ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಭಾವಿ ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಹೊಸೂರು ಶಾಸಕ ವೈ.ಪ್ರಕಾಶ್ ಅವರ ಪುತ್ರ ಕರುಣಾಸಾಗರ್, ಭಾವಿ ಸೊಸೆ ಬಿಂದೂ(28), ಕೇರಳ ಮೂಲದ ಅಕ್ಷಯ್
ಪುತ್ತೂರು; ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ದುರಸ್ಥಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಪಟ್ಟ ಓರ್ವನನ್ನು ಮಧು (36) ಎಂದು ಹೇಳಲಾಗಿದೆ. ಈತ ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮೆಕಾನಿಕ್ ಆಗಿರುವ
ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಒಂದಷ್ಟು ಮಾರ್ಗಸೂಚಿಗಳನ್ನು ಕಳುಹಿಸಿದೆ. ಧಾರ್ಮಿಕ ಆಚರಣೆಯನ್ನು ನಡೆಸುವ ಬಗ್ಗೆ ಸರಕಾರಕ್ಕೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಆಚರಣೆಯ ಜತೆಗೆ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಆಚರಣೆಗಳು ಎಷ್ಟು ವೈಭವವಾಗಿ ನಡೆಯಬೇಕು ಎನ್ನುವುದನ್ನು ಅರಿತು, ಪ್ರಧಾನಿಯವರು ತಿಳಿಸಿದಂತೆ ನಾವೇ ಸ್ವತಃ ಸ್ವಯಂ ನಿಯಂತ್ರಣ ಮಾಡಿಕೊಳ್ಳಬೇಕು. ಸರಕಾರದ
ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ
ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು ಧಿಕ್ಕಾರ ಘೋಷಣೆ ಕೂಗಿದ್ದಾರೆ. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸಿಎಫ್‌ಐ
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ ಸೇವಕರಾದ ಲೀಲಾಧರ್ ಶೆಟ್ಟಿ ಮಜೂರು,ಹಾಸ್ಯ ಭಾಷಣಕಾರ್ತಿ ಸಂಧ್ಯಾ ಪೈ ಅವರು ನಿಹಾಲ್ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸಂಧ್ಯಾ ಪೈ ನಿಹಾಲ್ ತನ್ನ
ಹಿಂದೂಸ್ತಾನಿಯ ಖ್ಯಾತ ಸಂಗೀತ ಕಲಾವಿದೆ, ಕರಾವಳಿಯ ಪ್ರತಿಭೆ ವಿದ್ವಾನ್ ವಿಭಾ ಎಸ್.ನಾಯಕ್ ಅವರು ಸಂಗೀತ ನಿರ್ದೇಶಿಸಿ, ತಾವೇ ಹಾಡಿರುವ ’ರಂಗ ನಿನ್ನ’ ಎಂಬ ಶ್ರೀಕೃಷ್ಣ ದೇವರ ಕುರಿತ ಭಕ್ತಿ ಪ್ರಧಾನ ಅಲ್ಬಾಂ ಸಾಂಗ್ ಅನಾವರಣಗೊಂಡಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ರಂಗ ನಿನ್ನ ಅಲ್ಬಾಂ ಸಾಂಗ್ ಬಿಡುಗಡೆ ಸಮಾರಂಭ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಠಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣನ ಕುರಿತು ಶ್ರೀ ವ್ಯಾಸರಾಯರು ಬರೆದಿರುವ ಹಾಡಿಗೆ ವಿದ್ವಾನ್ ವಿಭಾ ಎಸ್.ನಾಯಕ’
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ.ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು,


















