಕೆಂಪೇಗೌಡ ಹಾಗೂ ಜಯಮ್ಮ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಇನ್ನು
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ
ಮಂಜೇಶ್ವರ : ಕಳೆದ ಕೆಲವು ದಿವಸಗಳಿಂದ ಕರ್ನಾಟಕ ಸರಕಾರ ಕೇರಳ ಗಡಿ ಭಾಗಗಳಲ್ಲಿ ಕಠಿಣವಾದ ನಿಯಂತ್ರಣಗಳನ್ನು ಹೇರುತ್ತಿದ್ದು ಇದರಿಂದಾಗಿ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ದಿನನಿತ್ಯ ಹೊಟ್ಟೆಪಾಡಿಗಾಗಿ ಮಂಗಳೂರನ್ನು ಆಶ್ರಯಿಸುತ್ತಿರುವ ಸಹಸ್ರಾರು ಮಂದಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ರೋಗಿಗಳ ಹೆಚ್ಚಳವಾಗುತ್ತಿರುವುದು ಅಲ್ಲಿಯಾ ಜನತೆ ಕೋವಿಡ್ ಮಾನದಂಡಗಳನ್ನು ಉಲ್ಲಂಘಿಸುವುದರಿಂದ ಹೊರತು ಕೇರಳದಿಂದ ಸಾಗುವ ಜನತೆಯಿಂದಲ್ಲ.
ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ
Srinivas University College of Engineering and Technology has organized international conference on Emerging trends in Nano science and Nanotechnology on 06th and 07th of August 2021. Dr Seeram Ramakrishna – FREng Director, National University Singapore. He is the top most scientists in the field of Nanotechnology and he has published more 1000 research papers in […]
ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಎಂಜಿನಿಯರಿಂಗ್‌ಆಂಡ್ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ ಡಾ ಸೀರಾಮ್ ರಾಮಕೃಷ್ಣ ಹಾಗೂ ಕೇರಳದ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಾಬು ಥಾಮಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಶ್ರೀನಿವಾಸ್ ವಿವಿಯ
ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್‌ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಅಧೀಕ್ಷಕರು ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ|| ಲಕ್ಷ್ಮೀಶ ಉಪಾಧ್ಯರು ಮಾತನಾಡಿ “ಮಾತುರೇವ ಪಿಬೇತ್ ಸ್ತನ್ಯಂ” (ಅಮ್ಮನ ಹಾಲನ್ನೆ ಮಗುವಿಗೆ
ಉಡುಪಿ : ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನ ನೈತಿಕತೆ ಅತಿ ಮುಖ್ಯವಾಗುತ್ತದೆ. ಇದು ಸಂಶೋಧನೆಯಲ್ಲಿ ಸತ್ಯಶೋಧನೆಗೆ ದಾರಿಯಾಗುತ್ತದೆ. ಸಂಶೋಧಕನಲ್ಲಿ ಕರ್ತವ್ಯ ನಿಷ್ಠೆ ಇದ್ದಲ್ಲಿ ಕ್ಷೇತ್ರಕಾರ್ಯದ ಮೂಲಕ ಅಧ್ಯಯನ ಮಾಡಿ ಬೆಳಕಿಗೆ ಬಂದ ವಿಚಾರವನ್ನು ನಿರ್ಭೀತಿಯಿಂದ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ. ಒಳ್ಳೆಯ ಸಂಶೋಧನಾ ವರದಿಯು ಸರಕಾರಕ್ಕೆ ಮುಂದಿನ ಯೋಜನೆಗಳನ್ನು ರೂಪಿಸಲು ದಾರಿದೀಪವಾಗುತ್ತದೆ ಎಂದು ಖ್ಯಾತ ಸಮಾಜಶಾಸ್ತ್ರಜ್ಞ, ನಿವೃತ್ತ ಪ್ರಾಂಶುಪಾಲ ಡಾ.
ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಬರ್ಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ


















